1. ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಕಂಟಕಪ್ರಾಯವಾಗಿ ಕಾಡುತ್ತಿರುವ ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕಲು ಹೊಸ ಕಾನೂನನ್ನು ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಸ್ವಚ್ಛ ಗಾಳಿ ಉಸಿರಾಡುವ ತನ್ನ ಹಕ್ಕನ್ನು ಕೊಡಿ ಎಂದು ಕೋರಿ ಬಾಲಕನೊಬ್ಬ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಹೊಸ ಕಾನೂನು ತರುವ ಭರವಸೆ ನೀಡಿದೆ.
ದೆಹಲಿ ವಾಯುಮಾಲಿನ್ಯ ತಡೆಯಲು ಹೊಸ ಕಾನೂನು: ಸುಪ್ರೀಂಗೆ ತಿಳಿಸಿದ ಕೇಂದ್ರ
2.ಜಾರ್ಖಂಡ್ ರಾಜ್ಯದಲ್ಲಿ 1999ರಲ್ಲಿ ನಡೆದಿದ್ದ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ದಿಲೀಪ್ ರೇ ಅವರಿಗೆ ನ್ಯಾಯಾಲಯ ಇಂದು 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಎನ್ಡಿಎ ಸರ್ಕಾರದ ಅವಧಿಯ ಕಲ್ಲಿದ್ದಲು ಹಗರಣ; ಮಾಜಿ ಬಿಜೆಪಿ ಕೇಂದ್ರ ಸಚಿವ ದಿಲೀಪ್ ರೇಗೆ ಜೈಲು ಶಿಕ್ಷೆ!
3.ಭಾರತದ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕೋಟಕ್ ಮಹೀಂದ್ರ ಬ್ಯಾಂಕ್ ಲಿಮಿಟೆಡ್ ಇಂಡಸ್ಇಂಡ್ ಬ್ಯಾಂಕ್ ಅನ್ನು ಸ್ವಾಧೀನಕ್ಕೆ ಪಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಒಂದುವೇಳೆ ಇದು ನಿಜವಾದರೆ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ನ ವ್ಯಾಪ್ತಿ ಇನ್ನಷ್ಟು ವಿಸ್ತರಿಸಲಿದೆ.
ಕೋಟಕ್ ಮಹೀಂದ್ರ ಬ್ಯಾಂಕ್ ಜೊತೆ ವಿಲೀನವಾಗುತ್ತಾ ಇಂಡಸ್ಇಂಡ್ ಬ್ಯಾಂಕ್?
4.ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬಿಹಾರಕ್ಕೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿತ್ತು. ವಿಶ್ವವನ್ನೇ ಕಾಡುತ್ತಿರುವ ಕೊರೋನಾಗೆ ಬಿಹಾರದ ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದ ಬಿಜೆಪಿಯ ನಡೆಗೆ ಸಾಕಷ್ಟು ವಿರೋಧ, ಟೀಕೆಗಳು ವ್ಯಕ್ತವಾಗಿದ್ದವು. ಇದಾದ ಬಳಿಕ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಭಾರತದ ಎಲ್ಲ ಜನರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದೆ.
ಭಾರತದ ಎಲ್ಲರಿಗೂ ಉಚಿತ ಕೊರೋನಾ ಲಸಿಕೆ; ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಭರವಸೆ
5. ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ಸುಡುವುದು ನಾಚಿಕೆಗೇಡಿನ ಕೆಲಸ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇಂದು ಕಿಡಿಕಾರಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಎಲ್ಲೆಡೆ ಮಹಿಷಾಸುರನ ಪ್ರತಿಕೃತಿಯನ್ನು ಸುಟ್ಟು ಸಂಭ್ರಮಿಸುವುದು ವಾಡಿಕೆಯ ಸಂಪ್ರದಾಯ. ಆದರೆ, ಕೇಂದ್ರದ ಇತ್ತೀಚಿನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಉಗ್ರ ಹೋರಾಟ ನಡೆಸುತ್ತಿರುವ ಹಿನ್ನೆಲೆ, ಪಂಜಾಬ್ನಲ್ಲಿ ನಿನ್ನೆಯ ದಸರಾ ಹಬ್ಬದ ಆಚರಣೆ ವೇಳೆ ಮಹಿಷಾಸುರನ ಪ್ರತಿಮೆಯ ಬದಲಿಗೆ ಪ್ರಧಾನಿ ಮೋದಿ ಅವರ ಪ್ರತಿಮೆಯನ್ನು ಸುಡಲಾಗಿತ್ತು. ಈ ಘಟನೆ ಇದೀಗ ರಾಷ್ಟ್ರಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಪ್ರಧಾನಿ ಮೋದಿ ಅವರ ಪ್ರತಿಮೆಯನ್ನು ಸುಡುವುದು ನಾಚಿಕೆಗೇಡಿನ ಕೆಲಸ; ಕಾಂಗ್ರೆಸ್ ವಿರುದ್ಧ ನಡ್ಡಾ ವಾಗ್ದಾಳಿ
6.ಇತ್ತೀಚೆಗೆ ದೇವಾಲಯಕ್ಕೂ ವಿವಾದಕ್ಕೂ ಬಿಡಿಸಲಾರದ ನಂಟು ಶುರುವಾಗಿದೆ. ಕಳೆದ ವಾರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿವಾದ ಇಡೀ ರಾಜ್ಯದ ಗಮನ ಸೆಳೆದಿತ್ತು. ಇದೀಗ ಮಧುರೆ ಶನಿ ಮಹಾತ್ಮ ದೇವಸ್ಥಾನದ ವಿವಾದ ಮುನ್ನೆಲೆಗೆ ಬರುತ್ತಿದೆ. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿರುವುದು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದೆ.
ಸಿಗಂದೂರು ಚೌಡೇಶ್ವರಿ ದೇಗುಲದ ಬಳಿಕ ಈಗ ಮಧುರೆ ಶನಿ ಮಹಾತ್ಮ ದೇವಸ್ಥಾನ ವಿವಾದ!
7.ಕೊರೋನಾ ಸೋಂಕಿಗೆ ತುತ್ತಾಗಿ ಹಿರಿಯ ಕಾರ್ಮಿಕ ಹೋರಾಟಗಾರ ಮತ್ತು ರೈತ ಮುಖಂಡ ಮಾರುತಿ ಮಾನ್ಪಡೆ ಕಳೆದ ವಾರ ನಿಧನರಾಗಿದ್ದರು. ಇದಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ನೇರ ಹೊಣೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ. ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ತಮ್ಮ ಸ್ವಾರ್ಥಕ್ಕಾಗಿ ಹೋರಾಟದಲ್ಲಿ ಬಳಸಿಕೊಂಡ ಕಾಂಗ್ರೆಸ್ ಅವರನ್ನು ಬೀದಿಯಲ್ಲೇ ಬಿಡಲು ಯೋಚಿಸಿದೆ.
ಮಾರುತಿ ಮಾನ್ಪಡೆ ಸಾವಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾರಣ; ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ
8. ನಾನು ಯಾವತ್ತಿದ್ದರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗುಡುಗಿದ್ದಾರೆ. ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತರೆ ಸರ್ಕಾರ ನಡೆಸೋಕಾಗುತ್ತಾ? ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ನಾನು ಯಾವತ್ತಿದ್ರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ; ಸಿದ್ದರಾಮಯ್ಯ
9.ಯಶ್ ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿದ್ದಾರೆ. ಆದರೆ, ಅವರ ಹೆಚ್ಚಾಗಿ ಸಕ್ರಿಯವಾಗಿರುವುದಿಲ್ಲ. ಅದರಲ್ಲೂ ತಮ್ಮ ವೈಯಕ್ತಿಕ ವಿಷಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದು ವಿರಳ. ಆದರೆ ಆಗಾಗ ತಮ್ಮ ಮಕ್ಕಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಲಾಕ್ಡೌನ್ನಲ್ಲಣತೂ ಮಕ್ಕಳೊಂದಿಗೆ ಕಾಲ ಕಳೆದ ರಾಕಿಂಗ್ ದಂಪತಿ, ಸದ್ಯ ಮಕ್ಕಳ ಪಾಲನೆಯ ಮಾಡುವ ಪ್ತಿ ಹಂತವನ್ನೂ ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ರಾಕಿಂಗ್ ಅಪ್ಪನನ್ನೇ ಆಟವಾಡಿಸಿದ ಮಗಳು: ಇಲ್ಲಿದೆ ಯಶ್-ಆಯ್ರಾ ಮುದ್ದಾದ ವಿಡಿಯೋ..!
10. ಐಪಿಎಲ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಪ್ಲೇ ಆಫ್ ಕನಸು ಕಾಣುತ್ತಿರುವ ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕೆ. ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಮುಂದಿನ ಹಂತಕ್ಕೇರಲು ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಬಲಿಷ್ಠವಾಗಿ ಹೊರಹೊಮ್ಮುತ್ತಿದ್ದು, ಇಲ್ಲಿನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
IPL 2020, KKR vs KXIP: ಐಪಿಎಲ್ನಲ್ಲಿಂದು ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕೆಕೆಆರ್-ಪಂಜಾಬ್ ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ