• Home
 • »
 • News
 • »
 • state
 • »
 • Evening Digest : ಉತ್ತರ ಪ್ರದೇಶದಲ್ಲಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ : ಇಲ್ಲಿವೆ ಇಂದಿನ ಟಾಪ್ 10 ಸುದ್ದಿಗಳು

Evening Digest : ಉತ್ತರ ಪ್ರದೇಶದಲ್ಲಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ : ಇಲ್ಲಿವೆ ಇಂದಿನ ಟಾಪ್ 10 ಸುದ್ದಿಗಳು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

 • Share this:

  1.ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹಾಗೂ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, 2019 ರ ಮೇ ತಿಂಗಳಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾದರು


  Annamalai: ಭಾರತೀಯ ಪೊಲೀಸ್​ ಸೇವೆಯಿಂದ ನಿವೃತ್ತಿಹೊಂದಿದ್ದ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ


  2.ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹಾಗೇ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.


  ಉತ್ತರ ಪ್ರದೇಶದಲ್ಲಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ; ಮೂವರು ಪೊಲೀಸ್ ವಶಕ್ಕೆ


  3.ಕಳೆದ ವರ್ಷ ಕಾಶ್ಮೀರದ ಪುಲ್ವಾಮದಲ್ಲಿ ನಡೆದಿದ್ದ ಉಗ್ರ ದಾಳಿ ಘಟನೆ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಇವತ್ತು 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸುವ ನಿರೀಕ್ಷೆ ಇದೆ. 40 ಸಿಆರ್​ಪಿಎಫ್ ಯೋಧರನ್ನು ಬಲಿತೆಗೆದುಕೊಂಡ ಈ ಘಟನೆಯಲ್ಲಿ ಜೈಷ್ ಎ ಮೊಹಮ್ಮದ್ (ಜೆಇಎಂ) ಸಂಘಟನೆ ನಡೆಸಿದ ಸಂಚು, ಸ್ಫೋಟಕಗಳನ್ನ ಸಾಗಿಸಿದ್ದು, ದಾಳಿ ನಡೆಸಿದ ಉಗ್ರರ ಗುರುತು, ದಾಳಿಗೆ ನೆರವಾದವರು ಹೀಗೆ ಹಲವು ವಿವರಗಳು ಈ ಚಾರ್ಜ್​ಶೀಟ್​ನಲ್ಲಿ ಇರಲಿದೆ


  ಪುಲ್ವಾಮ ದಾಳಿ ಪ್ರಕರಣ: ಎನ್ಐಎಯಿಂದ 5,000 ಪುಟಗಳ ಚಾರ್ಜ್​ಶೀಟ್ ಸಾಧ್ಯತೆ


  4. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರನ್ನು ಕ್ಷಮಿಸಿಬಿಡುವಂತೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಇಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಶಾಂತ್ ಭೂಷಣ್ ಅವರನ್ನು ಶಿಕ್ಷಿಸುವ ಅಗತ್ಯ ಇಲ್ಲ. ಅವರನ್ನು ಕ್ಷಮಿಸಿ, ಎಚ್ಚರಿಕೆ ಕೊಟ್ಟು ಬಿಟ್ಟುಕಳುಹಿಸಬೇಕು ಎಂದು ಎಜಿ ಅಭಿಪ್ರಾಯಪಟ್ಟರು.


  ನ್ಯಾಯಾಂಗ ನಿಂದನೆ ಪ್ರಕರಣ: ಪ್ರಶಾಂತ್ ಭೂಷಣ್​ರನ್ನು ಕ್ಷಮಿಸಿ ಬಿಟ್ಟುಬಿಡಿ ಎಂದು ಎಜಿ ಕೋರಿಕೆ


  5.ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಕಂಡುಹಿಡಿಯುವ ಪ್ರಯತ್ನಕ್ಕೆ ಮುಂದಾಗಿರುವ ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಆಕ್ಸ್‌ಫರ್ಡ್‌ ಕೋವಿಡ್‌ -19 ಲಸಿಕೆ ಸಂಶೋಧನೆ ಎರಡನೇ ಹಂತಕ್ಕೆ ತಲುಪಿದ್ದು, ಮಾನವನ ಮೇಲಿನ ಕ್ಲಿನಿಕಲ್ ಪ್ರಯೋಗ ಇಂದು ಪ್ರಾರಂಭವಾಗಲಿದೆ ಎಂದು ತಿಳಿದುಬಂದಿದೆ.


  COVID-19 ಲಸಿಕೆ; ಇಂದಿನಿಂದ ಪುಣೆಯಲ್ಲಿ ಆರಂಭವಾಗಲಿದೆ ಮಾನವನ ಮೇಲಿನ ಕ್ಲಿನಿಕಲ್‌ ಪ್ರಯೋಗ


  6.ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷ ಸಂಘಟನೆಯ ದೃಷ್ಟಿಯಿಂದ ಕೆಲವು ಹಿರಿಯ ನಾಯಕರು ಪತ್ರ ಬರೆದಿದ್ದರು. ನಾನು ಈಗಲೂ ಹೇಳುತ್ತೇನೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಲ್ಲುವ ಶಕ್ತಿಯಿದ್ದರೆ ಅದು ರಾಹುಲ್ ಗಾಂಧಿಗೆ ಮಾತ್ರ ಎಂದು ಮಾಜಿ ಸಚಿವ ಕೆ.ಎಚ್​. ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.


  ಮೋದಿಯನ್ನು ಎದುರಿಸಬಲ್ಲ ಏಕೈಕ ವ್ಯಕ್ತಿ ರಾಹುಲ್ ಗಾಂಧಿ; ಕೆ.ಎಚ್​​. ಮುನಿಯಪ್ಪ ಅಭಿಮತ


  7.ಹಿಂದಿನ ಸರ್ಕಾರದಲ್ಲಿ ಘೋಷಣೆ ಮಾಡಲಾಗಿದ್ದ ಅನುದಾನ ವನ್ನು ಪೂರ್ಣಪ್ರಮಾಣದಲ್ಲಿ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಹೆಚ್​.ಡಿ.  ಕುಮಾರಸ್ವಾಮಿ ಮನವಿ ಮಾಡಿದ್ದಾರೆ‌. ಪಕ್ಷಾತೀತವಾಗಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.


  ಹಿಂದಿನ ಸರ್ಕಾರ ಶಾಸಕರಿಗೆ ಘೋಷಿಸಿದ್ದ ಪೂರ್ತಿ ಅನುದಾನ ಬಿಡುಗಡೆ ಮಾಡಿ; ಸಿಎಂಗೆ ಹೆಚ್​.ಡಿ. ಕುಮಾರಸ್ವಾಮಿ ಮನವಿ


  8.ಕಾಂಗ್ರೆಸ್​ ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ತರಬೇಕೆಂದು ಆಗ್ರಹಿಸಿ ಪತ್ರ ಬರೆದವರಲ್ಲಿ ನಾನೂ ಒಬ್ಬ. ಆದರೆ, ಪಕ್ಷದ ನಾಯಕತ್ವವನ್ನು ಪ್ರಶ್ನಿಸಿ ನಾನು ಪತ್ರ ಬರೆದಿರಲಿಲ್ಲ. ಪಕ್ಷ ಸಂಘಟನೆಯಷ್ಟೇ ನಮ್ಮೆಲ್ಲರ ಉದ್ದೇಶವಾಗಿತ್ತು. ನಾವು ನಮ್ಮ ಅಧ್ಯಕ್ಷರಿಗೆ ಬರೆದ ಪತ್ರ ಹೇಗೆ ಲೀಕ್ ಆಯಿತೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ.


  ಸೋನಿಯಾ ಗಾಂಧಿಗೆ ಬರೆದ ಪತ್ರ ಲೀಕ್ ಆಗಿದ್ದು ಹೇಗೆಂಬ ತನಿಖೆಯಾಗಲಿ; ವೀರಪ್ಪ ಮೊಯ್ಲಿ ಆಗ್ರಹ


  9.ಮೋಹಕ ತಾರೆ ರಮ್ಯಾ ಇದ್ದಕ್ಕಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಜೊತೆಗೆ ಸ್ಯಾಂಡಲ್​ವುಡ್​ನ ತಾರೆಯರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಸಕ್ರಿಯವಾಗುವ ಸೂಚನೆ ನೀಡುತ್ತಿದ್ದಾರೆ.


  ಕಿರಿಕ್​ ಹುಡುಗಿ ರಶ್ಮಿಕಾ ಫೋಟೋಗೆ ಫಿದಾ ಆದ್ರಾ ಮೋಹಕ ತಾರೆ ರಮ್ಯಾ..?

  Published by:G Hareeshkumar
  First published: