HOME » NEWS » State » FARMER CM HD KUMAR SLAMS CULPRITS WHO CAUSED FOR BENGALURU RIOT GNR

DJ Halli Violence: ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡವರ ಮಟ್ಟಹಾಕಬೇಕು - ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ

ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ಕುರಾನ್ ಆಲ್ ಹಿಜ್ರ್ 15 ಎಂದು ಮತ್ತೊಂದು ಟ್ವೀಟ್​​ನಲ್ಲಿ ಎಚ್​​ಡಿಕೆ ಉಲ್ಲೇಖಿಸಿದ್ದಾರೆ.

news18-kannada
Updated:August 12, 2020, 11:49 AM IST
DJ Halli Violence: ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡವರ ಮಟ್ಟಹಾಕಬೇಕು - ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ
ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ
  • Share this:
ಬೆಂಗಳೂರು(ಆ.12): ಬೆಂಗಳೂರಿನ ಡಿ.ಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಎಚ್​.ಡಿ ಕುಮಾರಸ್ವಾಮಿ, ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ. ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಎಚ್​​ಡಿಕೆ ಕಿವಿಮಾತು ಹೇಳಿದ್ದಾರೆ.

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇದಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಎಚ್​​ಡಿಕೆ ಕುಟುಕಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ, ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಪೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ." ಕುರಾನ್ ಆಲ್ ಹಿಜ್ರ್ 15 ಎಂದು ಮತ್ತೊಂದು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: DJ Halli Violence - ಡಿಜೆ ಹಳ್ಳಿ ಗಲಭೆಗೆ ಬಿಜೆಪಿ, ಕಾಂಗ್ರೆಸ್ ನಾಯಕರ ಖಂಡನೆ

ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ, ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಬಸವಣ್ಣನವರ ವಚನದ ಮೂಲಕ ಧರ್ಮದ ಬಗ್ಗೆ ಎಚ್​​ಡಿಕೆ ಹೇಳಿದ್ದಾರೆ.
Published by: Ganesh Nachikethu
First published: August 12, 2020, 11:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories