1.ಕೊರೋನಾ ಆಘಾತದಿಂದಾಗಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಅಲ್ಲದೆ, ಜನರಲ್ಲಿ ಖರ್ಚು ಮಾಡುವ ಸಾಮರ್ಥ್ಯವೂ ಕಡಿಮೆಯಾಗಿದೆ. ಹೀಗಾಗಿ ಜನರಲ್ಲಿ ಖರ್ಚು ಮಾಡುವ ಸಾಮರ್ಥ್ಯವನ್ನು ಹೆಚ್ಚಿಸುವ ಹಾಗೂ ಆ ಮೂಲಕ ಆರ್ಥಿಕತೆಗೆ ಚುರುಕು ಮುಟ್ಟಿಸುವ ಸಲುವಾಗಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ವಿಶೇಷ ಪ್ಯಾಕೇಜ್ ಒಂದನ್ನು ಘೋಷಿಸಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್; ಆರ್ಥಿಕತೆಗೆ ಚುರುಕು ಮುಟ್ಟಿಸುವ ಸಲುವಾಗಿ ಕೇಂದ್ರದಿಂದ ವಿಶೇಷ ಪ್ಯಾಕೇಜ್
2. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಹಾಗೂ ಪಂಚಭಾಷಾ ನಟಿ ಖುಷ್ಬೂ ಸುಂದರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Khushbu: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ನಟಿ ಖುಷ್ಬೂ
3.ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರವರ ಅಪ್ಪಟ ಅಭಿಮಾನಿಯಾಗಿದ್ದ ತೆಲಂಗಾಣದ ವ್ಯಕ್ತಿಯೊಬ್ಬ ಅವರು ಕೊರೋನಾದಿಂದ ಶೀಘ್ರವಾಗಿ ಚೇತರಿಕೆಯಾಗಲಿ ಎಂದು ಪ್ರತಿನಿತ್ಯ ಪ್ರಾರ್ಥನೆ, ವ್ರತ ಮತ್ತು ಉಪವಾಸ ಮಾಡುತ್ತಿದ್ದ ವ್ಯಕ್ತಿ ಇದೇ ಕಾರಣದಿಂದಾಗಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಕೊರೋನಾದಿಂದ ಟ್ರಂಪ್ ಗುಣಮುಖರಾಗಲೆಂದು ತೆಲಂಗಾಣದಲ್ಲಿ ಉಪವಾಸವಿದ್ದ ವ್ಯಕ್ತಿ ಸಾವು!
4.ಉತ್ತರಪ್ರದೇಶದ ಹತ್ರಾಸ್ ಎಂಬಲ್ಲಿ ಕಳೆದ ತಿಂಗಳು ಓರ್ವ ದಲಿತ ಯುವತಿಯನ್ನು ಕೆಲವರು ಸಾಮೂಹಿಕ ಅತ್ಯಾಚಾರವೆಸಗಿ ಅತ್ಯಂತ ನಿರ್ಧಯವಾಗಿ ಕೊಲೆ ಮಾಡಿದ್ದರು. ಈ ಘಟನೆ ಇದೀಗ ರಾಷ್ಟ್ರಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಲ್ಲದೆ, ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ದಲಿತ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕೀಚಕರು
5.ಕೊರೋನಾ ಸೋಂಕು ನೀಡಿರುವ ಮರ್ಮಾಘಾತಕ್ಕೆ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ನಿರುದ್ಯೋಗ ತಾಂಡವವಾಡುತ್ತಿದೆ. ಸಣ್ಣ ಮಧ್ಯಮ ಕೈಗಾರಿಕೆಗಳು ನಷ್ಟ ಬರಿಸಲಾಗದೆ ಬಾಗಿಲು ಎಳೆದುಕೊಂಡಿವೆ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನ್ಯಾಯಯುತವಾಗಿ ನೀಡಬೇಕಾದ ಜಿಎಸ್ಟಿ ಪಾಲಿನ ಹಣ ನೀಡಲು ಸಹ ಕೇಂದ್ರದ ಬಳಿ ದುಡ್ಡಿಲ್ಲ ಎಂದು ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಸದ್ದು ಮಾಡಿದ್ದರು. ಈ ನಡುವೆ ಇಷ್ಟೆಲ್ಲಾ ಆರ್ಥಿಕ ಸಮಸ್ಯೆಗಳ ನಡುವೆಯೂ ಸಹ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರಯಾಣಕ್ಕೆ ಕೇಂದ್ರ ಸರ್ಕಾರ 8400 ಕೋಟಿ ರೂ ಖರ್ಚು ಮಾಡಿ ಹೊಸ ವಿಮಾನ ಖರೀದಿ ಮಾಡಿರುವುದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಮೋದಿ ಓಡಾಡಲು 8400 ಕೋಟಿ ಬೆಲೆಯ ವಿಮಾನ, ಸೈನಿಕರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್; ರಾಹುಲ್ ಗಾಂಧಿ ಕಿಡಿ
6.ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದ ದಿನದಿಂದಲೂ ಆರೋಗ್ಯ ಖಾತೆ ಅಧಿಕಾರದ ಕುರಿತು ಸಚಿವರಾದ ಶ್ರೀರಾಮುಲು ಮತ್ತು ಕೆ. ಸುಧಾಕರ್ ನಡುವೆ ಹಗ್ಗಾಜಗ್ಗಾಟ ನಡೆಯುತ್ತಲೇ ಇತ್ತು. ಈ ನಡುವೆ ನಿನ್ನೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಬಿ. ಶ್ರೀರಾಮುಲು ಅವರ ಖಾತೆಯನ್ನು ಕೊನೆಗೂ ಬದಲಾಯಿಸಿದ್ದಾರೆ. ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಆರೋಗ್ಯ ಖಾತೆ ಏಕಾಏಕಿ ಬದಲಾವಣೆ; ಸಿಎಂ ಯಡಿಯೂರಪ್ಪ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ
7. ಸಚಿವ ಬಿ. ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಸಚಿವ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಖಾತೆ ಬದಲಾವಣೆಯ ಅಧಿಕೃತ ಪಟ್ಟಿ ಪ್ರಕಟವಾಗಿದ್ದು, ಸಚಿವ ಶ್ರೀರಾಮುಲು ಅವರ ಬಳಿ ಇದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆಯನ್ನೂ ವಾಪಾಸ್ ಪಡೆದಿರುವ ಸಿಎಂ ಯಡಿಯೂರಪ್ಪ ಎರಡು ಖಾತೆಗಳ ಬದಲಾಗಿ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ನೀಡಿದ್ದಾರೆ.
ಖಾತೆ ಬದಲಾವಣೆಗೆ ರಾಜ್ಯಪಾಲರ ಅಂಕಿತ; ಡಾ. ಸುಧಾಕರ್ಗೆ ಬೋನಸ್, ಶ್ರೀರಾಮುಲುಗೆ ಮೈನಸ್!
8. ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದ ದಿನದಿಂದಲೂ ಆರೋಗ್ಯ ಖಾತೆ ಅಧಿಕಾರದ ಕುರಿತು ಸಚಿವರಾದ ಶ್ರೀರಾಮುಲು ಮತ್ತು ಕೆ. ಸುಧಾಕರ್ ನಡುವೆ ಹಗ್ಗಾಜಗ್ಗಾಟ ನಡೆಯುತ್ತಲೇ ಇತ್ತು. ಈ ನಡುವೆ ನಿನ್ನೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಬಿ. ಶ್ರೀರಾಮುಲು ಅವರ ಖಾತೆಯನ್ನು ಕೊನೆಗೂ ಬದಲಾಯಿಸಿದ್ದಾರೆ.
ಶ್ರೀರಾಮುಲು ಗಮನಕ್ಕೆ ತಂದು ಖಾತೆ ಬದಲಾವಣೆ?; ಈ ಪ್ರಶ್ನೆಯನ್ನು ನೀವು ಸಿಎಂಗೆ ಕೇಳಬೇಕು ಎಂದ ಸಚಿವ ಸುಧಾಕರ್!
9. 2018ರ ಅಂತ್ಯಕ್ಕೆ ರಿಲೀಸ್ ಆಗಿದ್ದ ಕೆಜಿಎಫ್ 2 ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಬಾಕ್ಸ್ ಆಫೀಸ್ ಗಳಿಕೆ ವಿಚಾರದಲ್ಲಿ ಈ ಚಿತ್ರ ಶಾರುಖ್ ನಟನೆಯ ಜಿರೋ ಚಿತ್ರವನ್ನು ಹಿಂದಿಕ್ಕಿತ್ತು. ಈ ಚಿತ್ರ ತೆರೆಕಂಡು ಸುಮಾರು ಎರಡು ವರ್ಷ ಕಳೆಯುತ್ತ ಬಂದಿದೆ. ಎಲ್ಲ ಅಂದುಕೊಂಡಂತೆ ನಡೆದಿದ್ದರೆ ದಸರಾ ನಿಮಿತ್ತ ಅಕ್ಟೋಬರ್ 23ರಂದು ಚಿತ್ರ ತೆರೆಗೆ ಬರಬೇಕಿತ್ತು. ಆದರೆ, ಕೊರೋನಾ ಇರುವ ಕಾರಣ ಚಿತ್ರದ ಶೂಟಿಂಗ್ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.
KGF Chapter 2 : ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಬಿಡುಗಡೆ ದೀಪಾವಳಿಗೋ? ಸಂಕ್ರಾಂತಿಗೋ?; ಇಲ್ಲಿದೆ ಮಾಹಿತಿ
10. 13ನೇ ಆವೃತ್ತಿಯ ಐಪಿಎಲ್ನಲ್ಲಿಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣೆಸಾಟ ನಡೆಸಲಿವೆ. ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ 37 ರನ್ಗಳ ಸುಲಭ ಜಯ ಸಾಧಿಸಿದ್ದ ಆರ್ಸಿಬಿ, ಲೀಗ್ನಲ್ಲಿ ಇದುವರೆಗೆ ಆಡಿರುವ 6 ಪಂದ್ಯಗಳಿಂದ 4ರಲ್ಲಿ ಜಯ ದಾಖಲಿಸಿ, 2 ಸೋಲು ಕಂಡಿದೆ. ಸದ್ಯ 8 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
RCB vs KKR: ಇಂದಿನ ಪಂದ್ಯಕ್ಕೆ ಆರ್ಸಿಬಿ ತಂಡದಲ್ಲಿ ಒಂದು ಮಹತ್ವದ ಬದಲಾವಣೆ?: ಇಲ್ಲಿದೆ ಸಂಭಾವ್ಯ XI ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ