Evening Digest: 7 ತಿಂಗಳ ಬಳಿಕ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ, ಮಳೆಗೆ ಕೊಚ್ಚಿ ಹೋದ ಈರುಳ್ಳಿ ಬೆಳೆ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಕೊರೋನಾ ಲಾಕ್​ಡೌನ್ ಸಂದರ್ಭದಲ್ಲಿ ಇಡೀ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ನಡುವೆ ಏಷ್ಯಾದ ಬಲಿಷ್ಟ ಆರ್ಥಿಕತೆ ಎನಿಸಿಕೊಂಡ ಭಾರತದ ಜಿಡಿಪಿ ಮೌಲ್ಯ ಸಹ ಶೇ.-23.8ಕ್ಕೆ ಕುಸಿದಿದೆ. ಆದರೆ, ಇದೇ ಸಂದರ್ಭದಲ್ಲಿ ನೆರೆಯ ಬಾಂಗ್ಲಾದೇಶ, ಶ್ರೀಲಂಕಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಆರ್ಥಿಕತೆ ಭಾರತದ ಜಿಡಿಪಿ ಗಿಂತ ಮುಂದಿದೆ ಎಂದು ಇತ್ತೀಚೆಗೆ ಎಂದು ಐಎಂಎಫ್​ (International Monetary Fund) ಒಂದು ವರದಿಯನ್ನು ಬಿಡುಗಡೆ ಮಾಡಿತ್ತು. ಇದೇ ವರದಿಯನ್ನು ಮುಂದಿಟ್ಟು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ, ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

  ಕೊರೋನಾ ನಿರ್ವಹಣೆ-ಆರ್ಥಿಕ ಚೇತರಿಕೆಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಅಫ್ಘಾನಿಸ್ತಾನ ಮುಂದಿದೆ; ರಾಹುಲ್ ಗಾಂಧಿ ಕಿಡಿ

  2. ಲಾಕ್​ಡೌನ್​ನಿಂದಾಗಿ ದೇವಸ್ಥಾನ, ಮಾಲ್, ಮಸೀದಿಗಳು, ಥಿಯೇಟರ್​ಗಳೆಲ್ಲವನ್ನೂ ಮುಚ್ಚಲಾಗಿತ್ತು. ಅತ್ಯಗತ್ಯ ಸೌಲಭ್ಯಗಳನ್ನು ಹೊರತುಪಡಿಸಿ ಬೇರಾವುದೂ ತೆರೆದಿರಲಿಲ್ಲ. ಇದೀಗ ಒಂದೊಂದಾಗಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದ್ದು, ನಿಯಮಿತ ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. 

  7 ತಿಂಗಳ ಬಳಿಕ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ; ಇಂದಿನಿಂದ 5 ದಿನ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

  3.ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಎಂಬ ಮಾಜಿ ಯೋಧನನ್ನು ಪಂಜಾಬ್‌ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ಹಲ್ಲೆಕೋರರು ಅಥವಾ ಭಯೋತ್ಪಾದಕರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  ಪಂಜಾಬ್​ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್ ಸಿಂಗ್

  4. ಲಡಾಖ್​ನಲ್ಲಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಚರ್ಚೆಗಳ ಫಲಿತಾಂಶವನ್ನು ನಾನು ಊಹಿಸಲು ಬಯಸುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಭಾರತ ಮತ್ತು ಚೀನಾ ನಡುವೆ ಕಳೆದ ಹಲವು ತಿಂಗಳುಗಳಿಂದ ಲಡಾಖ್ ಗಡಿಗೆ ಸಂಬಂಧಿಸಿದಂತೆ ತಕರಾರುಗಳು ನಡೆಯುತ್ತಲೇ ಇವೆ. ಈ ನಡುವೆ ಕಳೆದ ಜೂನ್ ತಿಂಗಳಲ್ಲಿ ಎರಡೂ ದೇಶಗಳ ನಡುವೆ ಗಡಿ ಪ್ರದೇಶದಲ್ಲಿ ಘರ್ಷಣೆ ಉಂಟಾಗಿದ್ದು, ಈ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು

  ಗಡಿ ತಂಟೆಗೆ ಸಂಬಂಧಿಸಿದಂತೆ ಚೀನಾ ಜೊತೆಗಿನ ಮಾತುಕತೆ ಗೌಪ್ಯವಾಗಿರಲಿದೆ; ಸಚಿವ ಎಸ್​. ಜೈಶಂಕರ್​

  5.ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 1,09,719  ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​​ ಸೈಟ್​ ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಬಹುದು.

  ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಶೇ. 51.28 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

  6. ಫಸಲಿಗೆ ಬಂದ ಈರುಳ್ಳಿ  ಬೆಳೆಯನ್ನು ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಎನ್ನುತ್ತಿದ್ದ ರೈತರಿಗೆ ಮಳೆ ಆಘಾತ ನೀಡಿದೆ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಈರುಳ್ಳಿ ಬೆಳೆಗಳು ಕೊಳೆಯಲಾರಂಭಿಸಿದೆ. ಸಾಲ ಸೋಲ ಮಾಡಿ ಈರುಳ್ಳಿ ಬೆಳೆದಿದ್ದ ಬೆಳಗಾರರಿಗೆ ಈ ಬಾರಿ ಮಳೆ ನಷ್ಟ ಉಂಟು ಮಾಡಿದೆ.

  Karnataka Flood: ಮಳೆಗೆ ಕೊಚ್ಚಿ ಹೋದ ಈರುಳ್ಳಿ ಬೆಳೆ; ಕಣ್ಣೀರಲ್ಲಿ ರೈತರು

  7.ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಬೀದರ್​, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ರುದ್ರನರ್ತನಕ್ಕೆ ಜನರು ತತ್ತರಿಸಿದ್ದಾರೆ. ಮನೆ ಮಠ ಕಳೆದುಕೊಂಡು ಈಗಾಗಲೇ ಜನರು ನಿರಾಶ್ರಿತ ಶಿಬಿರಗಳನ್ನು ಸೇರಿದ್ದಾರೆ.

  ಪ್ರವಾಹ ತುರ್ತು ಪರಿಹಾರ ಕಾರ್ಯಕ್ಕೆ 85 ಕೋಟಿ ರೂ ಬಿಡುಗಡೆ; ಸಂತ್ರಸ್ತರ ಅಗತ್ಯ ಸೇವೆಗೆ ಸಿಎಂ ಸೂಚನೆ

  8. ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ ಬಂದಿದ್ದು, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡೋದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅಶೋಕ್, ಹಲವು ವರ್ಷಗಳ ನಂತರ ಈ ಮಟ್ಟದ ದೊಡ್ಧ ಪ್ರವಾಹ ಬಂದಿದ್ದು ಜನತೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದರು.

  ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ; ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಕೇಂದ್ರಕ್ಕೆ ಮನವಿ; ಆರ್.ಅಶೋಕ್

  9.ಇಂದಿನಿಂದ ಬಹುತೇಕ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ ಬಾಗಿಲು ತೆರೆದಿವೆ. ಏಳು ತಿಂಗಳ ಬಳಿಕ ಬೆಳ್ಳಿತೆರೆ ಮೇಲೆ ಸಿನಿಮಾ ರಿಲೀಸ್ ಆಗಿದೆ. ನಿನ್ನೆಯಿಂದ ಸಿನಿಮಾ ಥಿಯೇಟರ್, ಮಲ್ಟಿಪ್ಲೆಕ್ಸ್ ಬಾಗಿಲು ತೆರೆಯಲು ಅವಕಾಶ ಸಿಕ್ಕಿದ್ದರೂ, ಕೆಲವೇ ಚಿತ್ರಮಂದಿರಗಳು ಮಾತ್ರ ಓಪನ್ ಆಗಿದ್ದವು. ಅದರ ಜೊತೆಗೆ ಕೆಲವು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರೇಕ್ಷಕರಿಲ್ಲದೆ ಕೆಲವು ಸಿನಿಮಾ ಶೋಗಳನ್ನು ಕ್ಯಾನ್ಸಲ್​ ಸಹ ಮಾಡಲಾಗಿತ್ತು. ಆದರೆ ಇಂದಿನಿಂದ ಸಾಕಷ್ಟು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್​ಗಳು ಸಿನಿಮಾ ಪ್ರದರ್ಶನಕ್ಕೆ ಮುಂದಾಗಿವೆ.

  ಥಿಯೇಟರ್​ಗೆ ಜನರನ್ನ ಸೆಳೆಯೋಕೆ ಹೊಸ ತಂತ್ರ: ಮಲ್ಟಿಪ್ಲೆಕ್ಸ್​- ಚಿತ್ರಮಂದಿರಗಳಲ್ಲಿ ಕಡಿಮೆಯಾದ ಟಿಕೆಟ್ ದರ

  10. ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯುವ ಮೂಲಕ ಗೇಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮತ್ತೆ ಮಿಂಚಿದರು. ಐಪಿಎಲ್ 2020 ಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ 45 ಎಸೆತಗಳಲ್ಲಿ 53 ರನ್ ಬಾರಿಸಿ ಗಮನ ಸೆಳೆದರು.

  IPL 2020: ಆತ ಶಾರ್ಜಾದಲ್ಲಿ ಸಿಕ್ಸ್ ಸಿಡಿಸಿದ್ರೆ ಚೆಂಡು ಅಬುದಾಭಿಯಲ್ಲಿ ಬೀಳಬಹುದು: ಯುವರಾಜ್ ಸಿಂಗ್
  Published by:G Hareeshkumar
  First published: