Evening Digest: ಅಸ್ಸಾಂನಲ್ಲಿ ರೈಲು ಹರಿದು ಎರಡು ಆನೆ ಸಾವು, ರಾಜ್ಯದಲ್ಲಿರೋದು ಜೆಸಿಬಿ ಸರಕಾರ - ಬಸವರಾಜ ಹೊರಟ್ಟಿ ವ್ಯಂಗ್ಯ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಸೆಪ್ಟೆಂಬರ್ 27 ರಂದು ಇಲ್ಲಿನ ಪಥಾರ್ಖುಲಾ ಮತ್ತು ಲಾಮ್ಸಾಖಾಂಗ್ ನಡುವಿನ ರೈಲ್ವೆ ಹಳಿಯಲ್ಲಿ ನಡೆದ ಅಪಘಾತದಲ್ಲಿ ಎರಡು ಆನೆಗಳು ಮೃತಪಟ್ಟಿದ್ದವು. ಹೀಗಾಗಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 2 ಆನೆಗಳನ್ನು ಕೊಂದಿದ್ದಕ್ಕಾಗಿ ಬಾಮುನಿಮೈದನ್ ರೈಲ್ವೆ ಯಾರ್ಡ್​ನಿಂದ ಮಂಗಳವಾರ ಅಪಘಾತ ಮಾಡಿದ್ದ ರೈಲ್ವೆ ಇಂಜಿನ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

  ಅಸ್ಸಾಂನಲ್ಲಿ ರೈಲು ಹರಿದು ಎರಡು ಆನೆ ಸಾವು; ರೈಲ್ವೆ ಎಂಜಿನ್​ ವಶಪಡಿಸಿಕೊಂಡ ಅರಣ್ಯ ಅಧಿಕಾರಿಗಳು

  2. ಬಿಹಾರದ ಚುನಾವಣೆ ದಿನಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಮೈತ್ರಿಕೂಟ ಮತ್ತೊಂದು ಅವಧಿಗೆ ಅಧಿಕಾರ ಹಿಡಿಯಲು ಕಾತರವಾಗಿದೆ. ಈ ನಡುವೆ ವಿರೋಧ ಪಕ್ಷವಾದ ಆರ್​ಜೆಡಿ ರಾಜ್ಯಾದ್ಯಂತ ವ್ಯಾಪಕವಾದ ಪ್ರಚಾರ ನಡೆಸುತ್ತಿದೆ. ಅಲ್ಲದೆ, ಯುವ ನಾಯಕ ತೇಜಸ್ವಿ ಯಾದವ್ ರಾಜ್ಯದ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ನಿತೀಶ್ ಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ.

  ಸಿಎಂ ನಿತೀಶ್​ ಕುಮಾರ್​ ಬಿಹಾರದ ಜನರಿಗೆ ದ್ರೋಹವೆಸಗಿದ್ದಾರೆ; ಲಾಲೂ ಪ್ರಸಾದ್ ಯಾದವ್ ಕಿಡಿ

  3. ಆಂಗ್ಲ ಸುದ್ದಿ ಮಾಧ್ಯಮವಾದ ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್​​ಪಿ ತಿರುಚಿದ ಪ್ರಕರಣ ಪ್ರಸ್ತುತ ದೇಶದಲ್ಲಿ ಅದರಲ್ಲೂ ಮಹಾರಾಷ್ಟ್ರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಟಿಆರ್​ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಈಗಾಗಲೇ ಅನೇಕರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ರಿಪಬ್ಲಿಕ್ ಟಿವಿ ಸಂಪಾದಕ 46 ವರ್ಷದ ಅರ್ನಾಬ್ ಗೋಸ್ವಾಮಿ ಸಹ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಟಿಆರ್​ಪಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಈಗಾಗಲೇ ತನಿಖೆಯನ್ನು ಆರಂಭಿಸಿರುವ ಸಿಬಿಐ ಪೊಲೀಸರು ಪ್ರಕರಣದ ಸಂಬಂಧ ಎಫ್ಐಆರ್ ಸಹ ದಾಖಲಿಸಿದ್ದಾರೆ.

  ಟಿಆರ್​ಪಿ ಹಗರಣ; ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಯನ್ನು ನಿರ್ಬಂಧಿಸಿದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ

  4.ಇಡೀ ವಿಶ್ವಕ್ಕೆ ಮಾರಕವಾಗಿರುವ ಕೊರೋನಾ ಸೋಂಕಿಗೆ ಈಗಾಗಲೇ ಲಕ್ಷಾಂತರ ಜನ ಮೃತಪಟ್ಟಿದ್ದಾರೆ. ಕೋಟ್ಯಾಂತರ ಜನ ಈ ಸೋಂಕಿಗೆ ತುತ್ತಾಗಿದ್ದಾರೆ. ಭಾರತದಲ್ಲೂ ಸಹ ಲಕ್ಷಾಂತರ ಜನರ ಜೀವಕ್ಕೆ ಕುತ್ತು ತಂದಿರುವ ಕೊರೋನಾಗೆ ಲಸಿಕೆ ಕಂಡುಹಿಡಿಯಲು ವಿಶ್ವದ ಅನೇಕ ಫಾರ್ಮಾ ಸಂಸ್ಥೆಗಳು ದೇಶಗಳು ಕಳೆದ ಒಂದು ವರ್ಷದಿಂದ ಸತತ ಸಂಶೋಧನೆಯಲ್ಲಿ ತೊಡಗಿವೆ.

  ಅಸ್ಟ್ರಾಜೆನೆಕಾ ಕೋವಿಡ್-19 ಲಸಿಕೆ ಪ್ರಯೋಗ; ಕ್ಲಿನಿಕಲ್ ಟ್ರಯಲ್​ನಲ್ಲಿ ಸ್ವಯಂಸೇವಕ ಸಾವು!

  5. ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಹತಾಶರಾಗಿದ್ದಾರೆ. ಅದಕ್ಕಾಗಿ ಅವರು ಪೊಲೀಸರಿಗೆ ವಾರ್ನ್ ಮಾಡ್ತಾರೆ. ಮೈ ಎಲ್ಲಾ ಪರಚಿಕೊಳ್ತಿದ್ದಾರೆ. ಚುನಾವಣೆಯನ್ನು ಚುನಾವಣೆ ರೀತಿ ನಡೆಸಬೇಕೇ ಹೊರತು, ಜನರ ವಿಶ್ವಾಸ ಗಳಿಸಬೇಕೇ ಹೊರತು, ಅವರ ಮೇಲೆ ದಬ್ಬಾಳಿಕೆ ಮಾಡೋದು ಸರಿಯಲ್ಲ. ಬಾಯಿಗೆ ಬಂದಂತೆ ಮಾತಾಡೋದು, ಇಷ್ಟ ಬಂದಂಗೆ ಮಾಡೋದು ಇವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಮತದಾರರು ಇಂತಹವರನ್ನೆಲ್ಲಾ ಎಷ್ಟು ಜನರನ್ನು ನೋಡಿದ್ದಾರೋ.  ಇಂತಹ ನೂರಾರು ಜನರನ್ನು ಪ್ಯಾಕ್ ಮಾಡಿ ಮಾಡಿ ಎಲ್ಲೆಲ್ಲೋ ಕಳುಹಿಸಿದ್ದಾರೆ‌ ಎಂದು ಲೇವಡಿ ಮಾಡಿದರು.

  ಡಿಕೆ ಶಿವಕುಮಾರ್ ಬಂಡೆ ಏನಲ್ಲ, ಅವ್ರು ಬಂಡೆ ಒಡೆದು ಬದುಕಿರೋದು; ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ

  6.ರಾಜ್ಯದಲ್ಲಿರೋದು ಬಿಜೆಪಿ ಸರಕಾರ ಅಲ್ಲ, ಜೆಸಿಬಿ ಸರಕಾರ, ಅಂದ್ರೆ ಜನತಾ ದಳ, ಕಾಂಗ್ರೆಸ್ ಮತ್ತು ಬಿಜೆಪಿಯ ಸಮ್ಮಿಶ್ರ ಸರಕಾರ. ಈಗಿನ ಸರಕಾರದಲ್ಲಿ ಜೆಡಿಎಸ್, ಕಾಂಗ್ರೆಸ್‌ನವರೇ ಜಾಸ್ತಿ ಇದ್ದಾರೆ. ಅಧಿಕಾರ ಹೋದರೆ ಅವರೆಲ್ಲ ಮತ್ತೆ ಅವರವರ ಪಕ್ಷಗಳಿಗೆ ಮರಳುತ್ತಾರೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದರು.

  ರಾಜ್ಯದಲ್ಲಿರೋದು ಜೆಸಿಬಿ ಸರಕಾರ; ಮಾಜಿ ಸಚಿವ ಬಸವರಾಜ ಹೊರಟ್ಟಿ ವ್ಯಂಗ್ಯ

  7.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ವಿರುದ್ಧ ಮತ್ತೊಮ್ಮೆ ಟ್ವಿಟರ್​ನಲ್ಲಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಳಿನ್ ಕುಮಾರ್​ ಕಟೀಲ್​ ಓರ್ವ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಕಟೀಲ್​ ಒಬ್ಬ ಕಾಡು ಮನುಷ್ಯ, ಸಂಘ ಪರಿವಾರದಲ್ಲಿ ಮಾನವಂತರಿದ್ದರೆ ಅವರಿ​ಗೆ ಬುದ್ಧಿಹೇಳಿ; ಸಿದ್ದರಾಮಯ್ಯ ಕಿಡಿ

  8.ಭೀಮಾ ನದಿಯ ಪ್ರವಾಹಕ್ಕೆ ನದಿ ಪಾತ್ರದ ಜನರ ಬದುಕೇ ನಲುಗಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾದ ಸಂತ್ರಸ್ತರನ್ನು ರಕ್ಷಿಸಬೇಕಿದ್ದ ಅಧಿಕಾರಿಯೊಬ್ಬರು ಪ್ರವಾಹ ಸಂತ್ರಸ್ತರ ಜೊತೆ ಹುಚ್ಚಾಟ ನಡಸಿದ ಘಟನೆ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

  ಪ್ರವಾಹ ಪೀಡಿತ ಪ್ರದೇಶದಲ್ಲಿ ಪಿಎಸ್ಐಗೆ ಚೆಲ್ಲಾಟ ; ಸಂತ್ರಸ್ತರಿಗೆ ಪ್ರಾಣ ಸಂಕಟ

  9. ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್​ ಈಗ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಸರ್ಜಾ ಕುಟುಂಬಕ್ಕೆ ಜೂನಿಯರ್​ ಸರ್ಜಾ ಅವರ ಆಗಮನವಾಗಿದೆ.

  Meghana Raj: ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್; ಸಂಭ್ರಮದಲ್ಲಿ ಚಿರು ಸರ್ಜಾ ಫ್ಯಾಮಿಲಿ

  10. ಐಪಿಎಲ್​ನಲ್ಲಿ ಇಂದು ನಡೆಯಲಿರುವ 40ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಸೆಣೆಸಾಟ ನಡೆಸಲಿವೆ. ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಮುಂದಿನ ಹಂತಕ್ಕೆ ತಲುಪಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ.
  Published by:G Hareeshkumar
  First published: