BS Yeddyurappa| ವಿದೇಶ ಪ್ರವಾಸದಿಂದ ಹಿಂದಿರುಗಿದ ಯಡಿಯೂರಪ್ಪ; ಮುಂದಿನ 25 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಜಿಲ್ಲಾವಾರು‌ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ. ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

 ಬಿ.ಎಸ್​.ಯಡಿಯೂರಪ್ಪ

ಬಿ.ಎಸ್​.ಯಡಿಯೂರಪ್ಪ

 • Share this:
  ಬೆಂಗಳೂರು (ಆಗಸ್ಟ್​ 23); ರಾಜ್ಯ ರಾಜಕಾರಣದಲ್ಲಿ ಯಾವಾಗಲೂ (Karnataka Politics) ಸಕ್ರೀವಾಗಿರುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ (BS Yeddyurappa) ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕಳೆದ ವಾರ ವಿಶ್ರಾಂತಿಗೆ ಮೊರೆ ಹೋಗಿದ್ದರು. ಬಸವರಾಜ ಬೊಮ್ಮಾಯಿ (Basavaraja Bommai) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ, ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ತಮ್ಮ ಕುಟುಂಬದ ಸಮೇತ ಮಾಲ್ಡೀವ್ಸ್ (Maldives) ಪ್ರವಾಸಕ್ಕೆ ತೆರಳಿದ್ದರು. ಇದೀಗ ಅವರು ರಾಜ್ಯ ಮರಳಿದ್ದು, "ಮುಂದಿನ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದ್ದೇನೆ" ಎಂದು ತಿಳಿಸಿದ್ದಾರೆ.

  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿರುವ ಬಿ.ಎಸ್. ಯಡಿಯೂರಪ್ಪ, "ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಜಿಲ್ಲಾವಾರು‌ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ. ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರು ನೋಡುವಂತದ್ದು, ನಾನು ಸಹ ಐದು ದಿನ ಎಲ್ಲಾ ರಾಜಕೀಯ ಮರೆತು ಖುಷಿಯಾಗಿದ್ದೆ" ಎಂದು ತಿಳಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: