ನನ್ನ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತದೆ ಎಂದವರಾರು ? ; ಮಾಜಿ ಸಿಎಂ ಸಿದ್ದರಾಮಯ್ಯ

news18
Updated:August 29, 2018, 5:05 PM IST
ನನ್ನ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತದೆ ಎಂದವರಾರು ? ; ಮಾಜಿ ಸಿಎಂ ಸಿದ್ದರಾಮಯ್ಯ
news18
Updated: August 29, 2018, 5:05 PM IST
ನ್ಯೂಸ್ 18 ಕನ್ನಡ 

ಬೆಂಗಳೂರು (ಆಗಸ್ಟ್ 29) :  ರಾಜ್ಯ ಸರ್ಕಾರ ನನ್ನ ಹಾಗೂ ಸಿದ್ದರಾಮಯ್ಯ ಅವರ ದೂರವಾಣಿಯನ್ನು ಕದ್ದಾಲಿಕೆ ಮಾಡುತ್ತಿದೆ ಎಂಬ ಯಡಿಯೂರಪ್ಪ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನನ್ನ ದೂರವಾಣಿ ಕದ್ದಾಲಿಕೆ ಆಗುತ್ತಿಲ್ಲ. ಕದ್ದಾಲಿಕೆ ಆಗಿದೆ ಎಂದು ಹೇಳಿದವರ್ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 

ಬಾಗಲಕೋಟೆಯಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾತನಾಡಿದ ಸಿದ್ದರಾಮಯ್ಯ ಫೋನ್ ಕದ್ದಾಲಿಕೆ ಆಗಿದೆ ಎಂದು ಯಾರೇಳಿದ್ರು ಅವರನ್ನೇ ಕೇಳಿ ಎಂದು  ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.  ಮೈತ್ರಿ ಸರ್ಕಾರಕ್ಕೆ  ನೂರು ದಿನ ಪೂರೈಸಿರೋ ಕುರಿತು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಮಾತನಾಡದೆ ಹೊರಟು ಹೋದರು.


ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಾವು ಅನಧಿಕೃತವಾಗಿ ಯಾರ ದೂರವಾಣಿ ಕದ್ದಾಲಿಕೆ ಮಾಡಲ್ಲ. ಕೆಲ ಅನಧಿಕೃತ ಚಟುವಟಿಕೆ ಮಾಡುವವರ ದೂರವಾಣಿಯನ್ನು ಪೊಲೀಸ್​ ಇಲಾಖೆ ಟ್ಯಾಪ್​ ಮಾಡುತ್ತೆ,  ಆದರೆ ಅದು ನಮ್ಮ ಗಮನಕ್ಕೂ ಬರುವುದಿಲ್ಲ. ಯಡಿಯೂರಪ್ಪ ಸೇರಿ ಯಾವ ನಾಯಕರ ಫೋನ್ ಟ್ಯಾಪ್ ಮಾಡ್ತಿಲ್ಲ ಎಂದು ಉಪಮುಖ್ಯಮಂತ್ರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

 

 
First published:August 29, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...