HOME » NEWS » State » FELICITATED TO TWO FREEDOM FIGHTERS WHO HAVE BEEN PARTICIPATE IN QUIT INDIA MOVEMENT LG

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದ ಧಾರವಾಡದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

ಹುಬ್ಬಳ್ಳಿಯ ಕಿಮ್ಸ್ ದ್ವಾರ ಬಾಗಿಲಿನಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಹಾಗೂೂ ಕಿಮ್ಸ್‌ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ರು. ಶ್ರಮದಾನ ಮಾಡುವ ಮೂಲಕ ಯುವಕರಿಗೆ ಉದ್ಯೋಗ ನೀಡಿ ಎಂದು ಒತ್ತಾಯಿಸಿದರು‌.

news18-kannada
Updated:August 9, 2020, 7:41 PM IST
ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದ ಧಾರವಾಡದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮಾಡಿರುವ ದೃಶ್ಯ
  • Share this:
ಹುಬ್ಬಳ್ಳಿ(ಆ.09): ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವಪೂರ್ಣ ದಿನವಾಗಿರುವ ಆಗಸ್ಟ್ 9 ರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದ ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರನ್ನು ಇಂದು ಸನ್ಮಾನಿಸಲಾಯಿತು.

ರಾಷ್ಟ್ರಪತಿಗಳ ಕಚೇರಿಯಿಂದ ಕಳಿಸಲಾದ  ಶಾಲು, ಹಾರ ಮತ್ತು ಸಂದೇಶ ಪತ್ರಗಳನ್ನು ತಲುಪಿಸಿ ಗೌರವಿಸಲಾಯಿತು. ರಾಷ್ಟ್ರಪತಿಗಳ ಸಂದೇಶದೊಂದಿಗೆ ಜಿಲ್ಲಾಧಿಕಾರಿಗಳ ಪ್ರತಿನಿಧಿಯಾಗಿ ಉಪ ವಿಭಾಗಾಧಿಕಾರಿ ಮಹ್ಮದ ಜುಬೇರ ಅವರು ಸ್ವಾತಂತ್ರ್ಯ ಯೋಧರನ್ನು ಸನ್ಮಾನಿಸಿದರು.

ಹುಬ್ಬಳ್ಳಿಯ ಉಣಕಲ್ ಗ್ರಾಮದ ಟೀಚರ್ಸ್ ಕಾಲೋನಿಯಲ್ಲಿರುವ ಸ್ವಾತಂತ್ರ್ಯ ಯೋಧ ಶ್ರೀರಾಮ ವಿಷ್ಣುಕಾಂತ ತೆಂಬೆ  (99)  ಮತ್ತು ಧಾರವಾಡ ತಾಲೂಕಿನ ಮೊರಬ ಗ್ರಾಮದ ನೂರ್ ಅಹ್ಮದ ನದಾಫ್ ಅವರನ್ನು ಗೌರವಿಸಲಾಯಿತು.

ಕ್ವಿಟ್ ಇಂಡಿಯಾ ಚಳವಳಿಯ  ವಾರ್ಷಿಕೋತ್ಸವದ ಅಂಗವಾಗಿ ಭಾರತ ಸರಕಾರ, ರಾಷ್ಟ್ರಪತಿ ಭವನದಿಂದ ಸ್ವಾತಂತ್ರ್ಯ ಯೋಧರಿಗೆ  ಸನ್ಮಾನ ಮಾಡಲು ನೀಡಿದಂತಹ ಅಂಗವಸ್ತ್ರ, ಶಾಲು ಹಾಗೂ ಅಭಿನಂದನಾ ಪತ್ರಗಳನ್ನು ನೀಡಿ, ರಾಷ್ಟ್ರಪತಿಗಳ ಪರವಾಗಿ ಸನ್ಮಾನಿಸಿ, ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ವಿಷ್ಣುಕಾಂತ ತೆಂಬೆ ಅವರ ಧರ್ಮಪತ್ನಿ, ಮಕ್ಕಳು ಹಾಗೂ ನೂರ್ ಅಹ್ಮದ ನದಾಫ ಅವರ ಮಗಳು ಸೇರಿದಂತೆ ಅವರ ಕುಟುಂಬ ಸದಸ್ಯರು,  ಕಂದಾಯ ಇಲಾಖೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು  ಉಪಸ್ಥಿತರಿದ್ದರು.

ಪ್ರವಾಹ ಸಂತ್ರಸ್ತರಿಗೆ ಆಶ್ರಯ ಕೇಂದ್ರ ಸ್ಥಾಪಿಸಲು ಅಸ್ತು ಎಂದ ಉತ್ತರ ಕನ್ನಡ ಜಿಲ್ಲಾಡಳಿತ

ಯುವ ಕಾಂಗ್ರೆಸ್‌ನಿಂದ ಕ್ವಿಟ್ ಇಂಡಿಯಾ ಚಳುವಳಿ ಸ್ಮರಣೆ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತ ಬಿಟ್ಟು ತೊಲಗಿ ಚಳುವಳಿಯ ದಿನಾಚರಣೆ ಹಾಗೂ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಹುಬ್ಬಳ್ಳಿಯ ಕಿಮ್ಸ್ ದ್ವಾರ ಬಾಗಿಲಿನಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಹಾಗೂೂ ಕಿಮ್ಸ್‌ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ರು. ಶ್ರಮದಾನ ಮಾಡುವ ಮೂಲಕ ಯುವಕರಿಗೆ ಉದ್ಯೋಗ ನೀಡಿ ಎಂದು ಒತ್ತಾಯಿಸಿದರು‌.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ್ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಮಾತನಾಡಿ, ರಾಷ್ಟ್ರದಲ್ಲಿ 30ಕೋಟಿಗೂ ಹೆಚ್ಚು ನಿರುದ್ಯೋಗಿಗಳಿದ್ದಾರೆ. ಕೇಂದ್ರ ಸರ್ಕಾರ ಯುವಕರ ಧ್ವನಿಯನ್ನು ಕಡೆಗಣಿಸಿದೆ. ಸಾವಿರಾರು ಯುವಕರು ನಿರುದ್ಯೋಗದಿಂದ ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಪ್ರತಿ ವರ್ಷ 2ಕೋಟಿ ಉದ್ಯೋಗ ನೀಡುತ್ತೇವೆ ಅಂತ ಸುಳ್ಳು ಭರವಸೆ ಕೊಟ್ಟು ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದೆ. ಆದ್ರೆ ಕೋವಿಡ್-19ನ ಕೆಟ್ಟ ನಿರ್ವಹಣೆಯಿಂದ 12ಕೋಟಿ ಉದ್ಯೋಗ ಇರುವಂತಹ ಯುವಕರು ನಿರುದ್ಯೋಗಿಯಾಗಿದ್ದಾರೆಂದು ಕಟುವಾಗಿ ಟೀಕಿಸಿದರು.

ಈ ಸಂದರ್ಭದಲ್ಲಿ ಸೆಂಟ್ರಲ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಜ್ಮಾನ್ ಮುಜಾಹಿದ್ ಮಾತನಾಡಿ, ಕೇಂದ್ರ ಸರಕಾರ ರೈಲ್ವೆ ಸೇರಿದಂತೆ ಇತರ ಸರ್ಕಾರಿ ಸಂಸ್ಥೆಗಳನ್ನ ಖಾಸಗೀಕರಣ ಮಾಡಿ ಯುವಕರಿಗೆ ಉದ್ಯೋಗದಿಂದ ವಂಚಿತ ಮಾಡುತ್ತಿದೆ ಎಂದರು.
Youtube Video

ವಿದ್ಯಾರ್ಥಿ ಕಾಂಗ್ರೆಸ್ ನ ರಾಷ್ಟೀಯ ಸಂಯೋಜಕರಾದ ಮೊಹಮ್ಮದ್ ಹುಸೇನ್ ಹಾಜಿ, ಮುಖಂಡರಾದ ಮಂಜು ಉಳ್ಳಾಗಡ್ಡಿ, ಸೋಮಲಿಂಗ ಎಲಿಗಾರ್, ಸಮೀರ್ ಖಾನ್, ಮೊಹಮ್ಮದ್ ಪಿಂಜಾರ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪ್ರಕಾಶ್ ಮಾಯ್ಕಾರ, ಕಷಿಂ ಕೂಡ್ಲಗಿ, ಮಣಿಕಂಠ ಗುಡಿಹಾಳ, ವಿನೋದ್ ಬೆಂಡಿಗೇರಿ, ಪಿಯೂಷ್ ಪ್ರಜಾಪತಿ ಚಂದ್ರಶೇಖರ ಈಟಿ, ಲಕ್ಷ್ಮಣ್ ಗಡ್ಡಿ, ಶಂಶೇರ್ ಯರಗಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
Published by: Latha CG
First published: August 9, 2020, 7:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories