Rakesh Tikait: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ, ಮುಖಕ್ಕೆ ಮಸಿ ಬಳಿದ ಕಿಡಿಗೇಡಿಗಳು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲಾಗಿದೆ. ರಾಜ್ಯದ ರೈತ ನಾಯಕ ಕೋಡಿಹಳ್ಳಿ‌ ಚಂದ್ರಶೇಖರ (Kodihalli Chandrashekhar) ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಚರ್ಚಿಸಲು ಬಂದಿದ್ದ ವೇಳೆ ಮಾರಾಮಾರಿ ನಡೆದಿದೆ.

ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

  • Share this:
ಬೆಂಗಳೂರು: ರೈತ ನಾಯಕ (Farmer leader) ರಾಕೇಶ್ ಟಿಕಾಯತ್‌ (Rakesh Tikaiat) ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ (Press meet) ನಡೆಸುವ ವೇಳೆ ಕಿಡಿಗೇಡಿಗಳು ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ರಾಜ್ಯದ ರೈತ ನಾಯಕ ಕೋಡಿಹಳ್ಳಿ‌ ಚಂದ್ರಶೇಖರ (Kodihalli Chandrashekhar) ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ‌ ಮಾರಾಮಾರಿ ನಡೆದಿದೆ. ಏಕಾಏಕಿ ಸುದ್ದಿಗೋಷ್ಠಿಗೆ ನುಗ್ಗಿದ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್‌ ಮೇಲೆ ಮೈಕ್‌ನಿಂದ (Mike) ಹೊಡೆದು ಹಲ್ಲೆ ಮಾಡಿದ್ದಾನೆ. ಬಳಿಕ ಅವರ ಮುಖಕ್ಕೆ ಮಸಿ‌ (Ink) ಬಳಿದಿದ್ದಾನೆ.

ರಾಕೇಶ್ ಟಿಕಾಯತ್ ಮೇಲೆ ಹಲ್ಲೆ

ಕೋಜಿಹಳ್ಳಿ ಚಂದ್ರಶೇಖರ್ ಮೇಲೆ ಬಂದಿರುವ ಆರೋಪದ ಸಂಬಂಧ ರಾಕೇಶ್ ಟಿಕಾಯತ್ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ರೈತ‌ ಸಂಘದ ಮೂಲ ಹೋರಾಟಗಾರರು ಕರೆದಿದ್ದ ಸಭೆಯಲ್ಲಿ ಹಾಜರಾಗಿದ್ದ ವ್ಯಕ್ತಿಯೊಬ್ಬ, ಮೋದಿ ಹೆಸರು ಕೂಗಿದ್ದ. ಏಕಾಏಕಿ ವೇದಿಕೆಗೆ ನುಗ್ಗಿದ್ದ ವ್ಯಕ್ತಿ, ರಾಕೇಶ್ ಟಿಕಾಯತ್ ಮೇಲೆ ಮೈಕ್ ಕಿತ್ತು ಹೊಡೆದ. ನಂತರ ಎಲ್ಲರೂ ವ್ಯಕ್ತಿಯನ್ನು ಹಿಡಿದು ಥಳಿಸಿದರು. ಕುರ್ಚಿಗಳನ್ನು ಹಿಡಿದು ತೂರಿದ್ದಾರೆ.

ಗಲಾಟೆ ನಡೆದಿದ್ದು ಯಾಕೆ?

ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅದಾದ ನಂತರ ರಾಕೇಶ್‌ ಟಿಕಾಯತ್‌ ಮೇಲೆ ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದಕ್ಕೆ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸ್ಪಷ್ಟೀಕರಣ ನೀಡಲು ಸುದ್ದಿಗೋಷ್ಠಿ ಕರೆದಿದ್ದರು. ಸುದ್ದಿಗೋಷ್ಠಿ ನಡೆಯುತ್ತಿದ್ದ ವೇಳೆಯೇ ಅವರ ಮೇಲೆ ಹಲ್ಲೆ ನಡೆಸಿ, ಬಳಿಕ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ.

ಇದನ್ನೂ ಓದಿ: Rajyasabha ಟಿಕೆಟ್ ಘೋಷಣೆ ಬೆನ್ನಲ್ಲೇ ಕೈ ಅಂಗಳದಲ್ಲಿ ಅಸಮಾಧಾನ ಸ್ಫೋಟ; ನನ್ನ ನಿರೀಕ್ಷೆ ಸುಳ್ಳಾಯ್ತು ಅಂದ್ರು ಮುದ್ದಹನುಮೇಗೌಡರು

ಪ್ರೆಸ್‌ ಮೀಟ್‌ನಲ್ಲೇ ತಳ್ಳಾಟ, ಮಾರಾಮಾರಿ

ಸುದ್ದಿಗೋಷ್ಠಿಯಲ್ಲಿ ರಾಕೇಶ್ ಟಿಕಾಯತ್‌ ಮುಖಕ್ಕೆ ಮಸಿ  ಬಳಿಯುತ್ತಿದ್ದಂತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಳಿಕ ರಾಕೇಶ್ ಟಿಕಾಯತ್ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಬಣದ ಬೆಂಬಲಿಗರು ಕೈಕೈ ಮಿಲಾಯಿಸಿದ್ದಾರೆ. ಎರಡೂ ಬಣದ ರೈತರು ಗಾಂಧಿ ಭವನದಲ್ಲಿದ್ದ ಕುರ್ಚಿಯನ್ನೇ ತೆಗೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ದೃಶ್ಯ ಚಿತ್ರೀಕರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.ಮಸಿ ಬಳಿದಿದ್ದು ಯಾರು ಅಂತ ಗೊತ್ತಿಲ್ಲ ಎಂದ ಟಿಕಾಯತ್

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಕೇಶ್‌ ಟಿಕಾಯತ್‌, ಮಸಿ ಬಳಿದವರು ಯಾರು ಎಂಬುದು ಗೊತ್ತಿಲ್ಲ ಎಂದಿದ್ದಾರೆ. ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ. ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಜೊತೆಗೆ ಯಾವುದೇ ಭದ್ರತೆಯನ್ನು ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಘಟನೆಗೆ ಕರ್ನಾಟಕ ಸರ್ಕಾರದ ಬೆಂಬಲವಿದೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಇಬ್ಬರ ಬಂಧನ

ಈಗಾಗಲೇ ಮಸಿ ಬಳಿದಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾಗಳಲ್ಲಿ ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Rohit Chakratirtha: ನಾಡಗೀತೆಗೆ ಅವಮಾನ; ರೋಹಿತ್ ಚಕ್ರತೀರ್ಥ ವಿರುದ್ಧ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ

ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಆರೋಪಿಸಿದ್ದ ಜೆಡಿಎಸ್ ಕಾರ್ಯಕರ್ತರು

ಈ ಹಿಂದೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದುರು. ರೈತ ಸಂಘದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ದಂಧೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹೆಸರಿನಲ್ಲಿ ಸಾರಿಗೆ ನೌಕರರು ಮುಂದಾದಾಗ ನೇತೃತ್ವ ವಹಿಸಿದ್ದ ಅವರು ಹಣ ಪಡೆದು ಪ್ರತಿಭಟನೆ ಕೈಬಿಟ್ಟಿದ್ದಾರೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಜೆಡಿಎಸ್‌ ಕಾರ್ಯಕರ್ತರು ಈ ಹಿಂದೆ ಆರೋಪಿದ್ದರು.
Published by:Annappa Achari
First published: