• Home
  • »
  • News
  • »
  • state
  • »
  • Top-5 News: ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿ ವಿರಾಜಮಾನ, ಹೊಸ ಬಾಂಬ್ ಸಿಡಿಸಿದ ದಿನೇಶ್​ ಗುಂಡೂರಾವ್; ಈ ಸಂಜೆಯ ಟಾಪ್ ನ್ಯೂಸ್ ಇಲ್ಲಿವೆ

Top-5 News: ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿ ವಿರಾಜಮಾನ, ಹೊಸ ಬಾಂಬ್ ಸಿಡಿಸಿದ ದಿನೇಶ್​ ಗುಂಡೂರಾವ್; ಈ ಸಂಜೆಯ ಟಾಪ್ ನ್ಯೂಸ್ ಇಲ್ಲಿವೆ

ಸಂಜೆ ಸುದ್ದಿ

ಸಂಜೆ ಸುದ್ದಿ

ರಾಜ್ಯ, ದೇಶ, ವಿದೇಶದಲ್ಲಿ ಇಂದು ಏನೇನಾಯ್ತು? ರಾಜಕೀಯ, ಉದ್ಯೋಗ, ಕ್ರೀಡೆ, ಸಿನಿಮಾ ಕ್ಷೇತ್ರಗಳ ಅಪ್‌ಡೇಟ್ಸ್ ಏನು? ವಾಣಿಜ್ಯ ಕ್ಷೇತ್ರ ಹೇಗೆ ನಡೀತಿದೆ? ಸೀರಿಯಲ್‌ಗಳಲ್ಲಿ ಏನ್ ಆಗ್ತಿದೆ? ನೀವು ಓದದೇ ಮಿಸ್ ಮಾಡಿಕೊಂಡ ಈ ಸಂಜೆಯ ಬಿಸಿ ಬಿಸಿ ಸುದ್ದಿಗಳು ಇಲ್ಲಿವೆ ಓದಿ.

  • Share this:

ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿ ವಿರಾಜಮಾನ


ಮೈಸೂರು ದಸರಾ ನೋಡಲು ಎರಡು ಕಣ್ಣು ಸಾಲದು. ಈ ಬಾರಿ ದಸರಾವನ್ನು ಬಹಳ ವಿಜೃಭಣೆಯಿಂದ ಆಚರಿಸಲಾಗ್ತಿದೆ. ಐತಿಹಾಸಿಕ ಜಂಬೂ ಸವಾರಿ (Jambu Savari) ಮೆರವಣಿಗೆಗೆ ಚಾಲನೆ ದೊರೆತಿದೆ. 750 ಕೆ.ಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು (Chamundeshwari) ಹೊತ್ತುಕೊಂಡು ಅಭಿಮನ್ಯು ಬನ್ನಿ ಮಂಟಪದತ್ತ ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. ಸಾಂಸ್ಕೃತಿಕ ರಾಜಧಾನಿ ಮೈಸೂರು (Mysuru) ಮತ್ತೊಮ್ಮೆ ರಾಜ ವೈಭೋಗಕ್ಕೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಂಜೆ 5.40ಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.


ಹೊಸ ಬಾಂಬ್ ಸಿಡಿಸಿದ ದಿನೇಶ್​ ಗುಂಡೂರಾವ್​

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದು, ಈಗ ಅದು ಕಾಂಗ್ರೆಸ್ ಗೆ ಅಸ್ತ್ರ ಸಿಕ್ಕಂತಾಗಿದೆ. ಇದನ್ನೇ  ಅಸ್ತ್ರವನ್ನಾಗಿಟ್ಟುಕೊಂಡು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿ. ಈ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಿಲ್ಯಾಕ್ಸ್ ಮೂಡ್ ನಲ್ಲಿರೋ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಕಬಿನಿಯ ಆರೆಂಜ್ ಕೌಂಟಿಯಲ್ಲಿ ವಾಸ್ಯವ್ತ ಹೂಡಿದ್ದಾರೆ. ಸಫಾರಿ ಮಾಡಿ ಸುತ್ತಾಡಿ ಬಂದಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಎಂದು ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಿದ್ದಾರೆ. ಆರೆಂಜ್ ಕೌಂಟಿ ರೆಸಾರ್ಟ್ ನಲ್ಲಿರುವ ಸೋನಿಯಾ ಅವರು ಇಂದು ದೇವಾಸ್ಥಾನಕ್ಕೆ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಭೀಮನಕೊಲ್ಲಿಯ ಕಬಿನಿ ಹಿನ್ನೀರಿನಲ್ಲಿರುವ ಮಾದೇಶ್ವರ ದೇವಾಲಯಕ್ಕೆ ಸೋನಿಯಾ ಗಾಂಧಿ ಭೇಟಿ ನೀಡಿದ್ರು.
ಹೈದರಾಬಾದ್ (ಅ.05): ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ (K. Chandrasekhara) ರಾವ್ ಅವರು ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಅದರಂತೆ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (BRS) ಎಂದು ಘೋಷಿಸಲಾಗಿದೆ. ರಾಷ್ಟ್ರೀಯ ಪಕ್ಷದ ಘೋಷಣೆಗೂ ಮುನ್ನವೇ ಟಿಆರ್‌‌ಎಸ್ ನಾಯಕ (TCR Leaders) ರಾಜನಾಳ ಶ್ರೀಹರಿ ಅವರು ವಾರಂಗಲ್‌ನಲ್ಲಿ ಸ್ಥಳೀಯರಿಗೆ ಮದ್ಯದ ಬಾಟಲಿಗಳು ಮತ್ತು ಕೋಳಿಗಳನ್ನು ವಿತರಿಸಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ‌ವಾಗಿದೆ.
ಘಾಜಿಯಾಬಾದ್: ತನ್ನ ಮನೆಯಲ್ಲಿ ಎಲ್‌ಇಡಿ ಟಿವಿ ಸ್ಫೋಟಗೊಂಡು 16 ವರ್ಷದ ಹದಿಹರೆಯದ ಯುವಕ ಸಾವನ್ನಪ್ಪಿದ್ದಾನೆ. ಈ ದುರ್ಘಟನೆಯಲ್ಲಿ (LED TV Explodes) ಆತನ ತಾಯಿ, ಅತ್ತಿಗೆ ಮತ್ತು ಸ್ನೇಹಿತ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ (Uttar Pradesh)  ಗಾಜಿಯಾಬಾದ್‌ನಲ್ಲಿ ಈ ದುರ್ಘಟನೆ ನಡೆದಿದೆ.  ಅತ್ಯಂತ ಪ್ರಬಲವಾದ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಾಂಕ್ರೀಟ್ ಚಪ್ಪಡಿಗಳು ಮತ್ತು ಗೋಡೆಯ ಒಂದು ಭಾಗವು ಕುಸಿದಿದೆ. ಇದು ನೆರೆಹೊರೆಯವರಲ್ಲಿ ಭೀತಿಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.  ಓಮೇಂದ್ರ ಎಂಬುವವರ ಮುಖ, ಎದೆ ಮತ್ತು ಕತ್ತಿನ ಮೇಲೆ ತೀವ್ರವಾಗಿ ಗಾಯವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published by:ಪಾವನ ಎಚ್ ಎಸ್
First published: