Evening Digest: ಕಾಂಗ್ರೆಸ್​ ಸೇರ್ಪಡೆಯಾದ ಡಿ.ಕೆ.ರವಿ ಹೆಂಡತಿ ಕುಸುಮಾ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಶಂಶಾಬಾದ್​ನಲ್ಲಿರುವ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ನಿನ್ನೆ 25 ಕೋಟಿ ಮೌಲ್ಯದ 21 ಕಿಲೋ ಅಕ್ರಮ ಚಿನ್ನಾಭರಣಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಗೋಲ್ಡ್ ಬಿಸ್ಕತ್ ಮತ್ತು ಆಭರಣಗಳಿಗೆ ಯಾವುದೇ ದಾಖಲೆಗಳಿರಲಿಲ್ಲ. ಗಲ್ಫ್ ದೇಶಗಳಿಂದ ಬಂದಿದ್ದ ಈ ಮಾಲುಗಳನ್ನ ಮುಂಬೈಗೆ ಸಾಗಿಸಲು ಯೋಜಿಸಲಾಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

  ಹೈದರಾಬಾದ್ ಏರ್​ಪೋರ್ಟ್​ನಲ್ಲಿ 25 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ವಶಕ್ಕೆ

  2.ದೇಶಾದ್ಯಂತ ಸುದ್ದಿಯಾಗಿರುವ ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಶನಿವಾರ ನಡೆದ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. 

  ಉತ್ತರ ಪ್ರದೇಶ: 15 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಪತ್ತೆ!

  3. ಸಿರಾದಲ್ಲಿ ಜೆಡಿಎಸ್ ಶಾಸಕ ಸತ್ಯನಾರಾಯಣರವರ ಅಕಾಲಿಕ ಮರಣದಿಂದ ಶಿರಾ ಉಪಚುನಾವಣೆ ನಡೆಯುತ್ತಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ‌ಟಿ.ಬಿ ಜಯಚಂದ್ರ ಅಭ್ಯರ್ಥಿ ಆಗಿದ್ದರು. ಆದರೆ ಚುನಾವಣೆಯಲ್ಲಿ ಜಯಚಂದ್ರ ಎರಡನೇ ಸ್ಥಾನಕ್ಕೆ ಬಂದರು. ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿ ಮಾರ್ಪಟ್ಟಿತು.ಯಡಿಯೂರಪ್ಪ ಬಹುಮತ ಸಾಬೀತು ಮಾಡಲಾಗಲಿಲ್ಲ.  ಹೀಗಾಗಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆವು.  ಕುಮಾರಸ್ವಾಮಿಯನ್ನೇ ಸಿಎಂ ಮಾಡಿದೆವು ಆದರೆ ಕುಮಾರಸ್ವಾಮಿಗೆ ಸರ್ಕಾರ ಉಳಿಸಿಕೊಳ್ಳೋಕೆ ಆಗಲಿಲ್ಲ ಎಂದು ವ್ಯಂಗ್ಯ ಮಾಡಿದರು.

  ಜೆಡಿಎಸ್​ನವರು ಇನ್ನೊಬ್ಬರ ಹೆಗಲ ಮೇಲೆ ಕುತ್ಕೊಂಡು ಅಧಿಕಾರಕ್ಕೆ ಬರೋರು; ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

  4. ರಾಜರಾಜೇಶ್ವರಿ ನಗರದ ಟಿಕೆಟ್​ ಆಕಾಂಕ್ಷಿ ದಿವಂಗತ ಡಿ.ಕೆ.ರವಿ ಪತ್ನಿ ಹಾಗೂ ಹನುಮಂತರಾಯಪ್ಪನವರ ಮಗಳು ಕುಸುಮಾ ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಗೆ ಕುಟುಂಬ ಸಮೇತವಾಗಿ ಆಗಮಿಸಿದ್ದ ಕುಸುಮಾ ಇಂದು ಬೆಳಗ್ಗೆ 11.45ರಲ್ಲಿ ಕಾಂಗ್ರೆಸ್​ ಸದಸ್ಯತ್ವವನ್ನು ಪಡೆದರು. ಈ ಶುಭ ಗಳಿಗೆಗಾಗಿ ಹನುಂತರಾಯಪ್ಪ ಕುಟುಂಬ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಬೆಳಗ್ಗೆ 10.40ಕ್ಕೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು.

  ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾದ ಡಿ.ಕೆ.ರವಿ ಹೆಂಡತಿ ಕುಸುಮಾ

  5. ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮೂವರು ವಿದೇಶಿ ಪ್ರಜೆಗಳು ಹಾಡಹಗಲೇ ಕೊಕೇನ್ ಮತ್ತು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

  Bangalore Drug Mafia: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳ ಬಂಧನ

  6. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನೆಲೆ, ಸಿ.ಟಿ.ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಶನಿವಾರ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಸಿ.ಟಿ.ರವಿ ಅವರು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಗಾಂಧಿ ಜಯಂತಿಯಂದು ಸಿಎಂ ಬಿಎಸ್​ವೈ ಸಿಗದ ಕಾರಣ ನಿನ್ನೆ ಅಂದರೆ ಶನಿವಾರ ರಾಜೀನಾಮೆ ಕೊಟ್ಟಿದ್ದಾರೆ.

  CT Ravi Resignation: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

  7.ಕೊಡಗಿನ ಕುಲದೇವತೆ ಮಾತೆ ಕಾವೇರಿ ತುಲಾ ಸಂಕ್ರಮಣದಂದು ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಈ ವೇಳೆ ಜನರು ತೀರ್ಥೋದ್ಭವಕ್ಕೆ ತಲಕಾವೇರಿಗೆ ಆಗಮಿಸಬೇಕಾದರೆ ಕೋವಿಡ್ ಫ್ರೀ ಎಂಬ ಸರ್ಟಿಫಿಕೆಟ್ ಇದ್ದರೆ ಮಾತ್ರ ಎಂಟ್ರಿಗೆ ಅವಕಾಶವಿದೆ. ಹೌದು, ಅಕ್ಟೋಬರ್ 17 ರಂದು ಬೆಳಿಗ್ಗೆ 7 ಗಂಟೆ 3 ನಿಮಿಷಕ್ಕೆ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಲಿದ್ದಾಳೆ.

  ಅ.17 ರಂದು ಕಾವೇರಿ ತೀರ್ಥೋಧ್ಭವ; ಕೊರೋನಾ ಮುಕ್ತ ಸರ್ಟಿಫಿಕೇಟ್​ ಇದ್ರೆ ಮಾತ್ರ ತಲಕಾವೇರಿಗೆ ಪ್ರವೇಶ



  8.ಕೊಡಗಿನಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದಿದ್ದ ರಣಭೀಕರ ಮಳೆಗೆ ತಲಕಾವೇರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅರ್ಚಕ ನಾರಾಯಣ ಆಚಾರ್ ಅವರ ಕುಟುಂಬ ಮೃತಪಟ್ಟು ಎರಡು ತಿಂಗಳೇ ಮುಗಿಯಿತು. ಆದರೆ ಇಂದಿಗೂ ಅವರ ಮಕ್ಕಳಿಗೆ ಸರ್ಕಾರದ ಪರಿಹಾರ ಸಿಕ್ಕಿಲ್ಲ.

  ‘ಮತಾಂತರ’ ಅಡ್ಡಿ; ನಾರಾಯಣ ಆಚಾರ್ ಮಕ್ಕಳಿಗೆ ಇನ್ನೂ ದೊರೆಯದ ಪರಿಹಾರ ಹಣ

  9. ನನ್ನ ಹೆಂಡತಿಯನ್ನು ಅಪಹರಿಸಿ, ಆಸ್ತಿಯನ್ನು ಬರೆಸಿಕೊಳ್ಳಲಾಗಿದೆ ಎಂದು ಖ್ಯಾತ ಚಿತ್ರ ಸಾಹಿತಿ ಕೆ ಕಲ್ಯಾಣ್​​ ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  ನನ್ನ ಹೆಂಡತಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಾರೆ; ಚಿತ್ರ ಸಾಹಿತಿ ಕೆ.ಕಲ್ಯಾಣ್ ದೂರು

  10. ಈ ಬಾರಿಯ ಐಪಿಎಲ್​ ಆವೃತ್ತಿಯ 13 ಹಾಗೂ 14ನೇ ಪಂದ್ಯಗಳು ಇಂದು ನಡೆಯಲಿವೆ. ಮಧ್ಯಾಹ್ನ 3:30ಕ್ಕೆ ಆರಂಭವಾಗುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡವು ಸನ್​ ರೈಸರ್ಸ್​ ಹೈದರಾಬಾದ್ ಅನ್ನು ಎದುರಿಸಲಿದೆ. ಬ್ಯಾಟಿಂಗ್​ನಲ್ಲಿ ಮುಂಬೈ​ ಹೆಚ್ಚು ಬಲ ಹೊಂದಿದ್ದರೆ, ಸನ್​ ರೈಸರ್ಸ್​ ಹೈದರಾಬಾದ್​ ಬೌಲಿಂಗ್​ನಲ್ಲಿ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಶಾರ್ಜಾದಲ್ಲಿ ನಡೆಯುವ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

  IPL 2020: ಇಂದು ಐಪಿಎಲ್​ನಲ್ಲಿ ಎರಡು ಪಂದ್ಯ; ಯಾರಿಗೆ ಯಾರ ಸವಾಲು? ಬದಲಾವಣೆ ಏನು? ಇಲ್ಲಿದೆ ಮಾಹಿತಿ
  Published by:G Hareeshkumar
  First published: