Evening Digest: ತೆಲಂಗಾಣ, ಆಂಧ್ರದಲ್ಲಿ ಅವಾಂತರ ಸೃಷ್ಟಿಸಿದ ಮಳೆ, ಮೈಸೂರು ದಸರಾಗೆ ಸಿದ್ಧತೆ: ಟಾಪ್​​ 10 ಸುದ್ದಿಗಳು

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1. ಮನಾಲಿಯನ್ನು ಲಾಹೌಲ್-ಸ್ಪಿತಿ ಕಣಿವೆಯೊಂದಿಗೆ ಸಂಪರ್ಕಿಸುವ ಮತ್ತು ಲಡಾಖ್‌ನ ಲೇಹ್‌ಗೆ ಪ್ರಯಾಣದ ಸಮಯವನ್ನು ಐದು ಗಂಟೆಗಳವರೆಗೆ ಕಡಿಮೆ ಮಾಡುವ ಮಹತ್ವದ ಅಟಲ್ ಸುರಂಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್​ 3 ರಂದು ಉದ್ಘಾಟಿಸಿದ್ದರು. ಆದರೆ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು ಕಾಂಗ್ರೆಸ್​ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ. 2010ರಲ್ಲೇ ಈ ಯೋಜನೆಗೆ ಸೋನಿಯಾ ಗಾಂಧಿ ಶಿಲಾನ್ಯಾಸ ನೆರವೇರಿಸಿದ್ದರು.

  ಅಟಲ್ ಸುರಂಗಕ್ಕೆ ಶಂಕುಸ್ಥಾಪನೆ ಮಾಡಿದ್ದ ಸೋನಿಯಾ ಗಾಂಧಿ ನಾಮಫಲಕವೇ ಮಾಯ; ಕಾಂಗ್ರೆಸ್​ ಆಕ್ರೋಶ

  2.ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತದಿಂದ  ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ನೆರೆಯ ತೆಲಂಗಾಣದಲ್ಲಿಯೂ ಈ ಮಳೆ ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಈ ಮಳೆಯಿಂದ ಸಾಕಷ್ಟು ಹಾನಿಯಾಗಿದೆ.

  ತೆಲಂಗಾಣ, ಆಂಧ್ರದಲ್ಲಿ ಅವಾಂತರ ಸೃಷ್ಟಿಸಿದ ಮಳೆ; ಪ್ರವಾಹಕ್ಕೆ ಕೊಚ್ಚಿ ಹೋಗುತ್ತಿರುವ ಜನರು, ವಾಹನಗಳು

  3. ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಮೊದಲ ಬಾರಿಗೆ ತಮ್ಮ ದೇಶದ ಜನರ ಎದುರು ಸಾರ್ವಜನಿಕವಾಗಿ ಕ್ಷಮೆ ಕೇಳುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಅಲ್ಲದೆ, ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

  ಉತ್ತರ ಕೊರಿಯಾ ಜನರ ಬಳಿ ಮೊದಲ ಬಾರಿ ಕಣ್ಣೀರಿಡುತ್ತಾ ಕ್ಷಮೆ ಕೇಳಿದ ಅಧ್ಯಕ್ಷ ಕಿಮ್ ಜಾಂಗ್ ಉನ್; ಕಾರಣವೇನು ಗೊತ್ತಾ?

  4. ಕೋಡಂಬಾಕ್ಕಂನಲ್ಲಿರುವ ತಮ್ಮ ಕಲ್ಯಾಣ ಮಂಟಪಕ್ಕೆ ಚೆನ್ನೈ ಮಹಾನಗರ ಪಾಲಿಕೆ 6.5 ಲಕ್ಷ ಮೊತ್ತದ ಆಸ್ತಿ ತೆರಿಗೆ ವಿಧಿಸಿದ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟ ರಜಿನೀಕಾಂತ್ ಅವರಿಗೆ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

  ಕಲ್ಯಾಣ ಮಂಟಪಕ್ಕೆ ತೆರಿಗೆ ವಿನಾಯಿತಿ ಬೇಕೆಂದು ಕೋರಿದ ರಜಿನೀಕಾಂತ್​ಗೆ ಮದ್ರಾಸ್ ಹೈಕೋರ್ಟ್ ತಪರಾಕಿ

  5.ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಎರಡೂ ಇಲಾಖೆಗಳಲ್ಲಿನ ಸಮನ್ವಯದ ಕೊರತೆಯನ್ನು ನೀಗಿಸಿ, ಕೊರೋನಾ ಸೋಂಕನ್ನು ನಿಯಂತ್ರಣಕ್ಕೆ ತರುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

  ಎರಡೂ ಇಲಾಖೆಗಳ ನಡುವೆ ಸಮನ್ವಯತೆ ತರಲು ಸಿಎಂ ಸೂಚಿಸಿದ್ದಾರೆ; ಸಚಿವ ಡಾ.ಕೆ. ಸುಧಾಕರ್

  6.ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹೀಗಾಗಿ, 7 ಜಿಲ್ಲೆಗಳಲ್ಲಿ ಇಂದು ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಮೂರ್ನಾಲ್ಕು ತಿಂಗಳಿಂದ ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ.

  ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ; ಗಂಜಿ ಕೇಂದ್ರ ತೆರೆಯಲು ಎಸ್​.ಆರ್​. ಪಾಟೀಲ್ ಆಗ್ರಹ

  7. ಬಯಲು ನಾಡು ಕಲಬುರ್ಗಿಯಲ್ಲಿ ಕುಂಭದ್ರೋಣ ಮಳೆಯಾಗಿದೆ. ಮಹಾ ಮಳೆಗೆ ಕಲಬುರ್ಗಿ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದೆ. ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿ ಆಸ್ಪತ್ರೆಗೆ ಹೋಗಲಾರದ ಸ್ಥಿತಿಯಲ್ಲಿದ್ದ ಮಹಿಳೆಗೆ ಅಜ್ಜಿಯೊಬ್ಬರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಘಟನೆ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

  ಕಲಬುರ್ಗಿ : ಮಹಾಮಳೆಯ ಪ್ರವಾಹದಲ್ಲಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಅಜ್ಜಿ

  8. ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಜೋರಾಗಿ ನಡೆದಿದೆ. ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ತಾಲೀಮು ನಡೆಸಲಾಗುತ್ತಿದೆ. ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

  Mysuru Dasara 2020: ಮೈಸೂರು ದಸರಾಗೆ ಸಿದ್ಧತೆ; ಇಂದು ರಾತ್ರಿಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

  9.ಭಾರತದಲ್ಲಿ ಕೊರೋನಾ ವೈರಸ್​ ನಿಯಂತ್ರಣಕ್ಕೆ ಮಾರ್ಚ್​ ತಿಂಗಳಲ್ಲಿ ಲಾಕ್​​ಡೌನ್​ ಘೋಷಣೆ ಮಾಡಲಾಗಿತ್ತು. ಇದು ಎಲ್ಲ ಕ್ಷೇತ್ರಗಳ ಮೇಲೆ ಭಾರೀ ಪರಿಣಾಮ ಬೀರಿತ್ತು. ಅದರಲ್ಲೂ ಮನರಂಜನಾ ಕ್ಷೇತ್ರಕ್ಕೆ ಭಾರೀ ಹೊಡೆತ ಉಂಟಾಗಿತ್ತು. ಕಳೆದ ಏಳು ತಿಂಗಳಿಂದ ಚಿತ್ರಮಂದಿರಗಳು ತೆರೆದಿಲ್ಲ. ಕೊನೆಗೂ ಅನ್​ಲಾಕ್​ 5.0ನಲ್ಲಿ ಚಿತ್ರ ಮಂದಿರ ರೀ ಓಪನ್​ಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

  ಥಿಯೇಟರ್ ತೆರೆಯಲು ಮೂಡದ ಒಮ್ಮತ; ರಾಜ್ಯಾದ್ಯಂತ ಅರ್ಧದಷ್ಟು ಚಿತ್ರಮಂದಿರಗಳು ಮಾತ್ರ ಓಪನ್

  10. ಮಂಗಳವಾರ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 29ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ ತಂಡ 20 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಜಯ ದಾಖಲಿಸಿತು. ಈ ಮಧ್ಯೆ ಪಂದ್ಯ ನಡೆಯುವ ವೇಳೆ ಅಂಪೈರ್​ ತೆಗೆದುಕೊಂಡ ನಿರ್ಧಾರ ಸಾಕಷ್ಟು ಟೀಕೆಗಳಿಗೆ ಕಾರಣವಾಗಿದೆ.

  MS Dhoni: ಧೋನಿ ಸಿಟ್ಟನ್ನು ನೋಡಿ ನಿರ್ಧಾರವನ್ನೇ ಬದಲಿಸಿದ ಅಂಪೈರ್​!; ಅಸಮಾಧಾನ ಹೊರಹಾಕಿದ ವಾರ್ನರ್​
  Published by:G Hareeshkumar
  First published: