ಕೋಮಾ ಸ್ಥಿತಿಯಲ್ಲಿ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್

ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆರೋಗ್ಯ ತೀರಾ ಹದಗೆಟ್ಟಿರುವುದರಿಂದ ಮಾಜಿ ಸಚಿವರು ಕೋಮಾ ಸ್ಥಿತಿಯಲ್ಲಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ.

G Hareeshkumar | news18
Updated:December 6, 2018, 8:30 PM IST
ಕೋಮಾ ಸ್ಥಿತಿಯಲ್ಲಿ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್
ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್
G Hareeshkumar | news18
Updated: December 6, 2018, 8:30 PM IST
- ರಮೇಶ್ ಹಿರೇಂಜಂಬೂರು

ಬೆಂಗಳೂರು (ಡಿ.06) : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್ ಕಳೆದ ನಾಲ್ಕು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ : ಆರು ತಿಂಗಳ ಗರ್ಭಿಣಿ ಸಾವು: ಐಸಿಯುನಿಂದಲೇ ಪೋಷಕರಿಗೆ ಪತ್ರ ಬರೆದ ಯುವತಿ

ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಆರೋಗ್ಯ ತೀರಾ ಹದಗೆಟ್ಟಿರುವುದರಿಂದ ಮಾಜಿ ಸಚಿವರು ಕೋಮಾ ಸ್ಥಿತಿಯಲ್ಲಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 67 ವರ್ಷದ ಧನಂಜಯ ಕುಮಾರ್ ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಗುರುತು ಹಿಡಿಯಲಾರದಷ್ಟು ಅವರು ಕೃಶರಾಗಿದ್ದಾರೆ.

ಜೈನ ಸಮುದಾಯದ ಇವರು 4 ಬಾರಿ ಮಂಗಳೂರು ಲೋಕಸಭೆಗೆ ಆಯ್ಕೆಯಾಗಿದ್ದ ಇವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿ ಇವರು ಯಡಿಯೂರಪ್ಪ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಬಿಎಸ್​ವೈ ಬೆನ್ನಿಗೆ ನಿಂತಿದ್ದರು.

ಯಡಿಯೂರಪ್ಪ ಬಿಜೆಪಿ ಮರಳಿದ ನಂತರ ಧನಂಜಕುಮಾರ್​ ಅವರನ್ನು ದೂರ ಮಾಡಿದ್ದರು. ನಂತರ ಜೆಡಿಎಸ್ ಪಕ್ಷ ಸರಿ ಶೋಭಾ ಕರಂದ್ಲಾಜೆ ವಿರುದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೊತಿದ್ದರು.

ಇದನ್ನು ಓದಿ : ಕಾರ್ಪೊರೇಟರ್ ಏಳುಮಲೈಗೆ ಏನಾಗಿದೆ? ವಾರದಿಂದಲೂ ರಹಸ್ಯವಾಗಿಯೇ ಇದೆ ಏಳುಮಲೈ ಆರೋಗ್ಯ ಸ್ಥಿತಿ
Loading...

ಕೆಲ ವರ್ಷಗಳ ಹಿಂದೆ ಬಿಜೆಪಿ ಭೀಷ್ಮ ಅಡ್ವಾಣಿ ಅವಕೃಪೆಗೆ ಇಡಾಗಿ ಅವನತಿಯತ್ತ ಮುಖ ಮಾಡಿದರು. ರಾಜಕೀಯ ಬದಲಾವಣೆಯಿಂದ ಕಾಂಗ್ರೆಸ್,  ಜೆಡಿಎಸ್​  ಎಡತಾಕಿದರೂ ಈ ಘಟನೆ ಬಳಿಕ ಮತ್ತೆ ರಾಜಕೀಯವಾಗಿ ಧನಂಜಯ ಕುಮಾರ್​ ಮೇಲೆಳಲೇ ಇಲ್ಲ.

First published:December 6, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...