HOME » NEWS » State » EVENING DIGEST SEPTEMBER 28TH TOP 10 KANNADA POLITICAL SPORTS AND OTHER NEWS ARE HERE HK

Evening Digest: ಎಸ್​ಬಿಐನಿಂದ ಭರ್ಜರಿ ಆಫರ್, ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ : ಟಾಪ್​​ 10 ಸುದ್ದಿಗಳು

ರಾಜ್ಯ, ದೇಶ, ವಿದೇಶಗಳಲ್ಲಿನ ಸುದ್ದಿ ಪ್ರತಿಯೊಬ್ಬರ ಜೀವನದ ಆಗುಹೋಗುಗಳ ಮೇಲೆ ಪರಿಣಾಮವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ಘಟನಾವಳಿಗಳ ಕುರಿತು ನೀವು ಓದಲೇಬೇಕಾದ ಸುದ್ದಿಗಳಿವು

news18-kannada
Updated:September 28, 2020, 5:16 PM IST
Evening Digest: ಎಸ್​ಬಿಐನಿಂದ ಭರ್ಜರಿ ಆಫರ್, ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ : ಟಾಪ್​​ 10 ಸುದ್ದಿಗಳು
ಸಾಂದರ್ಭಿಕ ಚಿತ್ರ
  • Share this:
1.ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಾಂತ ಪ್ರತಿಭಟನೆ ಕೂಗು ಕೇಳಿ ಬರುತ್ತಿದೆ. ಕರ್ನಾಟಕ, ಪಂಜಾಬ್​, ಹರಿಯಾಣ ಸೇರಿದಂತೆ ಅನೇಕ ರಾಜ್ಯದ ರೈತರು ರಾಜ್ಯ ಬಂದ್​ ನಡೆಸಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Farm bills: ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧಾರಿಸಿದ ಪಂಜಾಬ್ ಸಿಎಂ

2.ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕಿದೆ ಅಷ್ಟೇ. ಮುಂದಿನ ಹಂತದ ಲಾಕ್​ಡೌನ್​ ಸಡಿಲಿಕೆಯಲ್ಲಿ ಕೇಂದ್ರವು ಯಾವೆಲ್ಲಾ ವಲಯಗಳಿಗೆ ಸಡಿಲಿಕೆ ನೀಡಬಹುದು ಎಂದು ಸಾರ್ವಜನಿಕರು ನಿರೀಕ್ಷೆಯಿಂದ ಕಾಯುತ್ತಿದ್ದಾರೆ.

Unlock 5.0 Guidelines: ಅಕ್ಟೋಬರ್​ 1ರಿಂದ ಅನ್​ಲಾಕ್​ 5.0: ಯಾವೆಲ್ಲ ವಲಯಕ್ಕೆ ರಿಲೀಫ್​?

3.ಇದೇ ಅಕ್ಟೋಬರ್ 1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿಯಾಗಲಿದ್ದು, ವಾಹನ ಸವಾರರು ಈ ಬಗ್ಗೆ ಗಮನ ಹರಿಸಬೇಕಿದೆ. ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಪರವಾನಗಿಯ ಹೊಸ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳು ಇರಲಿವೆ. ದಿನನಿತ್ಯ ಉಪಯೋಗವಾಗುವ ಈ ನಿಯಮಗಳು ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿವೆ.

ವಾಹನ ಸವಾರರ ಗಮನಕ್ಕೆ: ಅ.1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿ

4.ಕೊರೋನಾ ಮತ್ತು ಕೊರೋನಾದಿಂದಾಗಿ ಘೋಷಿಸಲಾದ ಲಾಕ್​ಡೌನ್​ನಿಂದಾಗಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಚಿಲ್ಲರೆ ಸಗಟು ವ್ಯಾಪಾರ ಮತ್ತು ಇದಕ್ಕೆ ಸಂಬಂಧಿಸಿದ ಜನ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಜನ ಖರ್ಚು ಮಾಡುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆ. ಪರಿಣಾಮ ಮಾರುಕಟ್ಟೆಯಲ್ಲಿ ಹಣದ ಸಂಚಯನವಿಲ್ಲದೆ ಜಿಡಿಪಿ ಏರಿಕೆ ಕಾಣುತ್ತಿಲ್ಲ. ಹೀಗಾಗಿ ಆರ್ಥಿಕತೆಗೆ ಚುರುಕು ಮುಟ್ಟಿಸಲು ಮುಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಚಿಲ್ಲರೆ ಗ್ರಾಹಕರಿಗೆ ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ವರ್ಷದ ಹಬ್ಬದ ಸಂತೋಷವನ್ನು ಹರಡಲು ವಿಶೇಷ ಕೊಡುಗೆಗಳನ್ನು ನೀಡಲು ಮುಂದಾಗಿದೆ.ಎಸ್​ಬಿಐ ಬ್ಯಾಂಕ್​ನಿಂದ ಭರ್ಜರಿ ಆಫರ್​; ವಾಹನ, ಮನೆ ಖರೀದಿ ಸೇರಿದಂತೆ ಅನೇಕ ವಿಶೇಷ ಸಾಲ ಸೌಲಭ್ಯ

5.ಹೈಪರ್​ಲೂಪ್ ವಿಚಾರ ಕೇಳಿರಬಹುದು. ಅತಿ ಕಡಿಮೆ ವಾಯು ಒತ್ತಡ ಇರುವ ನೀಳ್ಗೊಳವೆ (Long Tube) ಮೂಲಕ ಸಾಗಣೆ ಮಾಡುವ ಒಂದು ಹೊಸ ಸಾರಿಗೆ ಆವಿಷ್ಕಾರ. ಹೈಪರ್​ಲೂಪ್ ಟ್ರ್ಯಾಕ್​ನಲ್ಲಿ ವಿಮಾನಕ್ಕಿಂತಲೂ ವೇಗವಾಗಿ ಪ್ರಯಾಣಿಸಬಹುದು. ಇದನ್ನ ಭವಿಷ್ಯದ ಸಾರಿಗೆ ವ್ಯವಸ್ಥೆ ಎಂದೇ ಬಣ್ಣಿಸಲಾಗುತ್ತಿದೆ. ಜಗತ್ತಿನ ಹಲವು ದೇಶಗಳಲ್ಲಿ ಹೈಪರ್​ಲೂಪ್ ವ್ಯವಸ್ಥೆ ಅಳವಡಿಸಲಾಗುತ್ತಿದೆ.

ಮೆಜೆಸ್ಟಿಕ್​ನಿಂದ ಏರ್​ಪೋರ್ಟ್​ಗೆ ಕೇವಲ 10 ನಿಮಿಷದಲ್ಲಿ ಪ್ರಯಾಣ; BIALನಿಂದ ಹೈಪರ್​ಲೂಪ್ ಯೋಜನೆ

6.ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಇಂದು ರೈತರು, ರೈತಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗೆ ಕಾಂಗ್ರೆಸ್ ಕೂಡ ಬೆಂಬಲ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಒಬ್ಬ ಡೋಂಗಿ ರೈತ ನಾಯಕ. ಹಸಿರು ಶಾಲು ಹಾಕಿಕೊಂಡು ರೈತಪರ ಎಂದು ಬಿಂಬಿಸಿದ್ದರು. ಅವರು ನಿಜವಾಗಲೂ ರೈತರ ಪರ ಇದ್ದಿದ್ದರೆ ಇಂತಹ ಕಾಯ್ದೆ ತರುತ್ತಿರಲಿಲ್ಲ ಎಂದು ಟೀಕಿಸಿದ್ದಾರೆ.

ಸಿಎಂ ಯಡಿಯೂರಪ್ಪ ಡೋಂಗಿ ರೈತ ನಾಯಕ; ಸಿದ್ದರಾಮಯ್ಯ ವಾಗ್ದಾಳಿ

7.ಬೆಂಗಳೂರು ಉಗ್ರರ ತಾಣ ವಾಗಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಬೆಂಗಳೂರನ್ನು ದೇಶವನ್ನು ಜಗತ್ತು ನೋಡುತ್ತಿದೆ. ಪ್ರಪಂಚದ ಹಲವು ದೇಶಗಳಿಗೆ ಇಂಜಿನಿಯರ್​ ಕೊಟ್ಟಿರುವ ನಗರ ಇದು. ಐಟಿ ಹಬ್​ ಆಗಿ ಜನಪರಿಚಿತವಾಗಿರುವ ನಗರದ ಕುರಿತು ಈ ರೀತಿಯ ಹೇಳಿಕೆ ಸರಿಯಲ್ಲ ಎಂದು ಟೀಕಿಸಿದ್ದಾರೆ.

ಅವರು ತೇಜಸ್ವಿ ಸೂರ್ಯ ಅಲ್ಲ, ಅಮವಾಸ್ಯೆ ಸೂರ್ಯ; ಬಿಜೆಪಿ ಸಂಸದನ ವಿರುದ್ಧ ಡಿಕೆಶಿ ಗುಡುಗು

8.ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣೆ ಕಾಯ್ದೆಗಳಿಗೆ ತರುತ್ತಿರುವ ತಿದ್ದುಪಡಿಯಿಂದ ರೈತರಿಗೆ ಅನ್ಯಾಯ ಆಗಲ್ಲ. ಈ ವಿಚಾರದಲ್ಲಿ ರೈತರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಾನು ರೈತನ ಅನ್ನ ತಿನ್ನುತ್ತಿರುವ ನಾನು ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಈ ತಿದ್ದುಪಡಿ ಕಾಯ್ದೆಗಳು ಐತಿಹಾಸಿಕ ಎನಿಸಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೈತರಿಗೆ ಅನ್ಯಾಯ ಆಗುವುದಿಲ್ಲ; ರೈತರ ದಾರಿ ತಪ್ಪಿಸದಿರಿ: ರೈತ ಸಂಘಟನೆಗಳಿಗೆ ಯಡಿಯೂರಪ್ಪ ಮನವಿ

9.ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ಕೇಸ್​​ ಸಂಬಂಧ ವಾದ-ಪ್ರತಿವಾದ ಆಲಿಸಿದ ಎನ್​ಡಿಪಿಎಸ್ ನ್ಯಾಯಾಲಯ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಪ್ರಕಟಿಸಿದೆ.

ಸ್ಯಾಂಡಲ್​​ವುಡ್​​ ಡ್ರಗ್ಸ್ ಕೇಸ್​​​: ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ, ಜೈಲೇ ಗತಿ

10.ಮೊದಲ ಪಂದ್ಯದಲ್ಲಿ ಶುಭಾರಂಭ ಮಾಡಿ ನಂತರ ಹೀನಾಯವಾಗಿ ಸೋತಿರುವ ವಿರಾಟ್​ ಕೊಹ್ಲಿ ನೇತೃತ್ವದ ಆರ್​​ಸಿಬಿ ತಂಡ ಇಂದು, ಹಾಲಿ ಚಾಂಪಿಯನ್ಸ್​ ಮುಂಬೈ ಇಂಡಿಯನ್ಸ್​ ತಂಡವನ್ನು ಎದುರಿಸಲಿದೆ.

RCB vs MI: ಆರ್​ಸಿಬಿಯಲ್ಲಿ ಫಾರ್ಮ್​ ಕಳೆದುಕೊಂಡವರದೇ ದೊಡ್ಡ ಪಟ್ಟಿ: ಗೆಲುವಿನ ನಗು ಬೀರಲು ಎಬಿಡಿ, ಪಡಿಕ್ಕಲ್​, ಚಹಾಲ್​ ಗಟ್ಟಿ
Published by: G Hareeshkumar
First published: September 28, 2020, 5:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories