ಹಾಸನ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅರಕಲಗೂಡು (Arakalagudu) ವಿಧಾನಸಭಾ ಕ್ಷೇತ್ರ ತಾನೇ ಜೆಡಿಎಸ್ (JDS) ಅಭ್ಯರ್ಥಿ ಎಂದು ಸ್ವತಃ ಘೋಷಿಸಿಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ (Congress) ಎ ಮಂಜು (A Manju) ನಂತರ ಬಿಜೆಪಿ ಸೇರಿಕೊಂಡಿದ್ದರು. ಇದೀಗ ಜೆಡಿಎಸ್ ಸೇರೋದು ಬಹುತೇಕ ಖಚಿತವಾಗಿದ್ದು, ಜಾತ್ಯಾತೀತ ಜನತಾದಳಕ್ಕೆ ಅಧಿಕೃತ ಸೇರ್ಪಡೆಯೊಂದು ಬಾಕಿ ಇದೆ.
ಜೆಡಿಎಸ್‌ಗೆ ಮತ ಹಾಕುವಂತೆ ಪ್ರಮಾಣ ವಚನ
ಈ ಮಧ್ಯೆ ತಮ್ಮ ಅಭಿಮಾನಿಗಳ ಜೊತೆ ಸಭೆ ನಡೆಸಿರುವ ಎ ಮಂಜು ಅವರು ಜೆಡಿಎಸ್ ಪಕ್ಷಕ್ಕೆ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎಂದು ಮುಂದಕ್ಕೆ ಕೈ ಚಾಚಿ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಅಭಿಮಾನಿಗಳಿಂದ ಪ್ರಮಾಣ ಮಾಡಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಹತ್ತಿರ ಬರುತ್ತಿದ್ಧಂತೆ ರಾಜಕಾರಣಿಗಳಿಂದ ಆಣೆ ಪ್ರಮಾಣ ಕೆಲಸಗಳು ಜೋರಾಗಿಯೇ ನಡೆಯುತ್ತಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ಇದನ್ನೂ ಓದಿ: Shivalinge Gowda: ಶಾಸಕ ಶಿವಲಿಂಗೇಗೌಡ ಜೆಡಿಎಸ್ ತೊರೆದು ‘ಕೈ’ ಹಿಡಿಯೋದು ಬಹುತೇಕ ಫಿಕ್ಸ್! ಆಡಿಯೋ ವೈರಲ್
ತಾನು ಜೆಡಿಎಸ್‌ನಿಂದಲೇ ಚುನಾವಣೆಗೆ ಸ್ಪರ್ಧಿಸೋದಾಗಿ ಹೇಳಿಕೊಂಡಿರುವ ಎ ಮಂಜು, ತಮ್ಮ ಸ್ವಗ್ರಾಮ ಹನ್ಯಾಳಿಯಲ್ಲಿ ಕಾರ್ಯಕರ್ತರ ಸಭೆ ಕರೆದು ತನ್ನ ತೀರ್ಮಾನವನ್ನು ಹೇಳಿಕೊಂಡಿದ್ದಾರೆ. ಅಲ್ಲದೇ, ಇಂದಿನಿಂದ ನಾವೆಲ್ಲರೂ ಜೆಡಿಎಸ್ ಪಕ್ಷಕ್ಕೆ ಸೇರುತ್ತೇವೆ. ಎ ಮಂಜು ಅವರನ್ನ ಗೆಲ್ಲಿಸುವಂತಹ ಜವಾಬ್ದಾರಿ ನಮ್ಮದು. ನಾವೆಲ್ಲರೂ ಇಂದಿನಿಂದ ಜೆಡಿಎಸ್, ಮಂಜಣ್ಣದ್ದೊಂದು ಜೆಡಿಎಸ್ ಗುಂಪು ಇಲ್ಲ. ನಾವೆಲ್ಲರೂ ಜೆಡಿಎಸ್ ಕಾರ್ಯಕರ್ತರು ಎ.ಮಂಜು ಅಭಿಮಾನಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ ಆ ಮೂಲಕ ಜೆಡಿಎಸ್ ಪಕ್ಷ ಸೇರುವುದನ್ನು ಅಧಿಕೃತ ಮಾಡಿದ್ದಾರೆ.
ಇನ್ನು ಕಳೆದ ಎರಡು ವರ್ಷಗಳಿಂದ ಅರಕಲಗೂಡು ಜೆಡಿಎಸ್ ಶಾಸಕ ಎಟಿ ರಾಮಸ್ವಾಮಿ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ. ಹೀಗಾಗಿ ಎಟಿ ರಾಮಸ್ವಾಮಿ ಅವರನ್ನು ನಿರ್ಲಕ್ಷ್ಯ ಮಾಡಿದ್ದ ಎಚ್‌ಡಿ ಕುಮಾರಸ್ವಾಮಿ ಸಹಿತ ಜೆಡಿಎಸ್ ವರಿಷ್ಠರು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಎ.ಟಿ ರಾಮಸ್ವಾಮಿ ಬದಲಿಗೆ ಎ.ಮಂಜುಗೆ ಅವರಿಗೆ ಟಿಕೆಟ್ ನೀಡೋದಾಗಿ ಘೋಷಣೆ ಮಾಡಿದ್ದರು.
ಇನ್ನು ಇದೇ ಮಾರ್ಚ್ 16 ರಂದು ಅರಕಲಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದಿಂದ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೂ ಮುನ್ನವೇ ಎ ಮಂಜು ಅವರು ಅರಕಲಗೂಡು ವಿಧಾನಸಭಾ ಕ್ಷೇತ್ರಕ್ಕೆ ಅಧಿಕೃತವಾಗಿ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ. ಎ ಮಂಜು ಅವರ ಉಸ್ತುವಾರಿಯಲ್ಲೇ ಮಾರ್ಚ್ 16 ರಂದು ಅರಕಲಗೂಡಿನಲ್ಲಿ ಪಂಚರತ್ನ ಕಾರ್ಯಕ್ರಮ ನಡೆಯಲಿದ್ದು, ಏನೇನು ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಅನ್ನೋದನ್ನು ಕಾದು ನೋಡಬೇಕಿದೆ.
ಇದೇ ವಾರ ಅಧಿಕೃತ ಜೆಡಿಎಸ್‌ಗೆ ಸೇರ್ಪಡೆ
ಇನ್ನು ಮಾಜಿ ಸಚಿವ ಎ ಮಂಜು ಅವರು ಇದೇ ಮಾರ್ಜ್ 11 ಅಥವಾ 12ನೇ ತಾರೀಕಿನಂದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಅದಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಎಚ್‌ಡಿ ದೇವೇಗೌಡ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಎ ಮಂಜು ಅಂತಿಮ ಹಂತದ ಮಾತುಕತೆ ನಡೆಸಿ ಆಶೀರ್ವಾದ ಪಡೆದಿದ್ದಾರೆ.
ಮಾ.11 ಅಥವಾ ಮಾ.12ರಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಸಮ್ಮುಖದಲ್ಲಿ ಎ. ಮಂಜು ಜೆಡಿಎಸ್ ಪಕ್ಷ ಸೇರ್ಪಡೆ ಆದರೆ ಮಾ. 16 ರಂದು ಅರಕಲಗೂಡಿನಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ