Bengaluru: ಲಕ್ಕಿ ಹೌಸ್ ಕಾವೇರಿ ನಿವಾಸ ಖಾಲಿ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಡಾಲರ್ಸ್ ಕಾಲೋನಿಯ ಧವಳಗಿರಿ‌‌ ನಿವಾಸದಲ್ಲಿ ಡಿಕೆ ಶಿವಕುಮಾರ್, ಬಿಎಸ್​​ವೈ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ (BS Yediyurappa) ಅವರು ಬಿಜೆಪಿ ಸರ್ಕಾರದ (BJP Govt) ಅವಧಿ ಮುಕ್ತಾಯ ಆಗುತ್ತಿದ್ದಂತೆ ಬೆಂಗಳೂರಿನ (Bengaluru) ಕಾವೇರಿ‌ ನಿವಾಸವನ್ನು (Cauvery Bungalow) ಖಾಲಿ ಮಾಡಿದ್ದು, ಡಾಲರ್ಸ್ ಕಾಲೋನಿಯ ತಮ್ಮ ದವಳಗಿರಿಯ ನಿವಾಸಕ್ಕೆ ಇಂದಿನಲೇ ಶಿಫ್ಟ್ ಆಗಿದ್ದಾರೆ. ಯಡಿಯೂರಪ್ಪ ಅವರು ಈ ಹಿಂದೆ ಸಿಎಂ ಆಗಿದ್ದಾಗಲಿಂದಲೂ ಕಾವೇರಿ‌ ನಿವಾಸದಲ್ಲಿ ವಾಸವಿದ್ದರು. ಆ ಬಳಿಕ ಸಿಎಂ (CM) ಸ್ಥಾನದಿಂದ ಕೆಳಗೆ ಇಳಿದ ಬಳಿಕವೂ ಅಲ್ಲೇ ಮುಂದುವರಿದಿದ್ದರು. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Elections) ಬಿಜೆಪಿ ಪಕ್ಷ ಸೋಲುಂಡು ಅಧಿಕಾರದಿಂದ ಕೆಳಗಿಳಿದ ಕಾರಣ ಮಾಜಿ ಸಿಎಂ ತಮ್ಮ ಖಾಸಗಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ.


ಸರ್ಕಾರದ ಅವಧಿ ಮುಕ್ತಾಯವಾಗುತ್ತಿದ್ದಂತೆ ಸರ್ಕಾರಿ ನಿವಾಸ ಖಾಲಿ


ಇದರೊಂದಿಗೆ ಹೊಸ ನಿವಾಸವನ್ನು ನೂತನ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನದಿಂದ ಕೆಳಗಿಳಿದ ಬಳಿಕ ಕಾವೇರಿ ನಿವಾಸ ಖಾಲಿ ಮಾಡಲು ಹೆಚ್ಚು ಸಮಯ ತೆಗೆದುಕೊಂಡಿದ್ದರು. ಆದರೆ ಸಿದ್ದುರಂತೆ ಹೆಚ್ಚು ಸಮಯ ತೆಗೆದುಕೊಳ್ಳದ ಬಿಎಸ್​​ವೈ, ಸರ್ಕಾರದ ಅವಧಿ ಮುಕ್ತಾಯವಾಗುತ್ತಿದ್ದಂತೆ ಸರ್ಕಾರಿ ನಿವಾಸ ಖಾಲಿ ಮಾಡಿ ಖಾಸಗಿ ನಿವಾಸಕ್ಕೆ ಆಗಮಿಸಿದ್ದಾರೆ. ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆ ಆಗಿದ್ದಾಗ ಸ್ವಲ್ಪ ದಿನ ಕಾವೇರಿಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.




ಇದನ್ನೂ ಓದಿ: Bengaluru: ₹400 ಕೋಟಿ ಮೌಲ್ಯದ ಆಸ್ತಿ ವಿಲ್​​ ಬರೆದು ವಿದೇಶಕ್ಕೆ ಹೊರಟ ಬೆಂಗಳೂರು ಉದ್ಯಮಿ; ‘ಲಕ್ಷ್ಮೀಪತಿಯ’ ಹೃದಯ ಶ್ರೀಮಂತಿಗೆ ನೋಡಿ!


ಇನ್ನು, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಲಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿ‌‌ ನಿವಾಸದಲ್ಲಿ ಡಿಕೆ ಶಿವಕುಮಾರ್, ಬಿಎಸ್​​ವೈ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಕಳೆದ ಕೆಲ ದಿನಗಳ ಹಿಂದಷ್ಟೇ ಡಿಸಿಎಂ ಅವರು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದರು. ಸದ್ಯ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಗಯಾಗಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

First published: