Evening Digest: ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ಮತ್ತೆ ಡಿಕೆಶಿಗೆ ಇಡಿ ಸಂಕಷ್ಟ - ಇಂದಿನ ಪ್ರಮುಖ ಸುದ್ದಿಗಳು

Kannada News Today: ರಾಜ್ಯ, ದೇಶ-ವಿದೇಶದಲ್ಲಿ ನಡೆದ ಘಟನಾವಳಿಗಳ ಕುರಿತು ಓದಲೇಬೇಕಾದ ಇಂದಿನ ಪ್ರಮುಖ ಸುದ್ದಿಗಳ ಗುಚ್ಛ ಇಲ್ಲಿದೆ.

ಸಂಜೆ ಸುದ್ದಿ

ಸಂಜೆ ಸುದ್ದಿ

  • Share this:
Hijab Controversy: ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು (ಮೇ 26): ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ (Hijab Controversy) ತಲೆ ಎತ್ತಿದೆ. ಮಂಗಳೂರು ವಿಶ್ವವಿದ್ಯಾಲಯ (Mangaluru University) ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು (Student) ಬೃಹತ್ ಪ್ರತಿಭಟನೆ (Protest) ನಡೆಸಿದರು. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ನಿರ್ಬಂಧ ಇದ್ದರೂ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಬರ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ವಿದ್ಯಾರ್ಥಿಗಳಿಂದ ಪ್ರತಿಭಟನೆ

Karnataka Text Book: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್ ಕಂಪ್ಲೇಂಟ್!

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಿ ನಾಡಗೀತೆಗೆ ಅಪಮಾನ ಆರೋಪದಡಿ ರೋಹಿತ್ ಚಕ್ರತೀರ್ಥ (Rohit Chakratirtha) ಮತ್ತು ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ದ ದೂರು ನೀಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ (Bengaluru Police Commissioner) ಪ್ರತಾಪ್ ರೆಡ್ಡಿ ಅವರಿಗೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ದೂರು ನೀಡಿದ್ದಾರೆ. ನಾಡು ನುಡಿಯ ಹೆಮ್ಮೆ ಕುವೆಂಪುರ (Kuvempu) ಬಗ್ಗೆ ಅವಹೇಳನ ರೀತಿಯಲ್ಲಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿದೆ ಎಂದು ದೂರಲಾಗಿದೆ. ಲಕ್ಷ್ಮಣ ಎಂಬುವರು ಕುವೆಂಪುರ ಬಗ್ಗೆ ಕೆಟ್ಟ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಇಬ್ಬರ ವಿರುದ್ದ ಸಮಾಜ ಸ್ವಾಸ್ಥ ಕೆಡುವ ಪ್ರಚೋದನೆ ಎಸಗಿದ್ದಾರೆ ಎಂದು ಆರೋಪಿಸಿ ಕಮಿಷನರ್ ಗೆ ದೂರು ನೀಡಲಾಗಿದೆ.

Accident: ಬೆಂಗಳೂರಲ್ಲಿ ವಾಟರ್ ಟ್ಯಾಂಕರ್ ಹರಿದು ಬಾಲಕಿ ಸಾವು, ಚಾಲಕ ಎಸ್ಕೇಪ್

ಬೆಂಗಳೂರು (ಮೇ 26): ವಾಟರ್ ಟ್ಯಾಂಕರ್ (Water Tanker) ಹರಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರೋ (Girl Death) ಘಟನೆ ಸರ್ಜಾಪುರ ರೋಡ್ ಸೆರಿನಿಟಿ ಲೇಔಟ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಮೂರು ವರ್ಷದ ಪ್ರತಿಷ್ಠಾ (Prathista) ಸಾವನ್ನಪ್ಪಿದ್ದಾಳೆ. ಇಂದು ಮಧ್ಯಹ್ನಾ 12 ಗಂಟೆ ಸುಮಾರಿಗೆ ಶ್ವೇತ ರೆಸಿಡೆನ್ಸಿ ಅಪಾರ್ಟ್ಮೆಂಟ್ (Apartment) ಮುಂದೆ ಅಪಘಾತ (Accident) ಸಂಭವಿಸಿದೆ. ಅಪಾರ್ಟ್ಮೆಂಟ್ಗೆ ನೀರನ್ನು ಲೋಡ್ ಮಾಡಲು ಟ್ಯಾಂಕರ್ ತರಲಾಗಿತ್ತು. ನೀರು ಲೋಡ್ ಮಾಡಿ ಮುಗಿದ ಬಳಿಕ ಟ್ಯಾಂಕರ್ನನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಅವಘಡ ನಡೆದಿದೆ. ಹಿಂದೆ ನೋಡದೆ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ವಾಹನ ಬಾಲಕನ ಮೇಲೆ ಹರಿದಿದ್ದು, ಚಕ್ರದಡಿ ಸಿಲುಕಿ ಬಾಲಕಿ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹೆಚ್ಎಸ್ ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Navjot Singh Sidhu: ದಿನಗೂಲಿ ಕೆಲಸ ಮಾಡುತ್ತಿದ್ದಾರಂತೆ ಸಿಧು, ದಿನಕ್ಕೆ 90 ರೂಪಾಯಿ ಸಂಬಳವಂತೆ!

ಪಂಜಾಬ್ (Punjab) ಕಾಂಗ್ರೆಸ್ (Congress) ಮಾಜಿ ಮುಖ್ಯಸ್ಥ ಮತ್ತು ಟೀಂ ಇಂಡಿಯಾದ ಮಾಜಿ ಆಟಗಾರ ನವಜೋತ್ ಸಿಂಗ್ ಸಿಧು (Navjoth Singh Sidhu) ಅವರಿಗೆ 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಯನ್ನು ಪಟಿಯಾಲಾ ನ್ಯಾಯಾಲಯ (Patiala House Court) ನೀಡಿದೆ. ಹೀಗಾಗಿ ಸದ್ಯ ಜೈಲು ವಾಸದಲ್ಲಿರುವ ಸಿಧು, ಅಲ್ಲಿ ದಿನಗೂಲಿ ಕೆಲಸಗಾರರಾಗಿ ದುಡಿಯುತ್ತಿದ್ದಾರಂತೆ. ಹೌದು, ಅವರು ಒಂದು ವರ್ಷದ ಜೈಲು ಶಿಕ್ಷೆಯ ಸಮಯದಲ್ಲಿ ಪ್ರತಿದಿನ ₹40 ರಿಂದ ₹90 ಗಳಿಸುತ್ತಾರೆ. ಅದೇ ಜೈಲಿನಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಕೂಡ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದಾರೆ. ಆದರೂ ಅವರ ಬ್ಯಾರಕ್ಗಳು ವಿಭಿನ್ನವಾಗಿವೆ.

DK Shivakumar: ಮತ್ತೆ ಇಡಿ ಇಕ್ಕಳದಲ್ಲಿ ಸಿಲುಕುತ್ತಾರಾ ಡಿಕೆಶಿ? ಕೋರ್ಟ್ಗೆ ಸಲ್ಲಿಕೆಯಾಯ್ತು ಚಾರ್ಜ್ಶೀಟ್!

ಕೆಪಿಸಿಸಿ ಅಧ್ಯಕ್ಷ (KPCC President) ಡಿಕೆ ಶಿವಕುಮಾರ್ (DK Shivakumar) ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹಣ (Money) ಅಕ್ರಮ ವಹಿವಾಟು ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ 2019ರಲ್ಲಿ ದಾಖಲಿಸಿದ್ದ ಪ್ರಕರಣ (Case) ಸಂಬಂಧ ದೆಹಲಿಯ (Delhi) ಇಡಿ ಅಧಿಕಾರಿಗಳು (ED Officers) ದೋಷಾರೋಪ ಪಟ್ಟಿ (Charge Sheet) ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು (IT Officers) ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್ಎ ಕಾಯ್ದೆ (PMLA Act) ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಹೊಸದಾಗಿ ಆರೋಪ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಕೂಡ ಕಾನೂನಿಗೆ ವಿರುದ್ಧವಾಗಿ ಆದಾಯ ತೆರಿಗೆ ಇಲಾಖೆಯವರು ಸಾಕಷ್ಟು ಆರೋಪಗಳನ್ನು ಸೃಷ್ಟಿ ಮಾಡಿದ್ದಾರೆ. ನನಗೆ ಪ್ರತಿ ಬರಲಿ, ಈ ದೇಶದಲ್ಲಿ ಕಾನೂನು, ನ್ಯಾಯ ನೀತಿ ಇದೆ, ಅವುಗಳ ಮೇಲೆ ನಂಬಿಕೆಯಿದೆ, ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ರಾಜಕೀಯಾಗಿ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ ಎಂದಿದ್ದಾರೆ.
Published by:Sandhya M
First published: