Evening Digest: ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ಸಾವು, ಶಿರಾ ಕ್ಷೇತ್ರಕ್ಕೆ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಹತ್ರಾಸ್​ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣದ ಕಾವು ಇನ್ನೂ ತಣ್ಣಗಾಗಿಲ್ಲ. ಈ ಕೃತ್ಯವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ 10 ದಿನಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.

  ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ಸಾವು; ರಸ್ತೆಯಲ್ಲಿ ಶವ ಇಟ್ಟು ಪೋಷಕರ ಪ್ರತಿಭಟನೆ

  2. ಮಹಾತ್ಮ ಗಾಂಧಿ ಅವರ ಬಗ್ಗೆ ಅಮೆರಿಕಕ್ಕೆ ವಿಶೇಷ ಗೌರವ ಹೊಂದಿದೆ. ಅವರ ಮೌಲ್ಯಗಳು ನಮ್ಮ ಸಮಾಜದ ಮೇಲೆ ಹಾಗೂ ಕಾನೂನು ಕ್ಷೇತ್ರದ ಮೇಲೆ ಅಗಾಧ ಪ್ರಭಾವ ಬೀರಿವೆ ಎಂದು ಚೆನ್ನೈನಲ್ಲಿನ ಅಮೆರಿಕ ದೂತಾವಾಸದ ಪಬ್ಲಿಕ್‌ ಅಫೇರ್ಸ್‌ ಆಫೀಸರ್ ಆನ್‌ ಲೀ ಶೇಷಾದ್ರಿ ಹೇಳಿದರು.

  ಅಮೆರಿಕ-ಭಾರತ ಸಂಬಂಧ ಅತ್ಯಂತ ಮಹತ್ವದ್ದು: ಆನ್ ಲೀ ಶೇಷಾದ್ರಿ

  3.ವಿಶ್ವ ಪ್ರಸಿದ್ದ ತಿರುಪತಿ ಶ್ರೀ ವೆಂಕಟೇಶ್ವರನಿಗೆ ಅಪಾರ ಸಂಖ್ಯೆಯ ಭಕ್ತರು ಇದ್ದಾರೆ. ದೇಶ ಮಾತ್ರವಲ್ಲದೇ ವಿದೇಶಗಳಿಂದಲೂ ಸಹ ತಿಮ್ಮಪ್ಪನ ದರ್ಶನ ಪಡೆಯಲು ಆಗಮಿಸುತ್ತಾರೆ. ಈ ಬಾರಿ ಮಾತ್ರ ಕೊರೋನಾ ಮಾಹಾ ಮಾರಿಯಿಂದಾಗಿ ಕೆಲ ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು. ಕೆಲವು ಮುಂಜಾಗ್ರತಾ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಮತ್ತೆ ದೇವಾಲಯವನ್ನು ತೆರೆಯಲಾಗಿದ್ದು, ಭಾರೀ ಪ್ರಮಾಣದ ಭಕ್ತರು ಆಗಮಿಸಿ ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ.

  ಕೊರೋನಾ ಸಂದಿಗ್ದತೆಯಲ್ಲೂ ಹುಂಡಿ ಕಾಣಿಕೆಯಲ್ಲಿ ಹೊಸ ದಾಖಲೆ ಬರೆದ ತಿರುಪತಿ

  4.ದಿವಂಗತ ಸತ್ಯನಾರಾಯಣ ಅವರ ಹೆಂಡತಿ ಅಮ್ಮಾಜಮ್ಮ ಅವರು ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ಧಾರೆ. ಇವತ್ತು ನಡೆದ ಜೆಡಿಎಸ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಶಿರಾ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದರು.

  ಶಿರಾ ಕ್ಷೇತ್ರಕ್ಕೆ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ; ಆರ್.ಆರ್. ನಗರಕ್ಕೆ ಅ. 8ಕ್ಕೆ ಅಭ್ಯರ್ಥಿ ಘೋಷಣೆ

  5.ರಾಜ್ಯದಲ್ಲಿ ಘೋಷಣೆ ಆಗಿರುವ ಉಪಚುನಾವಣೆಯ ಕಣದಂತೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕೂಡಾ ರಂಗೇರಿದೆ.  ಅಕ್ಟೋಬರ್ 28 ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಭರದಿಂದ ನಾಮಪತ್ರ ಸಲ್ಲಿಸುತ್ತಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರವೀಣ್ ಪೀಟರ್ ಇಂದು ಬೆಂಗಳೂರಿನ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

  ಉಪಚುನಾವಣಾ ಕಣದಂತೆ ರಂಗೇರಿದ ಶಿಕ್ಷಕರ ಕ್ಷೇತ್ರದ ಕದನ; ಕಾಂಗ್ರೆಸ್​​ನಿಂದ ಪ್ರವೀಣ್ ಪೀಟರ್ ನಾಮಪತ್ರ ಸಲ್ಲಿಕೆ

  6.ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಹೋರಾಟ ರೂಪುಗೊಳ್ಳುತ್ತಿದೆ. ಇದರಲ್ಲಿ ಪಕ್ಷಾತೀತವಾಗಿ ಮುಖಂಡರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದೇ ಅಕ್ಟೋಬರ್ 11ರಂದು ಪೂರ್ವಭಾವಿ ಸಭೆ ನಡೆಯಲಿದೆ. ಇಂದು ಕುರುಬರ ಎಸ್​ಟಿ ಮೀಸಲಾತಿ ಹೋರಾಟ ಸಮಿತಿಯ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಲಾಯಿತು.

  ಕುರುಬರಿಗೆ ಎಸ್​ಟಿ ಸ್ಥಾನಮಾನಕ್ಕಾಗಿ ಹೋರಾಟ; ಕಾಗಿನೆಲೆ ಶ್ರೀ, ಈಶ್ವರಪ್ಪ ನೇತೃತ್ವ; 11ಕ್ಕೆ ಪೂರ್ವಭಾವಿ ಸಭೆ

  7. ಡಿಕೆ ಶಿವಕುಮಾರ್​ ಮನೆ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಡಿಕೆ ಶಿವಕುಮಾರ್​ ಅವರಿಗೆ ಸೇರಿದ ಸುಮಾರು 14 ಕಡೆ ಈ ದಾಳಿ ನಡೆದಿದೆ. ಈ ದಾಳಿ ಬಳಿಕ ಇಂದು ಕೆಪಿಸಿಸಿ ಅಧ್ಯಕ್ಷರು ತಮ್ಮ ನೆಚ್ಚಿನ ಆರಾಧ್ಯ ದೈವರಾದ ಅಜ್ಜಯ್ಯನ ಮೊರೆ ಹೋಗಿದ್ದಾರೆ.

  ಸಂಕಷ್ಟದಿಂದ ಪಾರಾಗಲು ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್​

  8. ಸ್ಯಾಂಡಲ್​ವುಡ್​ ಡ್ರಗ್ ಕೇಸ್​ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್​ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್​ನಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದಲ್ಲಿ ಇಂದು ಮಾಜಿ ಡಾನ್ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

  ಡ್ರಗ್ ಕೇಸ್​ನಲ್ಲಿ ತನಿಖೆಗೆ ಸಹಕರಿಸದ ಮುತ್ತಪ್ಪ ರೈ ಮಗ ರಿಕ್ಕಿ ರೈ ಸಿಸಿಬಿ ವಶಕ್ಕೆ

  9.ರಂಗಭೂಮಿ, ಸಿನಿಮಾ ಹಾಗೂ ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್‌ ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 72ವರ್ಷದ ಜಯಕುಮಾರ್​ ಅವರು  ದಾವಣಗೆರೆ ಸಮೀಪ ಕೊಡಗನೂರಿನವರು. ರಂಗಭೂಮಿ ಜೊತೆ ಅವರದ್ದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು.

  ಜ್ಯೂನಿಯರ್ ರಾಜಕುಮಾರ್​ ಎಂದೇ ಖ್ಯಾತರಾಗಿದ್ದ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್‌ ನಿಧನ..!

  10. IPL 2020 ಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ಗೆಲುವು, 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಟೂರ್ನಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್​ಸಿಬಿ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್​ಗಳಿಂದ ಪರಾಜಯಗೊಂಡು ನಿರಾಸೆ ಮೂಡಿಸಿತು.

  Virat Kohli: ಸೋತರೂ, ಹೊಸ ದಾಖಲೆ ಬರೆದು ಮಿಂಚಿದ ಕಿಂಗ್ ಕೊಹ್ಲಿ..!
  Published by:G Hareeshkumar
  First published: