• Home
  • »
  • News
  • »
  • state
  • »
  • HD Kumaraswamy: ಮಗುವಿಗೆ ಹುಷಾರಿಲ್ಲ ದಮ್ಮಯ್ಯ ಬಿಟ್ಟು ಬಿಡಿ ಎಂದ್ರು ಬಿಡಲಿಲ್ಲ ಪೊಲೀಸರು; ಖಾಕಿ ವರ್ತನೆಗೆ ಎಚ್​ಡಿಕೆ ಕಿಡಿ

HD Kumaraswamy: ಮಗುವಿಗೆ ಹುಷಾರಿಲ್ಲ ದಮ್ಮಯ್ಯ ಬಿಟ್ಟು ಬಿಡಿ ಎಂದ್ರು ಬಿಡಲಿಲ್ಲ ಪೊಲೀಸರು; ಖಾಕಿ ವರ್ತನೆಗೆ ಎಚ್​ಡಿಕೆ ಕಿಡಿ

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • News18 Kannada
  • Last Updated :
  • Karnataka, India
  • Share this:

    ಮಂಡ್ಯದಲ್ಲಿ (Mandya) ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ನೀಡಿದ ಕಿರುಕುಳ ಖಂಡನೀಯ ಎಂದು ಮಾಜಿ ಸಿಎಂ ಎಚ್.​ಡಿ ಕುಮಾರಸ್ವಾಮಿ (kumaraswamy) ಆಕ್ರೋಶ ಹೊರ ಹಾಕಿದ್ದಾರೆ. ದಂಪತಿ ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು, ಖಂಡನೀಯ ಎಂದು ಮಾಜಿ ಸಿಎಂ ಟ್ವೀಟ್​ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಮಾನವೀಯತೆ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇ ಪದೇ ಘಟಿಸುತ್ತಿರುವುದು ಆಘಾತಕಾರಿ ವಿಷಯ (Shocking News) ಎಂದು ಕುಮಾರಸ್ವಾಮಿ ಹೇಳಿದ್ದಾರೆ.


    ವಿಡಿಯೋ ನೋಡಿ ಬಹಳ ಸಂಕಟವಾಯ್ತು


    ಈ ಘಟನೆ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ ಬಹಳ ಬೇಸರವಾಯ್ತು ಆಸ್ಪತ್ರೆಗೆ ಬೈಕ್‌ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ - ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು.






    ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರ್ಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.


    ಇದನ್ನೂ ಓದಿ: Renukacharya: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್​ ಶವ ಪತ್ತೆ, ಕಾಲುವೆಯಲ್ಲಿ ಬಿದ್ದಿದ್ದ ಕಾರು


    ಇಲಾಖೆಯೇ ತಲೆ ತಗ್ಗಿಸುವಂತದ್ದು


    ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. "ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ" ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಎಚ್​ಡಿಕೆ ಕಿಡಿಕಾರಿದ್ದಾರೆ.


    ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟಿದ್ದಾರೆ


    ಆ ಮಗುವಿನ ತಂದೆ ಕೊನೆಗೂ ಗೆಳೆಯರೊಬ್ಬರಿಂದ ಹಣ ಪಡೆದು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟು ಕಳಿಸಿದ್ದಾರೆ. ಬದಲಿಗೆ ದಂಡದ ರಸೀತಿ ಕೊಟ್ಟು, ಆ ನಂತರ ದಂಡ ಕಟ್ಟಿ ಎಂದು ಪೊಲೀಸರು ಹೇಳಬಹುದಿತ್ತು. ಹಾಗೆ ಮಾಡದೇ ದಂಡಪ್ರಯೋಗದ ಹೆಸರಿನಲ್ಲಿ ಪೊಲೀಸರು ಹಿಂಸೆ ನೀಡಿದ್ದಾರೆ.


    ಇದನ್ನೂ ಓದಿ: Rain Update: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ, ಇನ್ನೂ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ


    ಸೂಕ್ತ ಕ್ರಮ ತೆಗದುಕೊಳ್ಳುವಂತೆ ಎಚ್​ಡಿಕೆ ಆಗ್ರಹ


    ಕೂಡಲೇ ಆ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ವಹಿಸಬೇಕು ಹಾಗೂ ಇಂಥ ಮನಃಸ್ಥಿತಿಯ ಪೊಲೀಸ್ ಸಿಬ್ಬಂದಿಯ ಮನಃ ಪರಿವರ್ತನೆ ಮಾಡಬೇಕು. ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಮುತುವರ್ಜಿ, ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

    Published by:ಪಾವನ ಎಚ್ ಎಸ್
    First published: