ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವುದು ಏಕೆ?; ಹೆಚ್​.ಡಿ. ಕುಮಾರಸ್ವಾಮಿ ಪ್ರಶ್ನೆ

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರ್​​ಎಸ್​ಎಸ್​‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಹೆಚ್​.ಡಿ. ಕುಮಾರಸ್ವಾಮಿ.

ಹೆಚ್​.ಡಿ. ಕುಮಾರಸ್ವಾಮಿ.

 • Share this:
  ಬೆಂಗಳೂರು (ಫೆಬ್ರವರಿ 15); ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ದೇಶದಾದ್ಯಂತ ಜನರಿಂದ ದೇಣಿಗೆ ಸ್ವೀಕರಿಸಲಾಗುತ್ತಿದೆ. ಈಗಾಗಲೇ 600 ಕೋಟಿ ಗೂ ಅಧಿಕ ಹಣವನ್ನು ಸಂಗ್ರಹಿಸಲಾಗಿದೆ. ಆದರೆ, ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗೆ ಆರ್​ಎಸ್​ಎಸ್​ ಸಂಘಟನೆ ಗುರುತು ಮಾಡುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, "ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ಏಕೆ?" ಎಂದು ಪ್ರಶ್ನೆ ಮಾಡಿದ್ದಾರೆ.  ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ, "ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ" ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.  ಅಲ್ಲದೆ, ಆರ್​ಎಸ್​ಎಸ್​ ಸಂಘಟನೆಯನ್ನು ನಾಜಿಗಳಿಗೆ ಹೋಳಿಕೆ ಮಾಡಿ ಹೀಗಳೆದಿರುವ ಕುಮಾರಸ್ವಾಮಿ, "ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರ್​​ಎಸ್​ಎಸ್​‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ.  ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ.ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.
  Published by:MAshok Kumar
  First published: