• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Elections: ಸಮೀಕ್ಷೆಗಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು? ವರುಣಾದಲ್ಲಿ ಗೆದ್ದು ಬೀಗ್ತಾರಾ ಮಾಜಿ ಸಿಎಂ?

Karnataka Elections: ಸಮೀಕ್ಷೆಗಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು? ವರುಣಾದಲ್ಲಿ ಗೆದ್ದು ಬೀಗ್ತಾರಾ ಮಾಜಿ ಸಿಎಂ?

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದಿನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

  • News18 Kannada
  • 3-MIN READ
  • Last Updated :
  • Mysore, India
  • Share this:

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ರಾಜ್ಯದಾದ್ಯಂತ ಶೇಕಡಾ 71 ರಷ್ಟು ಮತದಾನವಾಗಿದೆ (Voting). ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳು ಕರ್ನಾಟದಲ್ಲಿ (Karnataka Election) ಅತಂತ್ರ ಸ್ಥಿತಿ ನಿರ್ಮಾಣ ಆಗಲಿದ್ದು, ಕಾಂಗ್ರೆಸ್ (Congress) ಪಕ್ಷ ಅತೀ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ತಿಳಿಸಿವೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ಕಾಂಗ್ರೆಸ್​ ಪಕ್ಷಕ್ಕೆ ಬಹುಮತ ಬರುವುದು ಖಚಿತವಾಗಿದೆ. ಅದನ್ನೇ ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೆಗಳೂ (Exit Poll) ಹೇಳಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ವರುಣಾದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ


ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ, ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದಿನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ.


ಇದನ್ನೂ ಓದಿ: Karnataka Exit Poll 2023 LIVE Updates: ಎಕ್ಸಿಟ್​ ಪೋಲ್​ನಲ್ಲಿ ಯಾವ್ಯಾವ ಪಕ್ಷಕ್ಕೆ ಎಷ್ಟು ಜನ ಮತ? ಫುಲ್ ಅಪ್ಡೇಟ್ಸ್​


ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಅಷ್ಟೇ. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನು ಎಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ದರು. ವರುಣಾದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ ಎಂದರು.


top videos



    ಹಳೆ ಮೈಸೂರು ಭಾಗದಲ್ಲಿ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿ ಬಿಜೆಪಿ ಎಲ್ಲೂ ಕೂಡ ನೇರವಾಗಿ ನಮ್ಮ ಜೊತೆ ಪೈಪೋಟಿ ಇಲ್ಲ. ಸೋಮಣ್ಣನಿಗೆ ವರುಣಾ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ, ಅದು ಬಿಟ್ಡರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಅಷ್ಟೇ. ವರುಣಾದಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆ. ರಿಸಾರ್ಟ್ ಪಾಲಿಟಿಕ್ಸ್ ಬಗ್ಗೆ ಪ್ರಶ್ನೆ ಕೇಳಬೇಡಿ, ಕಾಂಗ್ರೆಸ್ ಗೆ ಬಹುಮತ ಬರುತ್ತೆ. ಇದರ ನಡುವೆ ರೆಸಾರ್ಟ್ ಪಾಲಿಟಿಕ್ಸ್ ಬಗ್ಗೆ ಯಾಕೆ ಮಾತು ಎಂದು ಮಾಧ್ಯಮಗಳ ಪ್ರಶ್ನೆಗೆ ಗರಂ ಆದ್ರು.

    First published: