• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Election 2023: ಬಿಜೆಪಿ ನಾಯಕರ ಸಂಧಾನ ಸಭೆ ವಿಫಲ, ನಾಳೆ ರಾಜೀನಾಮೆ ಕೊಡ್ತಾರಾ ಶೆಟ್ಟರ್? ಅತ್ತ ಕಮಲಕ್ಕೆ ಓಲೇಕಾರ್ ಗುಡ್ ಬೈ!

Karnataka Election 2023: ಬಿಜೆಪಿ ನಾಯಕರ ಸಂಧಾನ ಸಭೆ ವಿಫಲ, ನಾಳೆ ರಾಜೀನಾಮೆ ಕೊಡ್ತಾರಾ ಶೆಟ್ಟರ್? ಅತ್ತ ಕಮಲಕ್ಕೆ ಓಲೇಕಾರ್ ಗುಡ್ ಬೈ!

ಮಾಜಿ ಸಿಎಂ ಜಗದೀಶ್ ಶೆಟ್ಟರ್/ ಶಾಸಕ ನೆಹರು ಓಲೇಕಾರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್/ ಶಾಸಕ ನೆಹರು ಓಲೇಕಾರ್

ಜಗದೀಶ್​ ಶೆಟ್ಟರ್​ ಅವರ ಮನವೊಲಿಕೆ ಮಾಡಲು ಅವರ ನಿವಾಸಕ್ಕೆ ಬಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅರ್ಧ ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದರು.

  • News18 Kannada
  • 4-MIN READ
  • Last Updated :
  • Hubli-Dharwad (Hubli), India
  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಪಕ್ಷ ಬಿಟ್ಟು ಕಾಂಗ್ರೆಸ್​ನಲ್ಲಿ (Congress) ಟಿಕೆಟ್​​ಅನ್ನು ಪಡೆದುಕೊಂಡಿದ್ದಾರೆ. ಇತ್ತ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರ ಮನವೊಲಿಕೆ ಮಾಡಲು ಬಿಜೆಪಿ (BJP) ನಾಯಕರು ಪ್ರಯತ್ನಿಸುತ್ತಿದ್ದು, ಈಗಾಗಲೇ ಮೂರು ಮೂರು ಡೆಡ್​​ಲೈನ್ ಕೊಟ್ಟಿರುವ ಜಗದೀಶ್ ಶೆಟ್ಟರ್ (Jagadish Shettar)​​, ನಾಳೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇತ್ತ ರಾಜ್ಯದ 50 ಕ್ಷೇತ್ರಗಳಲ್ಲಿ ಬಂಡಾಯ ತಣ್ಣಗಾಗಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ಹೈಕಮಾಂಡ್​​​ ಈಗ ಖಡಕ್​ ಸಂದೇಶ ಕೊಟ್ಟಿದೆ. ತಕ್ಷಣ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬೇಗುದಿ ಆರಿಸಲು ಜಿಲ್ಲಾವಾರು ಸಭೆ ನಡೆಸಿ, ಬಂಡಾಯ ಶಮನಗೊಳಿಸಲು ಸೂಚನೆ ನೀಡಿದೆ. ಇದರ ನಡುವೆಯೇ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.


ಸಿಎಂ ಬೊಮ್ಮಾಯಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ


ಹೌದು, ಹಾವೇರಿ ಪರಿಶಿಷ್ಟ ಜಾತಿ ಮೀಸಲಿ ಕ್ಷೇತ್ರದಲ್ಲಿ ನೆಹರು ಓಲೇಕಾರ್ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನೇರವಾಗಿ ಟಾರ್ಗೆಟ್​ ಮಾಡಿದ್ದ ಓಲೇಕಾರ್ ಅವರು ಇಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.


ಇದರ ಬೆನ್ನಲ್ಲೇ ಇಂದು ಸ್ವಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ನೆಹರು ಓಲೇಕಾರ್​​, ನಾಳೆ ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿಗೆ ರಾಜೀನಾಮೆ ಪತ್ರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಅಲ್ಲಿಂದ ಬೆಂಗಳೂರಿಗೆ ತೆರಳಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಅವರು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.


ಇದನ್ನೂ ಓದಿ: Jagadish Shettar: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಲ್ಲಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ಯಾರು?


ಸಾಯಂಕಾಲದ ವೇಳೆಗೆ ಜೆಡಿಎಸ್​ ಸೇರ್ಪಡೆ


ಇದರೊಂದಿಗೆ ನೆಹರು ಓಲೇಕಾರ್ ಅವರು ಭಾನುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಸಾಯಂಕಾಲದ ವೇಳೆಗೆ ಜೆಡಿಎಸ್ ಕಚೇರಿಗೆ ತೆರಳಿ ಜೆಡಿಎಸ್ ಪಕ್ಷ ಸೇರುತ್ತೇನೆ ಎಂದು ಓಲೇಕಾರ್ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ವಿರುದ್ಧ ನಾನು ಉದ್ದೇಶ ಪೂರ್ವಕವಾಗಿ ಮಾತನಾಡಿಲ್ಲ. ನನ್ನ ಟಿಕೆಟ್ ತಪ್ಪಿಸಲು ಅನೇಕ ಜನರ ಮುಂದೆ ನನ್ನ ಬಗ್ಗೆಯೂ ಮಾತನಾಡಿದ್ದಾರೆ. ಅದೆಲ್ಲವನ್ನೂ ತಿಳಿದುಕೊಂಡು ನಾನು ಮಾತನಾಡಿದ್ದೇನೆ ಎಂದು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.




ಬಿಜೆಪಿ ಮುಖಂಡರ ಕಾರಿಗೆ ಶೆಟ್ಟರ್​ ಬೆಂಬಲಿಗರ ಮುತ್ತಿಗೆ


ಇತ್ತ, ಜಗದೀಶ್​ ಶೆಟ್ಟರ್​ ಅವರ ಮನವೊಲಿಕೆ ಮಾಡಲು ಅವರ ನಿವಾಸಕ್ಕೆ ಬಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅರ್ಧ ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದರು. ಆದರೆ ಬಹುತೇಕ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ವಾಪಸ್​ ತೆರಳಿದರು. ಈ ವೇಳೆ ಮುಖಂಡರು ವಾಪಸ್ ಹೋಗುವಾಗ ಶೆಟ್ಟರ್ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

top videos
    First published: