Evening Digest: ಜೊ ಬಿಡೆನ್​ಗೆ ಮುನ್ನಡೆ, ಟ್ರಂಪ್​ಗೆ ಹಿನ್ನಡೆ, ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತ- ಸಿದ್ದರಾಮಯ್ಯ ಭವಿಷ್ಯ

ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • News18
 • Last Updated :
 • Share this:
  1.ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕುತೂಹಲ ಘಟ್ಟ ತಲುಪಿದ್ದು, ಡೆಮಾಕ್ರಟಿಕ್ ಪಕ್ಷದ ಜೊ ಬಿಡೆನ್ ಹಾಗೂ ರಿಪಬ್ಲಿಕ್ ಪಕ್ಷದ ಡೋನಾಲ್ಡ್ ಟ್ರಂಪ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಜೊ ಬಿಡೆನ್ ಅವರು ಟ್ರಂಪ್ ಅವರಿಗಿಂತ ಮುಂದಿದ್ದು, ಮ್ಯಾಜಿಕ್ ನಂಬರ್ ತಲುಪುವ ಉತ್ಸಾಹದಲ್ಲಿ ಇದ್ದಾರೆ.

  US Election 2020 Results | ಜೊ ಬಿಡೆನ್​ಗೆ ಮುನ್ನಡೆ, ಟ್ರಂಪ್​ಗೆ ಹಿನ್ನಡೆ; ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಹಾಲಿ ಅಧ್ಯಕ್ಷ

  2.ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ.

  Gold Rate: ಎರಡನೇ ವಾರವೂ ಇಳಿಕೆ ಹಾದಿ ಹಿಡಿದ ಚಿನ್ನ; ಇಲ್ಲಿದೆ ಇಂದಿನ ದರ

  3.ಚೀನಾ ಮತ್ತು ಪಾಕಿಸ್ತಾನದಿಂದ ಯುದ್ಧ ಭೀತಿ ಎದುರಿಸುತ್ತಿರುವ ಭಾರತ ಈಗ ತನ್ನ ಸೇನಾಬಲ‌ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಸೇನೆಗೆ (IAF) ಈಗ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಫ್ರಾನ್ಸ್ ನಿಂದ ಖರೀದಿಸಲ್ಪಟ್ಟಿರುವ ರಫೇಲ್ ಯುದ್ಧ ವಿಮಾನಗಳು ಇಂದು ಭಾರತಕ್ಕೆ ಆಗಮಿಸಲಿವೆ.

  Rafale Jets: ಭಾರತೀಯ ವಾಯುಪಡೆಗೆ ಇಂದು 3 ರಫೇಲ್ ಯುದ್ಧ ವಿಮಾನಗಳ ಸೇರ್ಪಡೆ

  4.ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಂಗ್ಲೀಷ್​ ಸುದ್ದಿ ಮಾಧ್ಯಮವಾದ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಇಂದು ಬೆಳಗ್ಗೆ ಏಕಾಏಕಿ ಬಂಧಿಸಿದ್ದಾರೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್​ ಗೋಸ್ವಾಮಿ ಮೇಲಿದೆ.

  ರಿಪಬ್ಲಿಕ್​ ಟಿವಿಯ ಅರ್ನಾಬ್​ ಗೋಸ್ವಾಮಿ ಬಂಧನ; ಸಾಮಾಜಿಕ ಜಾಲತಾಣಗಳಲ್ಲಿ ಗರಿಗೆದರಿದ ಪರ-ವಿರೋಧ ಚರ್ಚೆ

  5.ಆರ್​ ಆರ್​ ನಗರ ಹಾಗೂ ಶಿರಾ ಉಪಚುನಾವಣೆ ನಿನ್ನೆ ಮುಗಿದಿದ್ದು, ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ನಡೆಸುತ್ತಿದ್ದಾರೆ. ಚುನಾವಣೆ ಬಳಿಕ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಆರ್ ಆರ್​ ನಗರದಲ್ಲಿ ಗೆಲ್ಲುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

  ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲ್ಲ, ಇದು ಸೂರ್ಯ-ಚಂದ್ರ ಇರೋವರೆಗೂ ಸತ್ಯ; ಬಿಜೆಪಿ ಅಭ್ಯರ್ಥಿ ಮುನಿರತ್ನ

  6.ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಬಿರುಸು ಪಡೆದಿದೆ. ನಿನ್ನೆ ರಾತ್ರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದೆ. ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ನಾಳೆಯಿಂದ ನ. 7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

  ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕರಾವಳಿಯಲ್ಲಿ ನಾಳೆಯಿಂದ 3 ದಿನ ಮಳೆ ಹೆಚ್ಚಳ

  7. ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಶಿರಾದಲ್ಲಿ ಜಯಚಂದ್ರ ಗೆಲ್ತಾರೆ. ಆರ್ ಆರ್ ನಗರದಲ್ಲಿ ಕುಸುಮಾ ಗೆಲ್ಲುವ ಸಾಧ್ಯತೆ ಇದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

  ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತ; ಸಿದ್ದರಾಮಯ್ಯ ಭವಿಷ್ಯ

  8. ಶಾಲೆ ಆರಂಭಿಸುವ ಬಗ್ಗೆ ಇಂದು ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ ಸಚಿವ ಸುರೇಶ್​ ಕುಮಾರ್​ ಶಿಕ್ಷಕರ ವರ್ಗಾವಣೆ ವಿಚಾರವಾಗಿಯೂ ಚರ್ಚೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಪಿಯು ಬೋರ್ಡ್ ನಿರ್ದೇಶಕರು ಇತರೆ ಅಧಿಕಾರಿಗಳ ಜೊತೆ ಸಮಾಲೋಚನಾ ನಡೆದಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಪದಾಧಿಕಾರಿಗಳು ಭಾಗಿಯಾಗಿದ್ದರು.

  ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಶಿಕ್ಷಕರ ವರ್ಗಾವಣೆ ಆರಂಭ; ಸಚಿವ ಸುರೇಶ್ ಕುಮಾರ್

  9. ನಿರ್ದೇಶಕ ಜೋಗಿ ಪ್ರೇಮ್​ ಸದ್ಯ ಏಕ್​ ಲವ್​ ಯಾ ಸಿನಿಮಾ ಚಿತ್ರೀಕರಣವನ್ನು ಪೂರ್ಣಗೊಳಿಸುವಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣದಿಂದಾಗಿಯೇ ಈ ಸಲ ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಳ್ಳಲು ಆಗಲಿಲ್ಲ. ಬದಲಿಗೆ ಏಕ್​ ಲವ್​ ಯಾ ತಂಡದೊಂದಿಗೆ ಊಟಿಯಲ್ಲಿ ಆಚರಿಸಿಕೊಂಡಿದ್ದರು. ಈಗ ಮಗನ ಹುಟ್ಟುಹಬ್ಬಕ್ಕೂ ಸಹ ಪ್ರೇಮ್​ ಈ ಸಲ ಕುಟುಂಬದೊಂದಿಗೆ ಇಲ್ಲ. ಕಾರಣ ತಮ್ಮ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಲೊಕೇಷನ್​ ಹುಡುಕಾಟದಲ್ಲಿ ಬ್ಯುಸಿಯಾಗಿದ್ದಾರೆ.

  Prem: ಲೊಕೇಷನ್​ ಹುಡುಕುತ್ತಾ ಕಾಶ್ಮೀರದತ್ತ ಹೊರಟ ಜೋಗಿ ಪ್ರೇಮ್: ಮಗನ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ ನಿರ್ದೇಶಕ..!

  10. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮೂರು ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಪ್ರವೇಶಿಸಿದೆ. ಅದು ಕೂಡ ಅದೃಷ್ಟದ ಬಲದೊಂದಿಗೆ ಎಂಬುದು ವಿಶೇಷ. ಸತತ ನಾಲ್ಕು ಸೋಲುಗಳ ಹೊರತಾಗಿಯೂ ಕೊಹ್ಲಿ ಪಡೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

  Irfan Pathan: RCB ಪ್ಲೇ ಆಫ್ ಗೆಲ್ಲಬೇಕಿದ್ರೆ​ ತಂಡದಲ್ಲಿ ಈ ಒಂದು ಬದಲಾವಣೆ ಆಗಬೇಕು..!
  Published by:G Hareeshkumar
  First published: