ಕಾಂಗ್ರೆಸ್​ ಹೈಕಮಾಂಡ್​ ಲೋ ಕಮಾಂಡ್​ ಆಗಿದೆ, ಕೆಪಿಸಿಸಿ ಮನೆಯೊಂದು ಮೂರು ಬಾಗಿಲು; ಕಿಡಿಕಾರಿದ ಎಂಟಿಬಿ ನಾಗರಾಜ್

ಸಂಪುಟ ವಿಸ್ತರಣೆಗೆ ಸಕಾರಣ ಇದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ. ಸಿಎಂ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಸಂಸದ ಬಚ್ಚೇಗೌಡ ವಿರುದ್ಧ ಕ್ರಮ ವಹಿಸುವ ವಿಶ್ವಾಸ ಇದೆ ಎಂದು ಟಂಟಿಬಿ ನಾಗರಾಜ್ ತಿಳಿಸಿದ್ದಾರೆ.

ಅನರ್ಹ ಶಾಸಕ ಎಂಟಿಬಿ ನಾಗಾರಾಜ್​​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ

ಅನರ್ಹ ಶಾಸಕ ಎಂಟಿಬಿ ನಾಗಾರಾಜ್​​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ

  • Share this:
ಬೆಂಗಳೂರು (ಜನವರಿ 19); ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ, ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಇದೇ ಕಾರಣ. ಕಾಂಗ್ರೆಸ್ ​ ಮೂರು ಗುಂಪುಗಳಾಗಿದ್ದು ಈ ಗುಂಪುಗಾರಿಕೆಯೇ ಈ ಸ್ಥಿತಿಗೆ ಕಾರಣ. ರಾಜ್ಯ ಕಾಂಗ್ರೆಸ್​ ಅಕ್ಷರಶಃ ಮನೆಯೊಂದು ಮೂರು ಬಾಗಿಲಿನಂತಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.

ಕೋಲಾರದ ಮಾಲೂರು ಪಟ್ಟಣದಲ್ಲಿ ಬಿಜೆಪಿ ಪಕ್ಷದ ಮುಖಂಡ ಹೂಡಿ ವಿಜಯ್​ ಕುಮಾರ್​ ಟ್ರಸ್ಟ್​ ಕಚೇರಿ ಉದ್ಘಾಟನೆ ಆಗಮಿಸಿದ್ದ ವೇಳೆ ಮಾತನಾಡಿರುವ ಎಂಟಿಬಿ ನಾಗರಾಜ್, "ರಾಜ್ಯ ಕಾಂಗ್ರೆಸ್​ನಲ್ಲಿ ಮೂರು ಗುಂಪುಗಳಿವೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್​ ಹೆಸರಿನಲ್ಲಿ ಗುಂಪುಗಳಿವೆ. ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಎಂ.ಬಿ. ಪಾಟೀಲ್ ಪರ ಲಾಬಿ ನಡೆಸುತ್ತಿದ್ದಾರೆ. ಡಿಕೆಶಿ ಸಹ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ. ಒಟ್ಟಲ್ಲಿ ಮುಂಜೂಣಿ ನಾಯಕರಿಂದಲೇ ಕಾಂಗ್ರೆಸ್​ಗೆ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿರುವ ಅವರು, "ಸಂಪುಟ ವಿಸ್ತರಣೆಗೆ ಸಕಾರಣ ಇದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ. ಸಿಎಂ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಸಂಸದ ಬಚ್ಚೇಗೌಡ ವಿರುದ್ಧ ಕ್ರಮ ವಹಿಸುವ ವಿಶ್ವಾಸ ಇದೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸಂಪುಟ ವಿಸ್ತರಣೆಗೆ ಅಮಿತ್ ಶಾ ಒಪ್ಪಿಗೆ ಸಿಕ್ಕಿದೆ, ವಿದೇಶದಿಂದ ವಾಪಾಸಾದ ಮೇಲೆ ಪಟ್ಟಿ ಪ್ರಕಟ; ಸಿಎಂ ಭರವಸೆ
First published: