Evening Digest: ಇಂದಿನಿಂದ ಹೊಸ ಮೋಟಾರು ವಾಹನ ನಿಯಮ ಜಾರಿ, ಥಿಯೇಟರ್ ಮಾಲೀಕರಿಗೆ ಸಿಹಿಕಹಿ ಸುದ್ದಿ: ಟಾಪ್​​ 10 ಸುದ್ದಿಗಳು

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಕೇಂದ್ರ ಸರ್ಕಾರ ನೂತನ ಮೋಟಾರು ವಾಹನ ನಿಯಮಾವಳಿ- 1989ಕ್ಕೆ ತಿದ್ದುಪಡಿ ತಂದಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ದಾಖಲೆಗಳ ಡಿಜಿಟಲೀಕರಣಕ್ಕೆ ಆದ್ಯತೆ ನೀಡಿದೆ. ಇದರಿಂದಾಗಿ ಇನ್ನುಮುಂದೆ ನೀವು ನಿಮ್ಮ ವಾಹನದಲ್ಲಿ ಆರ್​ಸಿ ಬುಕ್, ಇನ್ಶುರೆನ್ಸ್​, ಲೈಸೆನ್ಸ್​ ಇಟ್ಟುಕೊಂಡು ಓಡಾಡಬೇಕಾಗಿಲ್ಲ. ನೀವು ಆ ಎಲ್ಲ ದಾಖಲೆಗಳನ್ನು ಮನೆಯಲ್ಲೇ ಮರೆತು ಬಂದರೂ ಟ್ರಾಫಿಕ್ ಪೊಲೀಸರು ಶುಲ್ಕ ವಿಧಿಸುವಂತಿಲ್ಲ.

  New Motor Vehicle Rules: ಇಂದಿನಿಂದ ಹೊಸ ಮೋಟಾರು ವಾಹನ ನಿಯಮ ಜಾರಿ; ಇಲ್ಲಿದೆ ಸಂಪೂರ್ಣ ಮಾಹಿತಿ

  2. ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 19 ವರ್ಷದ ದಲಿತ ಯುವತಿ ಚಿಕಿತ್ಸೆ ಫಲಕಾರಿಯಾಗದೆ 2 ದಿನಗಳ ಹಿಂದೆ ಸಾವನ್ನಪ್ಪಿದ್ದಳು. ಆ ಪ್ರಕರಣದ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಎಸ್​ಐಟಿ ತನಿಖೆಗೆ ವಹಿಸಿತ್ತು. ಆಕೆ ಸಾವನ್ನಪ್ಪಿದ ದಿನವೇ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ.

  ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್!; ವಿಷದ ಇಂಜೆಕ್ಷನ್ ನೀಡಿ, ಮೂಳೆ ಮುರಿದು ಯುವತಿಯ ಹತ್ಯೆ

  3.ದೆಹಲಿಯಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಹತ್ರಾಸ್ ಎಂಬ ಊರಿನ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು. 2 ವಾರದ ಹಿಂದೆ ಹೊಲದಲ್ಲಿ ಅತ್ಯಾಚಾರ ನಡೆಸಿ, ಗಂಭೀರವಾಗಿ ಗಾಯಗೊಳಿಸಲಾಗಿತ್ತು. ಆಕೆ ಮಂಗಳವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅದೇ ದಿನ ಬಲರಾಂಪುರದ ದಲಿತ ಯುವತಿಯ ಮೇಲೂ ಅತ್ಯಾಚಾರ ನಡೆದು, ಆಕೆಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣಗಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮೃತ ಯುವತಿಯರ ಸಾವಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಲಾಗಿದೆ.

  ಲಾಠಿ ಚಾರ್ಜ್ ಮಾಡಿ, ತಳ್ಳಿದರು; ಉತ್ತರ ಪ್ರದೇಶ ಪೊಲೀಸರ ವಿರುದ್ಧ ರಾಹುಲ್ ಗಾಂಧಿ ಆರೋಪ

  4. ವಿಧಾನಪರಿಷತ್ ನಲ್ಲಿ ಅಂಗೀಕೃತಗೊಳ್ಳದ ಎಪಿಎಂಸಿ ತಿದ್ದುಪಡಿ ವಿಧೇಯಕ ಹಾಗೂ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ವಿಧಾನಸೌಧದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ

  ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ವಿಧೇಯಕಕ್ಕೆ ಮತ್ತೆ ಸುಗ್ರೀವಾಜ್ಞೆ ತರಲು ಸಂಪುಟ ಸಭೆ ನಿರ್ಧಾರ

  5.ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ್ದು ನಮಗೆಲ್ಲರಿಗೂ ಬೇಸರ ತರಿಸುವ ವಿಚಾರ. ಅನೇಕ ಸಾಕ್ಷಿಗಳನ್ನು ಜನರು ನೋಡಿದ್ದಾರೆ. 1992ರ ಡಿಸೆಂಬರ್ 6ರಂದು ನಡೆದ ಘಟನೆಯನ್ನು ಎಲ್ಲರೂ ನೋಡಿದ್ದಾರೆ. ಯಾರು‌ ಮಸೀದಿ ಮೇಲೆ‌ ಹತ್ತಿದ್ದರು, ಯಾರು‌ ಕೂತಿದ್ದರು ಎಲ್ಲವೂ ಗೊತ್ತಿದೆ. ನಮ್ಮ ದೇಶದ ಪತ್ರಿಕೆ ಸೇರಿದಂತೆ, ವಿಶ್ವದ ಎಲ್ಲಾ ಪತ್ರಿಕೆಗಳಲ್ಲಿ ದೃಶ್ಯ ರೂಪದ ವರದಿಯಾಗಿದೆ.

  ಯುಪಿ ದಲಿತ ಯುವತಿ ಅತ್ಯಾಚಾರ ಪ್ರಕರಣ; ಸಿಎಂ ಆದಿತ್ಯನಾಥ್ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

  6. ನವೆಂಬರ್‌ 3ರಂದು ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್​.ಆರ್​. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  ಉಪ ಚುನಾವಣೆಯಲ್ಲಿ ಮೈತ್ರಿಯ ಪ್ರಶ್ನೆಯೇ ಇಲ್ಲ; ಹೆಚ್​.ಡಿ. ಕುಮಾರಸ್ವಾಮಿ ಸ್ಪಷ್ಟನೆ

  7. ರಾಜ್ಯಾದ್ಯಂತ 2-3 ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಬೆಂಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದ ಕೆಲವು ಭಾಗಗಳಲ್ಲಿ ನಿನ್ನೆ ತುಂತುರು ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ ಅಕ್ಟೋಬರ್ 3ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  Karnataka Weather: ಉತ್ತರ ಕರ್ನಾಟಕದಲ್ಲಿ ನಿಲ್ಲದ ವರುಣನ ಆರ್ಭಟ; ಅ. 3ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ

  8. ರಾಜ್ಯದಲ್ಲಿ ಉಪ ಚುನಾವಣೆ ರಂಗೇರುತ್ತಿದೆ. ಎರಡು ಕ್ಷೇತ್ರಗಳ ಉಪ ದಿನಾಂಕ ಘೋಷಣೆ ನಂತರ ಮೂರು ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿದೆ. ಅದರಲ್ಲೂ  ತೀವ್ರ ಕುತೂಹಲ ಕೆರಳಿಸಿರೊದು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರ. ಈಗ ನಡೆಯುತ್ತಿರುವ ಉಪಚುನಾವಣೆ ಗೆ ಮೂರುಗಳಿಂದ ಅಭ್ಯರ್ಥಿ ಯಾರು ಅನ್ನೋದು ಯಕ್ಷ ಪ್ರಶ್ನೆ ಆಗಿದೆ. ಇಲ್ಲಿ ಸಾಕಷ್ಟು ಚರ್ಚೆ ಆಗುತ್ತಿರುವುದು ಐಎಎಸ್ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧೆ ವಿಚಾರ. ಕುಸುಮಾ ಸ್ಪರ್ಧೆ ಖಚಿತ ಎಂಬ ಮಾತು ಕೇಳಿಬರುತ್ತಿದೆ.

  ಆರ್.ಆರ್. ನಗರ ಉಪಚುನಾವಣೆ: ಡಿಕೆ ರವಿ ಹೆಂಡತಿ ಕುಸುಮಾ ಸ್ಪರ್ಧೆ?

  9.ಅನ್​ಲಾಕ್ 5ರಲ್ಲಿ ಇದೇ ಅಕ್ಟೋಬರ್ 15ರಿಂದ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಇದು ಥಿಯೇಟರ್ ಮಾಲೀಕರು ಮಾತ್ರವಲ್ಲ ಚಿತ್ರರಂಗ ಹಾಗೂ ಸಿನಿಪ್ರೇಮಿಗಳಲ್ಲೂ ಸಂತಸ ಮೂಡಿಸಿದೆ. ಆದರೆ ಲಾಕ್​ಡೌನ್​ ನಂತರ ಸಿನಿಮಾ ಪ್ರದರ್ಶನ ಹೇಗಿರುತ್ತೆ? ಮಾರ್ಗಸೂಚಿಗಳು ಹೇಗಿರುತ್ತವೆ? ಥಿಯೇಟರ್ ಮಾಲೀಕರು ಯಾವೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು? ಪ್ರೇಕ್ಷಕರು ಹೇಗಿರಬೇಕು? ಎಂಬ ಪ್ರಶ್ನೆಗಳು ಮೂಡುವುದು ಸಹಜ. ಅದಕ್ಕೆ ಕರ್ನಾಟಕ  ರಾಜ್ಯ ಥಿಯೇಟರ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಕೆ.ವಿ. ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

  ಥಿಯೇಟರ್ ಮಾಲೀಕರಿಗೆ ಸಿಹಿ-ಕಹಿ ಸುದ್ದಿ: ಲಾಕ್​ಡೌನ್​ ಮುಗಿದ ಖುಷಿ, ಮುಂದೇನು ಎಂಬ ಆತಂಕ!

  10. ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಎರಡು ಸೋಲು ಕಂಡಿರುವ ಕಿಂಗ್ಸ್​ ಇಲವೆನ್​ ಪಂಜಾಬ್​ ಹಾಗೂ ಮುಂಬೈ ಇಂಡಿಯನ್ಸ್​ ಇಂದು ಮುಖಾಮುಖಿ ಆಗುತ್ತಿವೆ. ನಾಯಕ ಕೆಎಲ್​ ರಾಹುಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಫಾರ್ಮ್​ನಲ್ಲಿರುವುದರಿಂದ ಪಂಜಾಬ್​ಗೆ ದೊಡ್ಡ ಬಲ ಸಿಕ್ಕಂತಾಗಿದೆ. ಇನ್ನು, ಮುಂಬೈ ತಂಡದಲ್ಲಿ ಇಶನ್​ ಕಿಶನ್​ ಒಳ್ಳೆಯ ಫಾರ್ಮ್​ ಕಂಡುಕೊಂಡಿದ್ದು, ಇಂದು ಕೂಡ ಅವರು ಸಿಡಿಯುವ ಸಾಧ್ಯತೆ ಇದೆ.

  IPL 2020 KXIP vs MI: ಮುಂಬೈಗೆ ಕನ್ನಡಿಗರ ಭಯ!; ಮತ್ತೆ ಸಿಡಿಯಲಿದ್ದಾರಾ ರಾಹುಲ್​, ಮಯಾಂಕ್​?
  Published by:G Hareeshkumar
  First published: