ಭೂಸ್ವಾದೀನ ಕಾಯ್ದೆ ತಿದ್ದುಪಡಿ: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು; ಜೂ.10ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್‌

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರಕ್ಕೆ ರೈತ ಹೋರಾಗಾರರು ಬಹಿರಂಗವಾಗಿಯೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಬಾರಿ ರೈತರು ಹೋರಾಟ ತೀವ್ರಗೊಳಿಸುತ್ತಿರುವುದಕ್ಕೆ ಸರ್ಕಾರ ಮಣಿಯಲಿದೆಯೇ ಎಂದು ಕಾದು ನೋಡಬೇಕಿದೆ.

Ganesh Nachikethu | news18
Updated:June 8, 2019, 3:46 PM IST
ಭೂಸ್ವಾದೀನ ಕಾಯ್ದೆ ತಿದ್ದುಪಡಿ: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು; ಜೂ.10ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್‌
ಸಿಎಂ ಜೊತೆ ಚರ್ಚಿಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್​​
Ganesh Nachikethu | news18
Updated: June 8, 2019, 3:46 PM IST
ಬೆಂಗಳೂರು(ಜೂನ್​​.08): ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಹೋರಾಟಗಾರರು ಬೀದಿಗಿಳಿದು ಪ್ರತಿಭಟಿಸುತ್ತಿದ್ಧಾರೆ. "ತಿದ್ದುಪಡಿ ಮಾಡಲಾದ ಈ ಭೂಸ್ವಾಧೀನ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಜೂನ್ 10ಕ್ಕೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆದ್ದಾರಿ ತಡೆಹಿಡಿದು ಸರ್ಕಾರಕ್ಕೆ ಒತ್ತಡ ಹೇರಲಾಗುವುದು" ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಭೂಸ್ವಾಧೀನ ಕಾಯ್ದೆ(2013) ತಿದ್ದುಪಡಿ ಮಾಡುವ ಮುಖೇನ ರೈತ ವಿರೋಧಿಯಾಗಿದೆ. ಈ ಕಾಯ್ದೆ ತಿದ್ದುಪಡಿ ರೈತರಿಗೆ ವಿಧಿಸಿದ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡುವ ಮೂಲಕ ಸರ್ಕಾರ ಗಮನ ಸೆಳೆಯುತ್ತೇವೆ ಎನ್ನುತ್ತಾರೆ ಕೋಡಿಹಳ್ಳಿ.

ಜಮೀನು ಪಡೆಯುವಾಗ ರೈತರ ಕಡ್ಡಾಯ ಎಂದು ಕಾಯ್ದೆ ಹೇಳುತ್ತದೆ. ಇವರ ಅನುಮತಿ ಮೇರೆಗೆ ಭೂಸ್ವಾಧೀನ ಪಡಿಸಿಕೊಳ್ಳಬೇಕು. ಅವಶ್ಯಕ ಪರಿಹಾರ ಹಣ ನೀಡಬೇಕು. ಒಂದು ವೇಳೆ ಸರ್ಕಾರ ನೀಡಲಾದ ಪರಿಹಾರ ಹಣ ತೃಪ್ತಿಕರವಲ್ಲದಿದ್ದರೇ ರೈತ ನ್ಯಾಯಾಲಯದ ಮೊರೆ ಹೋಗಬಹುದಿತ್ತು. ಆದರೀಗ ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಹಾಗಾಗಿ ನಾವು ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಎಂದು ಹೋರಾಟನಿರತ ರೈತರು ತಮ್ಮ ಆಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್​​ ಮೂರು ದಿನಗಳ ಕೇರಳ ಪ್ರವಾಸ: ಇಂದಿನಿಂದಲೇ ಸಾರ್ವಜನಿಕರ ಅಹವಾಲು ಸ್ವೀಕಾರ

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ಆದರೂ, ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಖಾಸಗಿ ಬ್ಯಾಂಕ್‌ಗಳಿಂದ ನಿರಂತರ ನೋಟಿಸ್‌ಗಳು ಬರುತ್ತಿವೆ. ಇದರಿಂದ ರೈತರು ಮಾನಸಿಕ ಹಿಂಸೆಗೊಳಗಾಗುತ್ತಿದ್ದಾರೆ. ಕೆಲ ಬ್ಯಾಂಕ್‌ ಅಧಿಕಾರಿಗಳು ಬೆಳೆಸಾಲ ಮರು ಪಾವತಿಸುವಂತೆ ಒತ್ತಡ ಹೇರಿ ರೈತರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕಡಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಈಶಾನ್ಯ ಭಾರತದ ಮೊದಲ ರಾಷ್ಟ್ರೀಯ ಪಕ್ಷವೆಂಬ ಹೆಗ್ಗಳಿಕೆ ಪಡೆದ ಎನ್​ಪಿಪಿ
Loading...

ಒಟ್ನಲ್ಲಿ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರಕ್ಕೆ ರೈತ ಹೋರಾಗಾರರು ಬಹಿರಂಗವಾಗಿಯೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಬಾರಿ ರೈತರು ಹೋರಾಟ ತೀವ್ರಗೊಳಿಸುತ್ತಿರುವುದಕ್ಕೆ ಸರ್ಕಾರ ಮಣಿಯಲಿದೆಯೇ ಎಂದು ಕಾದು ನೋಡಬೇಕಿದೆ.
---------
First published:June 8, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...