News18 India World Cup 2019

ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ಬಿರುಕು..!

ಹೊಯ್ಸಳರ ರಾಜ ವಿಷ್ಣುವರ್ಧನ ಕ್ರಿ.ಶ.12 ನೇ ಶತಮಾನದಲ್ಲಿ ಈ ಚನ್ನಕೇಶವ ದೇವಾಲಯವನ್ನು ನಿರ್ಮಿಸಿದ್ದರು. ವಿಶ್ವವಿಖ್ಯಾತ ಚನ್ನಕೇಶವ ದೇವಾಲಯ ನಿರ್ಮಿಸಿ ಇಂದಿಗೆ 902 ವರ್ಷಗಳು ಕಳೆದಿದೆ. 

Latha CG | news18
Updated:June 14, 2019, 1:11 PM IST
ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ಬಿರುಕು..!
ಬೇಲೂರು ಚನ್ನಕೇಶವ ದೇವಾಲಯ (ಫೈಲ್​ ಫೋಟೋ)
Latha CG | news18
Updated: June 14, 2019, 1:11 PM IST
ಹಾಸನ,(ಜೂ.14): ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿದ್ದ ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಾಲಯದ ಮೇಲ್ಛಾವಣಿಯಲ್ಲಿ ಬಿರುಕು ಬಿಟ್ಟಿದ್ದು, ಕಂಬ ವಾಲಿದೆ ಎಂದು ತಿಳಿದುಬಂದಿದೆ.

ಹೊಯ್ಸಳರ ರಾಜ ವಿಷ್ಣುವರ್ಧನ ಕ್ರಿ.ಶ.12 ನೇ ಶತಮಾನದಲ್ಲಿ ಈ ಚನ್ನಕೇಶವ ದೇವಾಲಯವನ್ನು ನಿರ್ಮಿಸಿದ್ದರು. ವಿಶ್ವವಿಖ್ಯಾತ ಚನ್ನಕೇಶವ ದೇವಾಲಯ ನಿರ್ಮಿಸಿ ಇಂದಿಗೆ 902 ವರ್ಷಗಳು ಕಳೆದಿದೆ. 

ಹೊಯ್ಸಳರು ತಲಕಾಡಿನ ಚಾಲುಕ್ಯರ ಮೇಲೆ ಯುದ್ದ ಮಾಡಿ ಗೆದ್ದ ಪ್ರತೀಕವಾಗಿ ಚನ್ನಕೇಶವ ದೇವಾಲಯವನ್ನು ನಿರ್ಮಾಣ ಮಾಡಲಾಗಿತ್ತು. ಇಡೀ ದೇವಾಲಯವನ್ನು ಕಲ್ಲಿನಿಂದ ಕೆತ್ತಲಾಗಿದೆ. ರಾಜ ವಿಷ್ಣುವರ್ಧನ 1106 ರಿಂದ 1117 ರವರೆಗೆ 11 ವರ್ಷಗಳ ಕಾಲ ದೇವಾಲಯ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯರ ಪ್ರತಿಭಟನೆ; ಬೆಂಗಳೂರು, ದೆಹಲಿ, ಹೈದರಾಬಾದ್ ಸೇರಿ ಹಲವೆಡೆ ಬೆಂಬಲ, ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

ಚನ್ನಕೇಶವ ದೇವಾಲಯ ಹಾಸನ ಜಿಲ್ಲೆಯ ಮುಖ್ಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ದೇಶ-ವಿದೇಶಗಳಿಂದ ಆಗಮಿಸಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. 'ಶಿಲಾಬಾಲಿಕೆಯರ ಬೇಲೂರು' ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ  ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.

ಇತಿಹಾಸ ಪ್ರಸಿದ್ಧ ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ಬಿರುಕು ಬಿಟ್ಟಿರುವುದು ಪ್ರವಾಸಿಗರ ಆತಂಕಕ್ಕೆ ಕಾರಣವಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಈ ದೇವಾಲಯ ಕರ್ನಾಟಕದ ಮುಖ್ಯ ಪ್ರೇಕ್ಷಣೀಯ ಸ್ಥಳವಾಗಿದೆ.
Loading...

First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...