Chikkamagaluru: ಕಾಫಿ ಎಸ್ಟೇಟ್​ನಲ್ಲಿ ಹೆಜ್ಜೇನು ದಾಳಿ; ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಬೋಜೇಗೌಡ ನಿಧನ

ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಭೋಜೇಗೌಡ ಅವರ ಮೇಲೆ ದಿಢೀರನೇ ಹೆಜ್ಜೇನುಗಳು ದಾಳಿ ನಡೆಸಿವೆ.  ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿಯ ಕಾಫಿ ಎಸ್ಟೇಟ್‌ಗೆ ಎಂದಿನಂತೆ ತೆರಳಿದ್ದರು.

ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ

ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ

  • Share this:
ಚಿಕ್ಕಮಗಳೂರು (ಏ.23): ಹೆಜ್ಜೇನು ದಾಳಿಗೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ಮಂಡಳಿ ಮಾಜಿ ಅಧ್ಯಕ್ಷರು ಬಲಿಯಾದ ಘಟನೆ ನಡೆದಿದೆ. 73 ವರ್ಷದ ಎಂ.ಎಸ್.ಭೋಜೇಗೌಡ  ಮೃತ ದುರ್ದೈವಿಯಾಗಿದ್ದು, ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ (Coffee Estate) ಈ ದುರಂತ ಘಟನೆ ನಡೆದಿದೆ. ಸಾವಿರಾರು ಹೆಜ್ಜೇನುಗಳು (Honey Bee) ದಾಳಿ ಮಾಡಿದ್ದರಿಂದ ಭೋಜೇಗೌಡರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೋಜೇಗೌಡರು (Boje Gowda) ಸತತವಾಗಿ 2 ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 1 ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಎಂ.ಎಸ್. ಬೋಜೇಗೌಡ ಕೆಲಸ ಮಾಡಿದ್ದಾರೆ.

ಹೆಜ್ಜೇನು ದಾಳಿಗೆ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಸಾವು

ಕಾಫಿ ತೋಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ದಿಢೀರ್ ಹೆಜ್ಜೇನು ದಾಳಿ ನಡೆಸಿದ ಕಾರಣದಿಂದಾಗಿ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ (74 )ಸಾವನ್ನಪ್ಪಿರೋ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿಯ ಕಾಫಿ ಎಸ್ಟೇಟ್‌ಗೆ ಎಂದಿನಂತೆ ತೆರಳಿದ್ದರು. ತೋಟದಲ್ಲಿ ಸುತ್ತಾಡುತ್ತಿದ್ದಂತ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಹೆಜ್ಜೇನುಗಳು ದಾಳಿ ನಡೆಸಿ ಕಚ್ಚಿದ ಪರಿಣಾಮ, ದಾಳಿಗೆ ಒಳಗಾದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ತೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.

ಸಾವಿರಕ್ಕೂ ಹೆಚ್ಚು ಹೆಜ್ಜೇನುಗಳು ದಾಳಿ

ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಭೋಜೇಗೌಡ ಅವರ ಮೇಲೆ ದಿಢೀರನೇ ಹೆಜ್ಜೇನುಗಳು ದಾಳಿ ನಡೆಸಿವೆ.  ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿಯ ಕಾಫಿ ಎಸ್ಟೇಟ್‌ಗೆ ಎಂದಿನಂತೆ ತೆರಳಿದ್ದರು. ತೋಟದಲ್ಲಿ ಸುತ್ತಾಡುತ್ತಿದ್ದಂತ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಹೆಜ್ಜೇನುಗಳು ದಾಳಿ ನಡೆಸಿ ಕಚ್ಚಿವೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಪ್ರಯೋಜನವಾಗಿಲ್ಲ ಚಿಕಿತ್ಸೆ ಫಲಕಾರಿಯಾಗದೇ  ಭೋಜೇಗೌಡ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Akrama-Sakrama: ಮತ್ತೆ ಶುರುವಾಗಿದೆ ಅರಣ್ಯ ಅತಿಕ್ರಮಣದಾರರಿಗೆ ಆತಂಕ, ಅಕ್ರಮ-ಸಕ್ರಮಕ್ಕಾಗಿ ನಡೆಯುತ್ತಿದೆ ಹೋರಾಟ

ರಾಜಕೀಯದಲ್ಲೀ ಸಕ್ರಿಯರಾಗಿದ್ದ ಭೋಜೇಗೌಡ

ಭೋಜೇಗೌಡರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜೆಡಿಎಸ್​, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು, ಸರಳ ಮತ್ತು ಸಜ್ಜನಿಕೆಯ ವ್ಯಕ್ತಿಯಾಗಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಸತತ 2 ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇವರ ಅಕಾಲಿಕ ನಿಧನಕ್ಕೆ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

2 ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ

ಕಾಫಿ ಮಂಡಳಿ ಅಧ್ಯಕ್ಷರಾಗಿ 2 ಭಾರೀ ಭೋಜೇಗೌಡ ಸೇವೆ ಸಲ್ಲಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕಾಫಿ ಬೆಳೆಗಾರರ ಪರ ಹಲವು ಕೆಲಸ ಕಾರ್ಯಗಳನ್ನು ಮಾಡಿದ್ದರು.ಮಳೆಯಿಂದ ಕಾಫಿ ಬೆಳೆಗೆ ನಷ್ಟ ಉಂಟಾದ ಸಮಯದಲ್ಲಿ ಕೇಂದ್ರದಲ್ಲಿ ಧ್ವನಿ ಎತ್ತಿದ್ದರು. ಅಲ್ಲದೆ ಕಾಫಿ ಬೆಳೆಗಾರರ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿರುವ ಸರ್ಫೇಸಿ ಕಾಯ್ದೆಯಿಂದ ಕಾಫಿ ಬೆಳೆಗಾರರಿಗೆ ಮುಕ್ತಿ ಕೊಡಿಸುವ ನಿಟ್ಟಿನಲ್ಲಿ  ತಮ್ಮದೇ ರೀತಿ ಹೋರಾಟ ನಡೆಸುತ್ತಿದ್ದರು. 2ನೇ ಭಾರೀ ಗೆ ಕಾಫಿ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಭೋಜೇಗೌಡರ ಅಧಿಕಾರದ ಅವಧಿ ಇದೇ ಮಾರ್ಚ್ ನಲ್ಲಿ ಅಂತ್ಯವಾಗಿತ್ತು.

ಇದನ್ನೂ ಓದಿ: Mud Pots: ಫ್ರಿಡ್ಜ್‌ಗೊಂದು ಕಾಲ, ಮಡಿಕೆಗೊಂದು ಕಾಲ! ಬೇಸಿಗೆಯಲ್ಲಿ ಬಡವರ ಫ್ರಿಡ್ಜ್‌ಗೆ ಭಾರೀ ಡಿಮ್ಯಾಂಡ್

ಚುನಾವಣೆಯಲ್ಲಿ ನಿಂತು ಸೋತಿದ್ದ ಭೋಜೇಗೌಡ

ಎಂ ಎಸ್ ಭೋಜೇಗೌಡ ಮೂರು ಪಕ್ಷದಲ್ಲೂ ಗೆಳಯರ ಬಳಗವನ್ನು ಹೊಂದಿದ್ದರು. ರಾಜಕೀಯದಲ್ಲಿ ಮೂರು ಪಕ್ಷಗಳ ಜಿಲ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಏಕೈಕ ವ್ಯಕ್ತಿ ಇವರು. ಜನತಾ ಪಕ್ಷದ ಮೂಲಕ ರಾಜಕೀಯ ಆರಂಭಿಸಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಕಾಂಗ್ರೇಸ್ ಪಕ್ಷಕ್ಕೆ ಸೇರಿ ಅಲ್ಲಿಯೂ ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರು. ತದನಂತರ ಬಿಜೆಪಿ ಪಕ್ಷ ಸೇರಿದ ಇವರು ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ  ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿದ್ದರು .ಅಲ್ಲದೆ ಚಿಕ್ಕಮಗಳೂರು ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಸಿ ಸೋಲು ಅನುಭೋವಿಸಿದರು.
Published by:Pavana HS
First published: