1.ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 48,268 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಇದೀಗ 81,37,119 ಕ್ಕೆ ಏರಿಕೆಯಾಗಿದೆ. ಅಲ್ಲದೆ, 551 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದು, ಸಾವಿನ ಸಂಖ್ಯೆಯೂ 1,21,641 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಈ ಮೂಲಕ ಭಾರತ ಕೊರೋನಾ ಸೋಂಕಿನಿಂದ ಅತಿಹೆಚ್ಚು ಸಾವುನೋವುಗಳನ್ನು ಕಂಡ ಎರಡನೇ ರಾಷ್ಟ್ರ ಎಂಬ ಕುಖ್ಯಾತಿಗೆ ಒಳಗಾಗಿದೆ.
CoronaVirus Update: ಕೊರೋನಾ ಸಾವಿನ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಭಾರತ; 81 ಲಕ್ಷದ ಗಡಿ ದಾಟಿದ ಸಕ್ರೀಯ ಸೋಂಕಿತರ ಸಂಖ್ಯೆ
2. ಕಳೆದ ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯೋತ್ಪಾದಕರು ನಡೆಸಿದ್ದ ವಿಧ್ವಂಸಕ ಕೃತ್ಯಕ್ಕೆ ಸುಮಾರು 40 ಜನ ಭಾರತೀಯ ಸೈನಿಕರು ಮೃತಪಟ್ಟಿದ್ದರು. ಈ ಘಟನೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂದು ಭಾರತ ಆರೋಪಿಸುತ್ತಿದ್ದರೂ ಸಹ ಪಾಕ್ ಈ ಹೊಣೆ ಹೊತ್ತಿರಲಿಲ್ಲ.
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರ ತ್ಯಾಗವನ್ನು ಪ್ರಶ್ನಿಸಿದವರಿಗೆ ಈಗ ಉತ್ತರ ಸಿಕ್ಕಿದೆ; ಪ್ರಧಾನಿ ಮೋದಿ ಆಕ್ರೋಶ
3. ಬಿಹಾರ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಜನರಿಗೆ ಉಚಿತ ಕೋವಿಡ್-19 ಲಸಿಕೆ ನೀಡುತ್ತೇನೆಂದು ಭರವಸೆ ನೀಡಿರುವ ಬಿಜೆಪಿಯ ಪ್ರಣಾಳಿಕೆ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಬಿಜೆಪಿ ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಕೊರೋನಾ ಲಸಿಕೆಯನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಚುನಾಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಬಿಹಾರಿಗಳಿಗೆ ಉಚಿತ ಕೋವಿಡ್ ಲಸಿಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚುನಾವಣಾ ಆಯೋಗ
4. ಬಿಹಾರ ಚುನಾವಣೆ ಬೆನ್ನಿಗೆ 2021 ರ ಆರಂಭದಲ್ಲೇ ಪಶ್ಚಿಮ ಬಂಗಾಳದ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಬಿಜೆಪಿ ಬಂಗಾಳದಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇಬೇಕು ಎಂದು ಪಣ ತೊಟ್ಟಿದೆ. ಇದೇ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಪಕ್ಷವನ್ನು ಬಲಗೊಳಿಸುತ್ತಿದೆ. ಅಲ್ಲದೆ, ಹಲವಾರು ಹೋರಾಟಗಳು ಮತ್ತು ರ್ಯಾಲಿಯನ್ನು ಆಯೋಜಿಸುತ್ತಿದೆ.
ಚುನಾವಣಾ ಕಾರ್ಯತಂತ್ರ; ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ
5. ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡದೇ ಸತಾಯಿಸಿದ 7 ಆಸ್ಪತ್ರೆಗೆಳಿಗೆ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಶೋಕಾಸ್ ನೋಟಿಸ್ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿದಿನ ಸಾವಿರ ಸಾವಿರ ಸಂಖ್ಯೆಯಲ್ಲಿ ಏರುತ್ತಿದ್ದ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸಕಾಲಕ್ಕೆ ಚಿಕಿತ್ಸೆ ಸಿಗದ ಪರಿಣಾಮ ನೂರಾರು ಕೊರೋನಾ ಸೋಂಕಿತರು ಮೃತಪಟ್ಟಿದ್ದರು.
ಕೊರೋನಾ ರೋಗಿಗಳಿಗೆ ಬೆಡ್ ಕೊಡದ 7 ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ ನೀಡಿದ ಬಿಬಿಎಂಪಿ
6.ಶಿರಾ ಉಪಚುನಾವಣಾ ಕಣದಲ್ಲಿ ಅಭಿವೃದ್ಧಿ ಅಸ್ತ್ರವನ್ನು ಪ್ರಯೋಗಿಸುವ ಮೂಲಕ ರಾಜಕೀಯ ನಾಯಕರು ಮತಸೆಳೆಯುವ ತಂತ್ರಕ್ಕೆ ಮೊರೆಹೋಗಿದ್ದಾರೆ. ನಿನ್ನೆಯಷ್ಟೇ ಶಿರಾದಲ್ಲಿ ಪ್ರಚಾರ ನಡೆಸಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ಕ್ಷೇತ್ರವನ್ನು ಶಿಕಾರಿಪುರದಂತೆ ಅಭಿವೃದ್ಧಿ ಮಾಡುತ್ತೇನೆ ಎಂಬ ಭರವಸೆ ನೀಡಿದ್ದರು. ಇಂದು ಕ್ಷೇತ್ರದಲ್ಲಿ ಪ್ರಚಾರಕ್ಕೆ ಮುಂದಾಗಿರುವ ಜೆಡಿಎಸ್ ವರಿಷ್ಠ ದೇವೇಗೌಡರು, ಕ್ಷೇತ್ರವನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿಗೆ ಬದ್ದ ಎನ್ನುವ ಮೂಲಕ ಮುಖ್ಯಮಂತ್ರಿಗಳಿಗೆ ಟಾಂಗ್ ನೀಡಿದ್ದಾರೆ.
ಶಿರಾದಲ್ಲಿ ಅಭಿವೃದ್ಧಿ ಮಂತ್ರ; ಅಭ್ಯರ್ಥಿ ಗೆದ್ದರೆ ಕ್ಷೇತ್ರವನ್ನು ದತ್ತು ಪಡೆಯುತ್ತೇನೆಂದ ಜೆಡಿಎಸ್ ವರಿಷ್ಠ ದೇವೇಗೌಡ
7.ಯಡಿಯೂರಪ್ಪ ನಮ್ಮ ನಾಯಕನಲ್ಲ ಎಂಬ ಬಸವನಗೌಡ ಪಾಟಿಲ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಗೆ ಯಾವಾಗ ರಾಜಕೀಯವಾಗಿ ಅಭದ್ರತೆ ಕಾಡುತ್ತೋ ಆಗ ಇಂತಹ ಹೇಳಿಕೆ ನೀಡುತ್ತಾರೆ. ತಾವು ಕಳೆದು ಹೋಗುತ್ತಿದ್ದೇನೆ ಅನಿಸುತ್ತೋ ಆಗ ಇಂತಹ ಅಸಂಬದ್ಧ ಮತ್ತು ಅಸಂದರ್ಭಿಕ ಮಾತುಗಳನ್ನು ಆಡುತ್ತಾರೆ. ಖಾಯಿಲೆಗಳಲ್ಲಿ ಆತ್ಮರತಿ ಎಂಬ ಖಾಯಿಲೆ ಇದ್ದು, ಇದು ಯತ್ನಾಳ್ ಗೆ ಇದೆ, ತನ್ನನ್ನು ತಾನು ವೈಭವಿಕರಿಸಿಕೊಂಡು ಹೇಳಿಕೆ ನೀಡುವ ಖಾಯಿಲೆ ಯತ್ನಾಳ್ ಗೆ ಇದೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯತ್ನಾಳ್ ತಾನು ಏನಲ್ಲವೋ ಅದನ್ನು ಭ್ರಮಿಸಿಕೊಳ್ಳುವ ಖಾಯಿಲೆ ಅವರಿಗಿದೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ಆತ್ಮರತಿ ಖಾಯಿಲೆ ಇದೆ: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್
8. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡಾದ ಕಾರಣಕ್ಕೆ ಜನರು ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ದೃಷ್ಟಿಬೊಟ್ಟಿನಂತೆ ಒಂದೇ ಸ್ಥಾನವನ್ನು ಗೆಲ್ಲುವಲ್ಲಿ ಅವರು ಸಫಲರಾಗಿದ್ದು. ಸಿದ್ದರಾಮಯ್ಯ ಅಭಿವೃದ್ಧಿ ಕೆಲಸ ಮಾಡಿದ್ದರೆ, ಯಾಕೆ ಸೋಲುತ್ತಿದ್ದರು. ಕೇವಲ ನಾನು ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಾರೆ. ಈ ಬಗ್ಗೆ ಅವರಿಗೆ ನಾಚಿಕೆಯಾಗಬೇಕು ಎಂದು ಸಚಿವ ಆರ್ ಅಶೋಕ್ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೃಷ್ಟಿಬೊಟ್ಟಿನಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು ಒಂದೇ ಸೀಟು; ಆರ್ ಅಶೋಕ್ ವ್ಯಂಗ್ಯ
9. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ಮಗ ವಿನೀಶ್ಗೆ ಇಂದು 12ನೇ ಜನ್ಮದಿನದ ಸಂಭ್ರಮ. ಈ ಸಂಭ್ರದ ದಿನದಂದು ಮಗನ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ ವಿಜಯಲಕ್ಷ್ಮಿ. ಅಷ್ಟೇ ಅಲ್ಲ, ಇಂಥ ಮಗನನ್ನು ಪಡೆದಿರುವ ನಾನೇ ಪುಣ್ಯವಂತೆ ಎಂದಿದ್ದಾರೆ.
Vijayalakshmi Darshan: ಮಗ ವಿನೀಶ್ಗೆ ಜನ್ಮದಿನದ ಶುಭಾಶಯ ಕೋರಿದ ವಿಜಯಲಕ್ಷ್ಮಿ ದರ್ಶನ್
10. ಐಪಿಎಲ್ನಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿವೆ. ಮತ್ತೊಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಶಾರ್ಜಾ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ