Evening Digest: ಹೆಲಿಕಾಪ್ಟರ್ ಅಪಘಾತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ: ದುರಂತಕ್ಕೆ ಕಾರಣವಾಗಿದ್ದೇನು? ಇಂದಿನ ಪ್ರಮುಖ ಸುದ್ದಿ

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

Evening digest

Evening digest

  • Share this:
ಸೇನಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಸಿಬ್ಬಂದಿ ಮತ್ತು ಕನಿಷ್ಠ ಒಬ್ಬ ಕುಟುಂಬದ ಸದಸ್ಯರನ್ನು ಹೊತ್ತ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಜನರಲ್​ ಸೇರಿದಂತೆ 11 ಮಂದಿ ಸಾವನ್ನಪ್ಪಿರುವ  ಬಗ್ಗೆ ಭಾರತೀಯ ವಾಯು ಸೇನೆ ದೃಢಪಡಿಸಿದೆ.  ಹೆಲಿಕಾಪ್ಟರ್​​ ಅಪಘಾತದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ಘಟನೆ ಕುರಿತು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದ್ದು, ಜನರಲ್​ ಸಾವಿಗೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್​ ರಾವತ್​ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ್​ ಸಿಂಗ್​ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ದೇಶದ ಸೇವೆಗೆ ಅವರು ಸಲ್ಲಿಸಿದ ಕೊಡುಗೆ ಅಪಾರವಾಗಿದ್ದು, ಅವರ ಸಾವು ವಿಷಾದ ತಂದಿದೆ ಎಂದು ತಿಳಿಸಿದ್ದಾರೆ.

ಬಿಪಿನ್​ ರಾವತ್​ ಹಿನ್ನೆಲೆ

1958, ಮಾರ್ಚ್ 16ರಂದು ಉತ್ತರಾಖಂಡ್​ನ ಪೌರಿಯಲ್ಲಿ ಬಿಪಿನ್ ರಾವತ್ ಅವರು ಜನಿಸಿದರು.. ಬಿಪಿನ್ ರಾವತ್ ಅವರ ತಂದೆ ಲಕ್ಷ್ಮಣ್ ಸಿಂಗ್ ರಾವತ್ ಅವರು ಕೂಡ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.. ಡೆಹರಾಡೂನ್ ನ ಕೇಂಬ್ರಿಡ್ಜ್ ಹಾಲ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಶಿಮ್ಲಾದ ಸೆಂಟ್.ಎಡ್ವರ್ಡ್ ಸ್ಕೂಲ್ನಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದ ಬಿಪಿನ್ ರಾವತ್ ಅವರು ಡೆಹರಾಡೂನ್ ನಲ್ಲಿ ಮಿಲಿಟರಿ ಅಕಾಡೆಮಿಯಲ್ಲಿ ಸೇರ್ಪಡೆಯಾಗಿ ಸೈನ್ಯದ ಬಗ್ಗೆ ತರಬೇತಿ ಪಡೆದುಕೊಂಡಿದ್ರು.

ಬಿಪಿನ್ ರಾವತ್ ವೃತ್ತಿಜೀವನ

1978ರಲ್ಲಿ ಗೂರ್ಖಾ ರೆಜಿಮೆಂಟ್ ಮೂಲಕ ಸೇನೆಗೆ ನಿಯುಕ್ತಿಗೊಂಡ ಬಿಪಿನ್ ರಾವತ್ ರಾವತ್ ಬ್ರಿಗೇಡ್ ಕಮಾಂಡರ್, ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (ಜಿಒಸಿ-ಸಿ) ಸದರ್ನ್ ಕಮಾಂಡ್, ಮಿಲಿಟರಿ ಕಾರ್ಯಾಚರಣೆ ನಿರ್ದೇಶನಾಲಯದಲ್ಲಿ ಜನರಲ್ ಸ್ಟಾಫ್ ಆಫೀಸರ್ ಗ್ರೇಡ್ 2, ಕರ್ನಲ್ ಮಿಲಿಟರಿ ಕಾರ್ಯದರ್ಶಿ ಮತ್ತು ಉಪ ಮಿಲಿಟರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಿಲಿಟರಿ ಕಾರ್ಯದರ್ಶಿಯ ಶಾಖೆ ಮತ್ತು ಜೂನಿಯರ್ ಕಮಾಂಡ್ ವಿಂಗ್‌ನಲ್ಲಿ ಹಿರಿಯ ಬೋಧಕರಾಗಿದ್ರು. ಇನ್ನು ಯುನೈಟೆಡ್ ನೇಷನ್ಸ್ ಪೀಸ್ ಕೀಪಿಂಗ್ ಫೋರ್ಸ್‌ನ ಭಾಗವಾಗಿದ್ದಾರೆ ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಬಹುರಾಷ್ಟ್ರೀಯ ಬ್ರಿಗೇಡ್‌ಗೆ ಕಮಾಂಡರ್ ಆಗಿ ಭಾರತೀಯ ಸೈನ್ಯಕ್ಕೆ ಸೇವೆ ಸಲ್ಲಿಸಿದ್ರು. ಅಲ್ಲಿಂದ ಮುಂದೆ 2016ರಲ್ಲಿ ಭಾರತೀಯ ಮೂರು ಸೇನಾಪಡೆಗಳ ಮುಖ್ಯಸ್ಥರಾಗಿ ನಿಯೋಜನೆಯ ಗೊಂಡರು..

ಮೊಟ್ಟೆ ವಿತರಣೆಗೆ ವಿರೋಧ

ಮೊಟ್ಟೆ (Egg) ಮುಂದಿನ ದಿನ ಬಗೆದೀತು ಸರ್ಕಾರದ (BJP Govt ) ಹೊಟ್ಟೆ. ಶಾಲೆಗಳಲ್ಲಿ ಮೊಟ್ಟೆ ಯೋಜನೆ ವಾಪಸ್ ಪಡೆಯದೇ ಇದ್ದಲ್ಲಿ ಲಿಂಗಾಯತರಿಂದಲೇ (Lingayats) ಸರ್ಕಾರ ಪತನವಾಗುತ್ತೆ ಎಂದು ವಿವಿಧ ಮಠಾಧೀಶರು (Uttara Karnataka Swamijis ) ಬೊಮ್ಮಾಯಿ (CM Basavaraj Bommai) ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷರು ದಯಾನಂದ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ಚನ್ನಬಸವಾನಂದ ಸ್ವಾಮೀಜಿ, ಬಸವಧರ್ಮ ಪೀಠದ ಮಾತೆ ಗಂಗಾದೇವಿ ಮೊದಲಾ ಸ್ವಾಮೀಜಿಗಳು, ಬ್ರಾಹ್ಮಣ, ಜೈನ ಸಮುದಾಯದ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಹೇಳಿದ ತೋಳ ಯಾರು?

ವಿಧಾನ ಪರಿಷತ್​ ಚುನಾವಣೆಗೆ (MLC Election) ದಿನಗಣನೆ ಶುರುವಾಗಿದ್ದು, ಘಟಾನುಘಟಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್​ (CONGRESS) ನಾಯಕ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಇಂದು ಜೆಡಿಎಸ್​ (JDS) ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು. ಅರಕಲಗೂಡಿನಲ್ಲಿ ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಳಿಕ ಮಾತನಾಡಿದ ಅವರು ಬಿಜೆಪಿ (BJP) ನಾಯಕ ವಿರುದ್ಧ ಅಬ್ಬರದ ಭಾಷಣ ಮಾಡಿದರು. ಬಿಜೆಪಿ ಸರ್ಕಾರಿದ ಮೇಲೆ 40 ಪರ್ಸೆಂಟ್​ ಕಮಿಷನ್​ ಗಂಭೀರ ಆರೋಪ ಇದೆ. ಇದಕ್ಕೆ ಬಿಎಸ್​ ಯಡಿಯೂರಪ್ಪ ಕಿತ್ತಾಕಿದ ಮೇಲೆ ಮುಖ್ಯಮಂತ್ರಿ ಆಗಿದರಲ್ಲಾ ಬಸವರಾಜ ಬೊಮ್ಮಯಿ ಅವರು ಅಧಿಕಾರಿಗಳ ಕೈಯಲ್ಲಿ ತನಿಖೆ ಮಾಡಿಸುತ್ತೇನೆ ಎನ್ನುತ್ತಿದ್ದಾರೆ. ಕುರಿ ಕಾಯೋ ತೋಳ‌ ಅಂದರೆ ಸಂಬಳ ಬೇಡ ಅಂತಂತೆ. ಯಾರೂ ಲಂಚ ತಿಂದಿದರೆ ಅವರ ಕೈಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ ಎಂದು ಗಾದೆ ಮಾತಿನ ಮೂಲಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಶ್ರೀ ರಾಮನ ಪಾತ್ರಕ್ಕೆ ಪ್ರಭಾಸ್​​ ಪಡೆದ ಸಂಭಾವನೆ ಎಷ್ಟು?

ಪ್ರಭಾಸ್​ ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ  ಸಖತ್​ ನಿರೀಕ್ಷೆ ಮೂಡಿಸಿದೆ. ಅಚ್ಚರಿ ಎಂದರೆ ಈ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಪಡೆದಿದ್ದಾರೆ ಎನ್ನಲಾದ ಸಂಭಾವನೆ ಮೊತ್ತದ ಬಗ್ಗೆ ಒಂದು ಸುದ್ದಿ ಹರಡಿದೆ. ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದವರಾಗಲೀ, ಪಭಾಸ್​ ಆಗಲಿ ಎಲ್ಲಿಯೂ ಬಾಯಿ ಬಿಟ್ಟಿಲ್ಲ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವುತ್​ ನಿರ್ದೇಶನ ಮಾಡುತ್ತಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್​ ನಟಿಸುತ್ತಿದ್ದು, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸುತ್ತಿದ್ದಾರೆ. ಈಗಾಗಲೇ ರಾವಣ ಪಾತ್ರದ ಕೆಲ ಸೀನ್​​ಗಳನ್ನು ಶೂಟ್​ ಮಾಡಲಾಗಿದೆ.
Published by:Kavya V
First published: