• Home
 • »
 • News
 • »
 • state
 • »
 • Evening Digest : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ, ಅಕ್ಟೋಬರ್​ ನಿಂದ ಪದವಿ ಕಾಲೇಜು ಆರಂಭ : ಇಲ್ಲಿವೆ ಇಂದಿನ ಟಾಪ್ 10 ಸುದ್ದಿಗಳು

Evening Digest : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ, ಅಕ್ಟೋಬರ್​ ನಿಂದ ಪದವಿ ಕಾಲೇಜು ಆರಂಭ : ಇಲ್ಲಿವೆ ಇಂದಿನ ಟಾಪ್ 10 ಸುದ್ದಿಗಳು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

 • Share this:

  1.ಕೋವಿಡ್ ಸಂಕಷ್ಟದಲ್ಲಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ವಿಚಾರದಲ್ಲಿ ಗೊಂದಲದಲ್ಲಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಬ್ಯಾಂಕ್ ಅಥವಾ ಬೇರೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರಿಗೆ ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ಸ್ವಂತ ನಿಲುವು ತೆಗೆದುಕೊಳ್ಳುವ ಬದಲು ಭಾರತೀಯ ರಿಸರ್ವ್ ಬ್ಯಾಂಕ್​ನ ನೆವ ಹೇಳುತ್ತಿದೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.


  ರಿಸರ್ವ್ ಬ್ಯಾಂಕ್ ಹಿಂದೆ ಬಚ್ಚಿಟ್ಟುಕೊಳ್ಳಬೇಡಿ, ಸ್ವಂತ ನಿರ್ಧಾರ ತೆಗೆದುಕೊಳ್ಳಿ: ಕೇಂದ್ರಕ್ಕೆ ಸುಪ್ರೀಂ ತರಾಟೆ


  2. ಕೊರೋನಾ ಕಾರಣದಿಂದಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್‌ಡೌನ್ ಮಾಡಿದ ಪರಿಣಾಮದಿಂದಾಗಿ ಜನ ಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಕೆಲಸವಿಲ್ಲದೆ, ಆದಾಯವಿಲ್ಲದೆ ದಿನಗಳನ್ನು ದೂಡಿದ್ದಾರೆ. ಲಾಕ್‌ಡೌನ್ ಕಾರಣದಿಂದಲೇ ಈ ಪ್ರಮಾದ ಜರುಗಿದ್ದು, ಮೊರೊಟೋರಿಯಂ ಅವಧಿಯ ನಂತರ ಸಾಲ ಮರುಪಾವತಿಯ ಮೇಲಿನ ಬಡ್ಡಿ ದರವನ್ನು ಸರ್ಕಾರ ಮತ್ತು ಆರ್‌ಬಿಐ ಏಕೆ ಮನ್ನಾ ಮಾಡಬಾರದು? ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ.


  ಮೊರೊಟೋರಿಯಂ ಅವಧಿಯ ಬಡ್ಡಿಯನ್ನು ಬದಿಗಿಟ್ಟು ಜನರ ನೋವುಗಳನ್ನೂ ಆಲಿಸಿ; ಕೇಂದ್ರದ ವಿರುದ್ಧ ಸುಪ್ರೀಂ ತರಾಟೆ


  3.ದಾವೂದ್​ ಇಬ್ರಾಹಿಂ ಕರಾಚಿಯಲ್ಲಿರುವುದಾಗಿ ಪಾಕಿಸ್ತಾನ ಒಪ್ಪಿಕೊಂಡಿತ್ತು. ಅಷ್ಟೇ ಅಲ್ಲ, ಆತನ ವಿಳಾಸವನ್ನು ಕೂಡ ಬಹಿರಂಗ ಮಾಡಿತ್ತು. ಆದರೆ ದಾವೂದ್​ ಕರಾಚಿಯಲ್ಲಿದ್ದಾನೆ ಎನ್ನುವ ವಿಚಾರವನ್ನು ಆತನ ಆಪ್ತ ಛೋಟಾ ಶಕೀಲ್​ ಅಲ್ಲ ಗಳೆದಿದ್ದಾನೆ.


  ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಕರಾಚಿಯಲ್ಲಿದ್ದಾನೆ ಎಂಬುದು ಶುದ್ಧ ಸುಳ್ಳು; ಛೋಟಾ ಶಕೀಲ್​


  4.ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದರು. ಅಲ್ಲದೆ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳೇನು ಎಂಬುದನ್ನು ಜಪಾನಿ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.


  ಆರ್ಥಿಕ ಪ್ರಗತಿಗಾಗಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ - ಸಿಎಂ ಬಿಎಸ್​ ಯಡಿಯೂರಪ್ಪ


  5. ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್​​ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್​​ ನಾರಾಯಣ ಪ್ರಕಟಿಸಿದರು.


  ಅಕ್ಟೋಬರ್​​​ನಿಂದ ಡಿಗ್ರಿ ಕಾಲೇಜು ಓಪನ್​​; ಸೆ.1ರಿಂದಲೇ ಆನ್​​ಲೈನ್​ ಕ್ಲಾಸ್​ ಶುರು - ಡಿಸಿಎಂ ಅಶ್ವಥ್​​ ನಾರಾಯಣ್ ​​


  6.ಟಿಪ್ಪು ಸುಲ್ತಾನ್ ಈ ನೆಲದ ಮಗ. ವೀರ ಹೋರಾಟಗಾರ ಟಿಪ್ಪು ಯಾವುದೇ ಪಕ್ಷ ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ ಎಂದು ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಟಿಪ್ಪುವನ್ನು ಹಾಡಿ ಹೊಗಳಿರುವುದನ್ನು  ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಉಲ್ಲೇಖಿಸಿ ಬಿಜೆಪಿ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.


  ಟಿಪ್ಪು ಹೊಗಳಿದ ವಿಶ್ವನಾಥ್; ಬಿಜೆಪಿಗರು ಈಗಲಾದರೂ ಸತ್ಯ ತಿಳಿದುಕೊಳ್ಳಲಿ ಎಂದ ಗುಂಡೂರಾವ್, ಖಂಡ್ರೆ


  7.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ವಿರುದ್ಧ​ 5 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಬಗ್ಗೆ ಖುದ್ದು ಬಿಜೆಪಿ ಶಾಸಕರೇ ಬಿಜೆಪಿ ಹೈಕಮಾಂಡ್​ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆ ಪತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.


  ಬಿ.ವೈ. ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕರಿಂದಲೇ 5 ಸಾವಿರ ಕೋಟಿ ರೂ. ಭ್ರಷ್ಟಾಚಾರದ ಆರೋಪ!


  8. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆಗಾಗಿ ಯೋಜನೆ ರೂಪಿಸಿದ್ದ ಹೆಚ್​ಡಿಕೆ ಕನಸು ಈಗ ನನಸಾಗುವ ಕಾಲ ಬಂದಿದೆ. ಈ ಯೋಜನೆಗೆ ಬೊಂಬೆನಗರಿಯ ಜನ ಸಂತಸಗೊಂಡಿದ್ದಾರೆ.


  ಚನ್ನಪಟ್ಟಣಕ್ಕೆ ಹೆಚ್​ಡಿಕೆ ಕೊಡುಗೆ; 50 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ


  9.ಬಾಲಿವುಡ್​ನ ಖ್ಯಾತ ನಿರ್ದೇಶಕ ಓಂ ರಾವತ್​ ಹಾಗೂ ಬಾಹುಬಲಿ ಪ್ರಭಾಸ್​ ಅವರ ಕಾಂಬಿನೇಷನ್​ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಆದಿಪುರುಷ್​. ಈ ಚಿತ್ರದಲ್ಲಿ ಪ್ರಭಾಸ್​ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತಾಗಿ ನಿರ್ದೇಶಕ ಓಂ ರಾವತ್​ ಹೇಳಿಕೆ ನೀಡಿದ್ದಾರೆ.


  Prabhas: ಆದಿಪುರುಷ್​ ಸಿನಿಮಾದಲ್ಲಿ ಪ್ರಭಾಸ್​ಗೆ ನಾಯಕಿ ಇವರೇ ಅಂತೆ..!


  10.ಇಡೀ ವಿಶ್ವವೇ ಸಾಕಷ್ಟು ತಿಂಗಳುಗಳಿಂದ ಕಾತುರದಿಂದ ಕಾಯುತ್ತಿರುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 19 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಯುಎಇನಲ್ಲಿ ಚಾಲನೆ ಸಿಗಲಿದೆ. ಮೈದಾನಕ್ಕೆ ಬಂದು ಕ್ರಿಕೆಟ್ ನೋಡಲು ಸಾಧ್ಯವಾಗಿಲ್ಲ ಎಂದಾದರೂ ಟಿವಿ ಮುಂದೆ ಕೂತು ರೋಚಕ ಪಂದ್ಯಗಳ ವೀಕ್ಷಣೆ ಮಾಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.


  IPL 2020: ಅಬುದಾಬಿಯಲ್ಲಿ ಹೆಚ್ಚುತ್ತಿದೆ ಕೊರೋನಾ: ಬಿಸಿಸಿಐಯಿಂದ ಮಹತ್ವದ ಬದಲಾವಣೆ?: ಇಲ್ಲಿದೆ ಮಾಹಿತಿ

  Published by:G Hareeshkumar
  First published: