Hubballi: ಕಾರ್ಖಾನೆಯಲ್ಲಿ ಸ್ಫೋಟ ಕೇಸ್​; ಮೂವರು ಸಾವು, ಮಾಲೀಕರ ವಿರುದ್ಧ ಸಚಿವ ಹಾಲಪ್ಪ ಗರಂ

ಹುಬ್ಬಳ್ಳಿಯ ತಾರಿಹಾಳ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಕಾರ್ಖಾನೆ ಹಾಗೂ ಕಿಮ್ಸ್ ಗೆ ಭೇಟಿ ನೀಡಿದ ಹಾಲಪ್ಪ ಆಚಾರ್, ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೇ ಇರಲಿ ಹೆಡೆಮುರಿ ಕಟ್ತೇವೆ ಎಂದು ಎಚ್ಚರಿಸಿದ್ದಾರ

ಸ್ಫೋಟ ಪ್ರಕರಣದಲ್ಲಿ ಮೂವರು ಸಾವು

ಸ್ಫೋಟ ಪ್ರಕರಣದಲ್ಲಿ ಮೂವರು ಸಾವು

  • Share this:
ಹುಬ್ಬಳ್ಳಿ (ಜು. 24);  ತಾರಿಹಾಳ ಸ್ಪಾರ್ಕಲ್ಸ್ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ (Sparker Candle Factory )  ನಡೆದ ಸ್ಫೋಟ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದು (3 People Died), ಐವರಿಗೆ ಕಿಮ್ಸ್ ನಲ್ಲಿ (KIMS) ಚಿಕಿತ್ಸೆ ಮುಂದುವರೆಸಲಾಗಿದೆ. ಸಾವಿನ ಸುದ್ದಿ ತಿಳಿದು ಕುಟುಬಂದ ಸದಸ್ಯರ ಕಣ್ಣೀರು ಹಾಕಿದರು. ಘಟನೆಯ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar), ನಂತರ ಕಿಮ್ಸ್ ಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದರು. ಈ ವೇಳೆ ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಯಾರೇ ಇರಲಿ ಹೆಡೆಮುರಿ ಕಟ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಚಿಕಿತ್ಸೆ ಫಲಿಸದೇ ಮೂವರು ಸಾವು

ಹುಬ್ಬಳ್ಳಿಯ ತಾರಿಹಾಳ ಕಾರ್ಖಾನೆಯಲ್ಲಿ ಬ್ಲಾಸ್ಟ್ ಪ್ರಕರಣದಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಒಬ್ಬರು, ಇಂದು ಬೆಳಿಗ್ಗೆ ಇಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ವಿಜಯಲಕ್ಷ್ಮಿ, ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದಾರೆ. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು.

ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. ಉಳಿದ ಐವರಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮುವ್ವರಿಗೂ ಶೇ. 80 ರಿಂದ 90 ರಷ್ಟು ಸುಟ್ಟ ಗಾಯಗಳಾಗಿದ್ದವು. ವೈದ್ಯರ ಸತತ ಪ್ರಯತ್ನದ ನಂತರವೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Basavaraj Bommai: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಘಟನಾ ಸ್ಥಳಕ್ಕೆ ಹಾಲಪ್ಪ ಆಚಾರ್ ಭೇಟಿ

ತಾರಿಹಾಳ ಪಾರ್ಕಲ್ಸ್ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬ್ಲಾಸ್ಟ್ ಪ್ರಕರಣದಲ್ಲಿ ಮುವ್ವರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿದರು. ಸ್ಫೋಟಕ್ಕೆ ತುತ್ತಾದ ಫ್ಯಾಕ್ಟರಿ ಪರಿಶೀಲನೆ ಮಾಡಿದ ಹಾಲಪ್ಪ ಆಚಾರ್, ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹಾಲಪ್ಪ, ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿಗಳ ಹೆಡೆಮುರಿ ಕಟ್ತೇವೆ ಎಂದ ಆಚಾರ್

ಆರೋಪಿಗಳ ಹೆಡೆಮುರಿ ಕಟ್ಟಲಾಗುವುದು. ಯಾರನ್ನೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹಾಲಪ್ಪ ಆಚಾರ್ ಎಚ್ಚರಿಸಿದರು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಒಂದು ದುರ್ಘಟನೆ ನಡೆಯಬಾರದಿತ್ತು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಉಳಿದವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಕಾನೂನು ಬಾಹಿರವಾಗಿ ಕಾರ್ಖಾನೆ ನಡೆಸುತ್ತಿದ್ದಾರೆಂಬ ಮಾಹಿತಿ ಇದೆ. ಕಾರ್ಖಾನೆ ಮಾಲೀಕರ ಜೊತೆ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು.

ಮೃತರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ

ಅಗ್ನಿ ಅವಘಡಕ್ಕೆ ಸಂಬಂಧಿಸಿ  ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸಿಲ್ಲ. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಒಳಪಡಿಸಲಾಗಿದೆ. ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅಗ್ನಿ ಅನಾಹುತಕ್ಕೆ ಕಾರಣವಾಗಿರುವ ಕಾರ್ಖಾನೆ ಲೈಸನ್ಸ್ ಪಡೆದಿಲ್ಲ. ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ದುರಂತಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೇರಿದಂತೆ ಶಾಮೀಲಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ. ಕಾರ್ಖಾನೆ ಎಂದ ಮೇಲೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.

ಇದನ್ನೂ ಓದಿ: Hubballi: ಸ್ಪಾರ್ಕರ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ; 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಆದ್ರೆ, ಇಲ್ಲಿ ಯಾವುದೇ ಮುಂಜಾಗ್ರತೆಯ ಕೈಗೊಂಡಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತದೆ. ಇದರಿಂದ ಮೂವರು ಜೀವ ಕಳೆದುಕೊಳ್ಳುವಂತಾಯಿತು. ಇದು ಸಾಮಾನ್ಯ ಸಂಗತಿಯಲ್ಲ, ಹೋದ ಜೀವ ಮತ್ತೆ ಬರಲ್ಲ. ಕಾರ್ಖಾನೆಯಲ್ಲಿ ಒಟ್ಟು 14 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ನಿನ್ನೆ ಘಟನೆಯಲ್ಲಿ 8 ಜನರಿದ್ದರು, ಅನಧಿಕೃತ ಕಾರ್ಖಾನೆಗಳ ಸಮೀಕ್ಷೆ ಮಾಡಲು ಸೂಚನೆ ನೀಡಿದ್ದೇನೆ. ಜಿಲ್ಲೆಯಲ್ಲಿ 14 ಕೈಗಾರಿಕಾ ಪ್ರದೇಶಗಳಿದ್ದು, ಲೈಸನ್ಸ್ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ. ಈ ಕುರಿತು  ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸ್ಫೋಟದಲ್ಲಿ ಮೃತರ ಮಕ್ಕಳ ಆರೈಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಲವಿಕಾಸ ಯೋಜನೆಯಡಿ ಮೂರು ವರ್ಷ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Published by:Pavana HS
First published: