• Home
  • »
  • News
  • »
  • state
  • »
  • Top-5 News: ಸಿಇಟಿ ಪರಿಷ್ಕೃತ Ranking ಪಟ್ಟಿ ಪ್ರಕಟ, ಕಾಂಗ್ರೆಸ್​ ಅಧ್ಯಕ್ಷ ಪಟ್ಟಕ್ಕೆ ಖರ್ಗೆ, ತರೂರ್ ಫೈಟ್; ಇಂದಿನ ಪ್ರಮುಖ ಸುದ್ದಿ

Top-5 News: ಸಿಇಟಿ ಪರಿಷ್ಕೃತ Ranking ಪಟ್ಟಿ ಪ್ರಕಟ, ಕಾಂಗ್ರೆಸ್​ ಅಧ್ಯಕ್ಷ ಪಟ್ಟಕ್ಕೆ ಖರ್ಗೆ, ತರೂರ್ ಫೈಟ್; ಇಂದಿನ ಪ್ರಮುಖ ಸುದ್ದಿ

ಈ ಸಂಜೆಯ ಪ್ರಮುಖ ಸುದ್ದಿಗಳು

ಈ ಸಂಜೆಯ ಪ್ರಮುಖ ಸುದ್ದಿಗಳು

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ...

  • Share this:

ನಾನು ಕಟುವಾಗಿ ಖಂಡಿಸುತ್ತೇನೆ; CM ಟ್ವೀಟ್​


ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗೇಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮಾಡಿದ್ದಾರೆ.


ಸಿಇಟಿ ಪರಿಷ್ಕೃತ Ranking ಪಟ್ಟಿ ಪ್ರಕಟ


ಕೊನೆಗೂ 2021-22ನೇ ಸಿಇಟಿ ಪರಿಷ್ಕೃತ Ranking ಪಟ್ಟಿ ಪ್ರಕಟವಾಗಿದೆ. ಕೋರ್ಟ್ ಆದೇಶದ ಬಳಿಕ ಕೆಇಎ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಬಂದ ಫಲಿತಾಂಶಕ್ಕೂ ಈಗ ಪ್ರಕಟವಾದ ಪರಿಷ್ಕೃತ ಪಟ್ಟಿಗೂ ಭಾರೀ ವ್ಯತ್ಯಾಸವಿದೆ. ಸಿಇಟಿ ಪರಿಷ್ಕೃತ Ranking ಪಟ್ಟಿ ಕೆಇಎ ವೆಬ್ ಸೈಟ್ ನಲ್ಲಿ ಲಭ್ಯವಿದೆ. Karresults.nic.in ವೆಬ್ ಸೈಟ್ ನಲ್ಲಿ ಪರಿಷ್ಕೃತ ಸಿಇಟಿ Ranking ಪಟ್ಟಿ ನೋಡಬಹುದಾಗಿದೆ. 2022ರ ಸಿಇಟಿ ಫಲಿತಾಂಶ ಬಿಡುಗಡೆಯಾಗಿದ್ದು, ಒಟ್ಟು 2,10820 ವಿದ್ಯಾರ್ಥಿಗಳ ಫಲಿತಾಂಶದಲ್ಲಿ 1,71,000 ಸಾವಿರ ವಿದ್ಯಾರ್ಥಿಗಳು ಸಿಇಟಿ Ranking ಅರ್ಹತೆ ಪಡೆದುಕೊಂಡಿದ್ದಾರೆ.


ಕೈ ಅಧ್ಯಕ್ಷ ಗಾದಿಗೆ ಖರ್ಗೆ, ತರೂರ್ ಫೈಟ್!


ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಿಸಿ ಜೋರಾಗಿದೆ. ರಾಜ್ಯಸಭಾ ವಿಪಕ್ಷ ನಾಯಕ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ ಚುನಾವಣೆ ಕಾವು ಪಡೆದುಕೊಂಡಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನವೇ ದಿಗ್ವಿಜಯ ಸಿಂಗ್ (Digvijay Singh) ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಇದಾದ ಬಳಿಕ ಜಾರ್ಖಂಡ್ ಮಾಜಿ ಸಚಿವ (former Jharkhand minister) ಕೆಎನ್ ತ್ರಿಪಾಠಿ (KN Tripathi) ಕೂಡ ನಾಮಪತ್ರ ಸಲ್ಲಿಸಿದ್ದರು. ಆದರೆ ತ್ರಿಪಾಠಿ ನಾಮಪತ್ರ ತಿರಸ್ಕೃತಗೊಂಡಿದೆ. ಇದರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಶಶಿ ತರೂರ್ (Shashi Tharoor) ಮಧ್ಯೆ ಭಾರೀ ಪೈಪೋಟಿ ಶುರುವಾಗಿದೆ. ಇನ್ನು ಪಕ್ಷದಲ್ಲಿ ಒಬ್ಬರಿಗೆ ಒಂದೇ ಜವಾಬ್ದಾರಿ ಎನ್ನುವ ತತ್ವದ ಹಿನ್ನೆಲೆಯಲ್ಲಿ ರಾಜ್ಯಸಭಾ ವಿಪಕ್ಷ ನಾಯಕನ (Rajya Sabha Leader of Opposition) ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ ರಾಜೀನಾಮೆ (Resign) ಸಲ್ಲಿಸಿದ್ದಾರೆ.


ನಿಯಮಗಳಿಗೆ ತಲೆ ಬಾಗಿದ ಪ್ರಧಾನಿ


ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ರಾಜಸ್ಥಾನದ ಅಬು ರೋಡ್ ತಲುಪಿದರು. ರಾತ್ರಿ 10 ಗಂಟೆಯಾದ್ದರಿಂದ ಮೈಕ್ ಬಳಸದೇ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಮೈಕ್‌ಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಲು ತಾನು ಬಯಸುವುದಿಲ್ಲ ಎಂದ ಅವರು, ಈಗಾಗಲೇ 10 ಗಂಟೆಯಾಗಿದೆ. ನಾನು ಕಾನೂನು ಹಾಗೂ ನಿಯಮಗಳನ್ನು ಪಾಲಿಸಬೇಕೆಂದು ನನ್ನ ಆತ್ಮ ಹೇಳುತ್ತದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ರಾಜಸ್ಥಾನದ ಅಬು ರಸ್ತೆಯಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆದರೆ ಈ ವೇಳೆ ಅವರು ಮೈಕ್ ಬಳಸಲಿಲ್ಲ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸುವ ಯಾವುದೇ ನಿಯಮವನ್ನು ಉಲ್ಲಂಘಿಸಲು ತಾನು ಬಯಸುವುದಿಲ್ಲ ಎಂದ ಪ್ರಧಾನಿ ಮೋದಿ ಮೈಕ್ ಬಳಸದೇ ಮಾತನಾಡಿದರು.


ಮಕ್ಕಳಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು


ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ (Sexual Harassment)  ನೀಡಿದ ಆರೋಪದಡಿ ಶಿಕ್ಷಕನೋರ್ವನಿಗೆ ಧರ್ಮದೇಟು ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri, Davanagere) ತಾಲೂಕಿನ ಯರಗಟ್ಟೆಹಳ್ಳಿ (Yaragattehalli) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ (Primary School Teacher) ಲೋಕೇಶ್ ಗೆ ಗ್ರಾಮಸ್ಥರು ಥಳಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕ ಲೋಕೇಶ್ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡಿರುವ ಬಗ್ಗೆ  ಮಕ್ಕಳು (Children) ಪೋಷಕರಿಗೆ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿಕ್ಷಕ ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದ ಎಂದು ವರದಿಯಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Published by:ಪಾವನ ಎಚ್ ಎಸ್
First published: