ನೆರೆ ಪರಿಹಾರ, ಬಜೆಟ್ ಮೇಲೆ ಹೆಚ್ಚಿನ ಚರ್ಚೆಯಾಗಬೇಕು, ಕನಿಷ್ಠ 10 ದಿನ ಅಧಿವೇಶನ ನಡೆಯಬೇಕು; ಸಿದ್ದರಾಮಯ್ಯ ಪಟ್ಟು

ಪ್ರವಾಹದ ಪರಿಸ್ಥಿತಿ ಗಂಭೀರವಾದ ವಿಚಾರ. ಅರ್ಧ ರಾಜ್ಯವೇ ಪ್ರವಾಹಕ್ಕೆ ತುತ್ತಾಗಿದೆ. ಆ ಭಾಗದ ಶಾಸಕರು ಸದನಲ್ಲಿ ಅಭಿಪ್ರಾಯ ತಿಳಿಸಬೇಕು. ಹೀಗಾಗಿ ಸದನ ವಿಸ್ತರಣೆ ಮಾಡಿ. ಅದನ್ನು ಬಿಟ್ಟು ಇಂದೇ 1 ಗಂಟೆಯ ಒಳಗಾಗಿ ಈ ಕುರಿತ ಚರ್ಚೆಯನ್ನು ಮುಗಿಸಬೇಕು ಎಂಬುದು ಸರಿಯಲ್ಲ. ಇದೊಂದು ಜನ ವಿರೋಧಿ ನಿಲುವು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

MAshok Kumar | news18-kannada
Updated:October 11, 2019, 11:48 AM IST
ನೆರೆ ಪರಿಹಾರ, ಬಜೆಟ್ ಮೇಲೆ ಹೆಚ್ಚಿನ ಚರ್ಚೆಯಾಗಬೇಕು, ಕನಿಷ್ಠ 10 ದಿನ ಅಧಿವೇಶನ ನಡೆಯಬೇಕು; ಸಿದ್ದರಾಮಯ್ಯ ಪಟ್ಟು
ಸಿದ್ದರಾಮಯ್ಯ
  • Share this:
ಬೆಂಗಳೂರು (ಅಕ್ಟೋಬರ್ 11); ರಾಜ್ಯದ ನೆರೆ ಪರಿಹಾರ ಹಾಗೂ ಬಜೆಟ್ ಮೇಲೆ ತಲಾ ಮೂರು ದಿನ ಚರ್ಚೆಯಾಗಬೇಕು. ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಕನಿಷ್ಠ 10 ದಿನಕ್ಕೆ ವಿಸ್ತರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಅಧಿವೇಶನದಲ್ಲಿ ಪಟ್ಟು ಹಿಡಿದಿದ್ದಾರೆ.

ಉಪ ಚುನಾವಣೆಯ ನಿಮಿತ್ತ ರಾಜ್ಯ ಸರ್ಕಾರ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಕೇವಲ 3 ದಿನ ಮಾತ್ರ ನಡೆಸಲು ಉದ್ದೇಶಿಸಿತ್ತು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಹೀಗಾಗಿ ಅಧಿವೇಶನವನ್ನು ವಿಸ್ತರಿಸಲು ಅವಕಾಶ ಇದ್ದಾಗ್ಯೂ ರಾಜ್ಯ ಬಿಜೆಪಿ ಸರ್ಕಾರ ಕೇವಲ ಮೂರೇ ದಿನದಲ್ಲಿ ಅಧಿವೇಶನ ಮುಗಿಸಲು ಮುಂದಾಗಿದೆ. ಈ ಮೂರು ದಿನದಲ್ಲೇ ನೆರೆ ಪರಿಹಾರ, ಬಜೆಟ್ ಮಂಡನೆ ಹಾಗೂ ಬಜೆಟ್ ಮೇಲಿನ ಚರ್ಚೆ ನಡೆಯಬೇಕಿರುವ ಪರಿಸ್ಥಿತಿ ಉಂಟಾಗಿದೆ.

ಈ ಕುರಿತು ಎರಡನೇ ದಿನದ ಅಧಿವೇಶನದ ಭಾಷಣದಲ್ಲಿ ತಮ್ಮ ಆಕ್ರೋಶ ಹೊರಹಾಕಿದ ಸಿದ್ದರಾಮಯ್ಯ, “ಪ್ರವಾಹದ ಪರಿಸ್ಥಿತಿ ಗಂಭೀರವಾದ ವಿಚಾರ. ಅರ್ಧ ರಾಜ್ಯವೇ ಪ್ರವಾಹಕ್ಕೆ ತುತ್ತಾಗಿದೆ. ಆ ಭಾಗದ ಶಾಸಕರು ಸದನಲ್ಲಿ ಅಭಿಪ್ರಾಯ ತಿಳಿಸಬೇಕು. ಹೀಗಾಗಿ ಸದನ ವಿಸ್ತರಣೆ ಮಾಡಿ. ಅದನ್ನು ಬಿಟ್ಟು ಇಂದೇ 1 ಗಂಟೆಯ ಒಳಗಾಗಿ ಈ ಕುರಿತ ಚರ್ಚೆಯನ್ನು ಮುಗಿಸಬೇಕು ಎಂಬುದು ಸರಿಯಲ್ಲ. ಇದೊಂದು ಜನ ವಿರೋಧಿ ನಿಲುವು” ಎಂದು ಕಿಡಿಕಾರಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, “ನಾನು 13 ಬಜೆಟ್ ಮಂಡಿಸಿದ್ದೇನೆ, ಬಜೆಟ್ ಮೇಲೆ ಹೆಚ್ಚಿನ ಚರ್ಚೆಯಾಗಬೇಕು. 30 ರವರೆಗೆ ಬಜೆಟ್ ಪಾಸು ಮಾಡಿಕೊಳ್ಳಬಹುದು, ಸಪ್ಲಿಮೆಂಟರಿ ಬಜೆಟ್ ಬೇಕಾದರೆ ಪಾಸ್ ಮಾಡೋಣ. ಆದರೆ, ಬಜೆಟ್ ಮಂಡಿಸೋಕೆ ತರಾತುರಿಯೇಕೆ? ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸದೆ ಇರೋದು ಸರಿಯಲ್ಲ. ಹೀಗಾಗಿ ಪ್ರವಾಹ ಮತ್ತು ಬಜೆಟ್ ಕುರಿತು ತಲಾ 3 ದಿನ ಚರ್ಚೆಯಾಗಬೇಕು. ವಿಪಕ್ಷ ಬೇಡ ಅಂದರೆ ನಿಮಗೆ ಬೇಕಾದಂತೆ ಮಾಡಿಕೊಳ್ಳಿ. ಆದರೆ, ಇಂತಹ ಸರ್ವಾಧಿಕಾರಿ ಧೋರಣೆ ಮಾತ್ರ ಸರಿಯಲ್ಲ. ಇದು ನಮ್ಮ ಪಕ್ಷದ ಸ್ಪಷ್ಟವಾದ ನಿಲುವು” ಎಂದು ಅವರು ಅಧಿವೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು; ಸ್ಪೀಕರ್ ವಿರುದ್ಧವೂ ಕೆಂಗಣ್ಣು

First published: October 11, 2019, 11:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading