HOME » NEWS » State » FALSE INFORMATIONAL CIRCULATING IN KARNATAKA EDUCATION MINISTER SURESH KUMAR FAKE TWITTER ACCOUNT SCT

ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಪಿಯು ನಿರ್ದೇಶಕರಿಂದ ಸೈಬರ್ ಕ್ರೈಂಗೆ ದೂರು 

ಸಚಿವ ಸುರೇಶ್ ಕುಮಾರ್ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ “ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ ಸೂಚಿಸಲಾಗಿದೆ’ ಎಂಬ ಸುಳ್ಳು ಸಂದೇಶವನ್ನು ಪೋಸ್ಟ್​ ಮಾಡಲಾಗಿದೆ.

news18-kannada
Updated:July 15, 2020, 6:28 PM IST
ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಪಿಯು ನಿರ್ದೇಶಕರಿಂದ ಸೈಬರ್ ಕ್ರೈಂಗೆ ದೂರು 
ಸಚಿವ ಸುರೇಶ್​ ಕುಮಾರ್
  • Share this:
ಬೆಂಗಳೂರು (ಜು. 15): ಇತ್ತೀಚೆಗೆ ನಕಲಿ ಟ್ವಿಟ್ಟರ್, ಫೇಸ್​ಬುಕ್ ಖಾತೆ ಹಾವಳಿ ಹೆಚ್ಚಾಗಿದೆ. ಪಿಯುಸಿ ಮೌಲ್ಯಮಾಪನ ಸಂದರ್ಭದಲ್ಲಿ ಇಂಗ್ಲಿಷ್ ವಿಷಯದ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಕೆಲ ಕಿಡಿಗೇಡಿಗಳು ಶಿಕ್ಷಣ ಸಚಿವರ ಹೆಸರಿನಲ್ಲಿ ನಕಲಿ ಟ್ವೀಟ್ ಮಾಡಿ ಮೌಲ್ಯಮಾಪಕರಿಗೆ ಆದೇಶ ಸೂಚಿಸಿದ್ದರು. ಸಚಿವ ಸುರೇಶ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುವುದರಿಂದ ಇವರೇ ಸೂಚನೆ ನೀಡಿದ್ದಾರೆಂದು ಹಲವು ಜನ ನಂಬಿಯೇ ಬಿಟ್ಟಿದ್ದರು. ಅದಾದ ಮೇಲೆ ಗೊತ್ತಾಗಿದ್ದು ಇದೆಲ್ಲ ನಕಲಿ ಟ್ವೀಟ್ ಮಾಡಿದವರ ಕಿತಾಪತಿ ಕೆಲಸವೆಂದು.

ಈ ಕುರಿತು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟೀಕರಣ ನೀಡಿದ್ದರು. ಇದೀಗ ಕಿಡಿಗೇಡಿಗಳ ವಿರುದ್ದ ದೂರು ದಾಖಲು ಮಾಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಯ ಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ.

False Informational Circulating from Karnataka Education Minister Suresh Kumar Fake Twitter Account.

ಸಚಿವ ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸಚಿವರ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ “ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ ಸೂಚಿಸಲಾಗಿದೆ’ ಎಂಬ ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ಗೆ ಡೋಂಟ್ ಕೇರ್; ಬೆಂಗಳೂರಲ್ಲಿ ಅನಾವಶ್ಯಕವಾಗಿ ತಿರುಗುವವರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜೂ.18ರಂದು ನಡೆದಿದ್ದು, ರಾಜ್ಯದ 20 ಮೌಲ್ಯಮಾಪನ ಕೇಂದ್ರದಲ್ಲಿ ಜೂ. 20ರಿಂದ ಜು. 7ರವರೆಗೆ ನಡೆದಿದ್ದು, ಜು. 14ರಂದು ಫಲಿತಾಂಶ ಪ್ರಕಟಿಸಲಾಗಿದೆ. ದೂರಿನ ಜೊತೆ ನಕಲಿ ಟ್ವಿಟರ್ ಖಾತೆಯಲ್ಲಿ ಹರಿಯಬಿಟ್ಟ ಸಂದೇಶದ ಪ್ರತಿಯನ್ನು ಲಗತ್ತಿಸಿದ್ದು, ಈ ನಕಲಿ ಸಂದೇಶದಿಂದ ರಾಜ್ಯದ ಪಿಯು ವಿದ್ಯಾರ್ಥಿಗಳು, ಪೋಷಕರು, ಇಲಾಖೆಯ ಅಧಿಕಾರಿಗಳಲ್ಲಿ ಆತಂಕ, ಗೊಂದಲಗಳಿಗೆ ಕಾರಣವಾಗಿದೆ.
ಇದು ಇಲಾಖೆಗೆ ಮುಜುಗರದ ಸನ್ನಿವೇಶವನ್ನು ಸೃಷ್ಟಿಸಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇಲಾಖೆಗೆ ಮುಜುಗರ ತರುವಂತಹ ಸಂದೇಶ ಹರಿಯಬಿಟ್ಟ ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.
Published by: Sushma Chakre
First published: July 15, 2020, 6:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories