ಬೆಂಗಳೂರು (ಫೆಬ್ರವರಿ 03); ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೋರಾಟದಲ್ಲಿ ನಿರತರಾಗಿರುವ ರೈತ ಸಂಘಟನೆಗಳು ಫೆಬ್ರವರಿ 6ರಂದು ರಾಷ್ಟ್ರವ್ಯಾಪಿ ಚಕ್ಕಾಜಾಮ್ ಹೋರಾಟಕ್ಕೆ ಕರೆ ನೀಡಿವೆ. ಅಂದರೆ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಹೋರಾಟ ಇದಾಗಿದ್ದು ಈ ಹೋರಾಟಕ್ಕೆ ಕುರುಬೂರು ಶಾಂತಕುಮಾರ್ ನೇತತ್ವದ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಇಂದು ಬೆಂಬಲ ಸೂಚಿಸಿದೆ. ಅಲ್ಲದೆ, ತಾವೂ ಈ ಹೋರಾಟದಲ್ಲಿ ಭಾಗಿಯಾಗಿ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ತಿಳಿಸಿದೆ.
ಕೃಷಿ ಕಾಯ್ದೆಯ ವಿರುದ್ಧ ದೇಶದ ರೈತರ ಕಳೆದ ಎರಡು ತಿಂಗಳಿನಿಂದ ಸತತ ಹೋರಾಟ ನಡೆಸುತ್ತಿದ್ದಾರೆ. ಇನ್ನೂ ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿಯ ಹೊರವಲಯದಲ್ಲಿರುವ ಸಿಂಘು ಗಡಿಯಲ್ಲಿ ಹೋರಾಟ ನಿರತರಾಗಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶ ಮಾಡಿದ್ದ ರೈತರು ಜನವರಿ.30 ರಂದು ಉಪವಾಸ ಸತ್ಯಾಗ್ರಹವನ್ನು ಆಚರಿಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ಯಾವ ಹೋರಾಟಕ್ಕೂ ಹೆಚ್ಚು ತಲೆ ಕೆಡಿಸಿಕೊಳ್ಳದ ಕಾರಣ ರೈತ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ದೇಶದಲ್ಲಿ ಒಂದು ದಿನ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆದರೆ, ಕೇಂದ್ರ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗುತ್ತದೆ. ಸರಕು ಸಾಗಾಣೆಗಳು ಸಂಪೂರ್ಣವಾಗಿ ಬಂದ್ ಆಗುವ ಮೂಲಕ ಜನ ಸಾಮಾನ್ಯರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಈ ಹೋರಾಟ ಅನಿರ್ದಿಷ್ಟಾವಧಿ ಮುಂದುವರೆದರೆ ಕೇಂದ್ರ ತಲೆನೋವು ದಿನದಿಂದ ದಿನಕ್ಕೆ ಅಧಿಕವಾಗುತ್ತದೆ. ಇದೇ ಕಾರಣಕ್ಕೆ ರೈತ ಸಂಘಗಳು ಚಕ್ಕಜಾಮ್ ಹೋರಾಟಕ್ಕೆ ಮುಂದಾಗಿವೆ ಎನ್ನಲಾಗುತ್ತಿದೆ.
ಈ ಕುರಿತು ಮಾತನಾಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, "ಫೆಬ್ರವರಿ 6ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಚಕ್ಕಾಜಾಮ್ ಹೋರಾಟ ಹೋರಾಟಕ್ಕೆ ರಾಜ್ಯ ರೈತರು ಸಾಥ್ ನೀಡಲಿದ್ದಾರೆ. ಕಬ್ಬು ಬೆಳೆಗಾರರ ಸಂಘದದಿಂದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದು, ನಾವು ಸಹ ಹೋರಾಟಕ್ಕೆ ಮುಂದಾಗಲಿದ್ದೇವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ