1.ನಿರೀಕ್ಷೆಯಂತೆ ಹಾಗೂ ಸುಪ್ರೀಂ ಕೋರ್ಟ್ ಅಣತಿಯಂತೆ ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿಯಲ್ಲಿನ ಸಾಲಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಆರು ತಿಂಗಳ ಅವಧಿಯಲ್ಲಿನ ಎರಡು ಕೋಟಿ ರೂ ವರೆಗಿನ ಸಾಲಗಳಿಗೆ ಇದು ಅನ್ವಯ ಆಗುತ್ತದೆ. ಹಾಗೆಯೇ, ವಿಶೇಷವೆಂದರೆ ಮೊರಟೋರಿಯಮ್ ಸೌಲಭ್ಯದ ಆಯ್ಕೆ ಮಾಡದ ಸಾಲಗಳಿಗೂ ಇದೂ ಅನ್ವಯ ಆಗುತ್ತದೆ.
ದಸರಾ ಉಡುಗೊರೆ: ಕೇಂದ್ರ ಸರ್ಕಾರದಿಂದ 6,500 ಕೋಟಿ ಮೊತ್ತದ ಚಕ್ರಬಡ್ಡಿ ಮನ್ನಾ
2.ಲೈಂಗಿಕ ಕಿರುಕುಳ ವಿರೋಧಿಸಿದ 16 ವರ್ಷದ ಬಾಲಕಿಯನ್ನು ಹತ್ಯೆಗೈದಿರುವ ದಾರುಣ ಘಟನೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದಿರುವುದು ವರದಿಯಾಗಿದೆ. ಫಿರೋಜಾಬಾದ್ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಈ ಯುವತಿಯ ಮನೆಗೆ ಶುಕ್ರವಾರ ರಾತ್ರಿ ನುಗ್ಗಿದ ಮೂವರು ದುಷ್ಕರ್ಮಿಗಳು ಗುಂಡು ಹೊಡೆದು ಸಾಯಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕೆ ವಿದ್ಯಾರ್ಥಿನಿ ಹತ್ಯೆ
3.ಮುನಿರತ್ನ ಒಕ್ಕಲಿಗ ಮುಖಂಡರನ್ನು ಬೆಳೆಸಿಲ್ಲ ಎಂಬ ಕಾಂಗ್ರೆಸಿಗರ ಆರೋಪದ ಕುರಿತು ಪ್ರತಿಕ್ರಿಯೆ ನೀಡಿರುವ ಆರ್ಆರ್ ನಗರ ವಿಧಾನಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ, ಎಲ್ಲ ಜಾತಿಗಳನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವವರು ಮುಖ್ಯಮಂತ್ರಿ ಆಗುತ್ತಾರೆ. ಡಿಕೆ ಶಿವಕುಮಾರ್ ಇಂತಹ ಸಣ್ಣತನಗಳನ್ನೆಲ್ಲ ಬಿಡುವುದು ಉತ್ತಮ.
ಜಾತಿಗಳ ಮಧ್ಯೆ ಜಗಳ ತಂದಿಡುವವರು ಸಿಎಂ ಆಗಲು ಅಸಾಧ್ಯ; ಡಿಕೆ ಶಿವಕುಮಾರ್ಗೆ ಮುನಿರತ್ನ ತಿರುಗೇಟು
4.ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮಳೆಯ ಅಬ್ಬರ ಶುರುವಾಗಿದೆ. ನಾಳೆಯಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 25ರಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
5.ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಮಳೆ ಅವಾಂತರಕ್ಕೆ ಸಾವಿರಾರು ಜನ ಮನೆ ಕಳೆದುಕೊಂಡಿದ್ದಾರೆ. ಮಳೆಯಿಂದ ಹಾನಿ ಆಗಿರುವ ಪ್ರದೇಶಕ್ಕೆ ಪರಿಹಾರ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ್ ಸಿಎಂ ಬಿ.ಎಸ್. ಯಡಿಯೂರಪ್ಪನವರ ಬಳಿ ಮನವಿ ಮಾಡಿದ್ದಾರೆ. ಅದೇ ರೀತಿ ಆರ್.ಅಶೋಕ್ ಮನವಿಗೆ ಸ್ಪಂದಿಸಿರುವ ಸಿಎಂ ಬಿಎಸ್ವೈ ಪರಿಹಾರ ಘೋಷಿಸಲು ನಿರ್ಧರಿಸಿದ್ದಾರೆ.
Bangalore Rain: ಮಳೆ ಹಾನಿ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ; ರಾಜಕಾಲುವೆ ಒತ್ತುವರಿ ಮಾಡಿದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
6.ಬಿಹಾರದಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಮುಂದುವರೆದಿದೆ. ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ನಳಿನ್ ಕುಮಾರ್ ಕಟೀಲು ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತಾಡಲಿ; ನಳಿನ್ ಕುಮಾರ್ ಕಟೀಲ್ ಸವಾಲು
7.ರಾಜ್ಯದಲ್ಲಿ ನೆರೆಯಿಂದಾಗಿ ಉತ್ತರ ಕರ್ನಾಟಕ ಜನ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿ ಇದ್ದಾರೆ. ಆದರೆ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ನೆರೆಯನ್ನ ನಿರ್ವಹಣೆ ಮಾಡುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ನ ಪರಿಷತ್ ಶಾಸಕ ಬಸವರಾಜ್ ಹೊರಟ್ಟಿ ಅವರು ವಾಗ್ದಾಳಿ ನಡೆಸಿದ್ದಾರೆ.
ಲಿಂಗಾಯತ ಸಿಎಂ ವಿರುದ್ದ ಲಿಂಗಾಯತ ಶಾಸಕರನ್ನೇ ಎತ್ತಿ ಕಟ್ಟಿದ್ದಾರೆ; ಮಾಜಿ ಸಚಿವ ಬಸವರಾಜ್ ಹೊರಟ್ಟಿ
8. ನಾನ್ ಕೋವಿಡ್ ಸಾವಿನ ಸಂಖ್ಯೆಯ ಕುರಿತು ರಾಜ್ಯ ಸರಕಾರ ಆಡಿಟ್ ಮಾಡಿಸಬೇಕು ಎಂದು ಮಾಜಿ ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ ಆಗ್ರಹಿಸಿದ್ದಾರೆ. ಆರೋಗ್ಯ ಇಲಾಖೆ ಕೋವಿಡ್ ನೆಪದಲ್ಲಿ ಇತರ ರೋಗಿಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ನಾನ್ ಕೋವಿಡ್ ಸಾವಿನ ಕುರಿತು ರಾಜ್ಯ ಸರಕಾರ ಆಡಿಟ್ ಮಾಡಿಸಬೇಕು: ಮಾಜಿ ಸಚಿವ ಶಿವಾನಂದ ಪಾಟೀಲ ಆಗ್ರಹ
9.ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಕಾವು ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ಅಖಾಡ ಸಿದ್ದವಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ಕ್ಕೆ ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಅಭ್ಯರ್ಥಿಗಳು ಮತ್ತು ಪಕ್ಷಗಳ ಕಾರ್ಯಕರ್ತರು ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಇದರ ನಡುವೆಯೇ ರಾಜಕೀಯ ಪಕ್ಷಗಳು ಸ್ಯಾಂಡಲ್ವುಡ್ ಸ್ಟಾರ್ಗಳನ್ನು ಸೆಳೆದು ಪ್ರಚಾರಕ್ಕೆ ಆಹ್ವಾನಿಸುತ್ತಿವೆ.
ಮರಿ ಟೈಗರ್ ಭೇಟಿಯಾದ ಡಿಕೆಶಿ: ಸ್ಟಾರ್ ಪ್ರಚಾರಕನಾಗಲು ಆಹ್ವಾನ!
10. ಐಪಿಎಲ್ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ದುಬೈನಲ್ಲಿ ಮುಖಾಮುಖಿ ಆಗಲಿರುವ ಮೊದಲ ಪಂದ್ಯದಲ್ಲಿ ಇಯಾನ್ ಮಾರ್ಗನ್ ಅವರ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಶ್ರೇಯಸ್ ಅಯ್ಯರ್ ಅವರ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಎರಡನೇ ಪಂದ್ಯ ಅಬುಧಾಬಿಯಲ್ಲಿ ಜರುಗಲಿದ್ದು ಕೆ. ಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಸೆಣೆಸಾಟ ನಡೆಸಲಿವೆ.
KKR vs DC, KXIP vs SRH: ಐಪಿಎಲ್ನಲ್ಲಿಂದು ಡಬಲ್ ಧಮಾಕ: ಕೆಕೆಆರ್ಗೆ ಡೆಲ್ಲಿ ಸವಾಲು: ಪಂಜಾಬ್-ಎಸ್ಆರ್ಹೆಚ್ ಮುಖಾಮುಖಿ ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ