ಬೆಂಗಳೂರು (ಏಪ್ರಿಲ್ 09); ಪೆಟ್ರೋಲ್, ಡೀಸೆಲ್ ಮತ್ತು ಅಡಿಗೆ ಅನಿಲಗಳ ಬೆಲೆಯನ್ನು ಸತತವಾಗಿ ಏರಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ರಸಗೊಬ್ಬರಗಳ ಬೆಲೆಯನ್ನೂ ಏರಿಸಿದೆ. ಈಗಾಗಲೇ ವಿವಾದಾತ್ಮಕ ಕೃಷಿ ಕಾನೂನುಗಳ ಮೂಲಕ ರೈತರ ಆಕ್ರೋಶಕ್ಕೆ ಕಾರಣವಾಗಿರುವ ಕೇಂದ್ರ ಸರ್ಕಾರ ಇದೀಗ ರಸಗೊಬ್ಬರಗಳ ಬೆಲೆಯನ್ನೂ ಏರಿಸುವ ಮೂಲಕ ರೈತರ ಗಾಯದ ಮೇಲೆ ಬರೆ ಎಳೆದಿದೆ. ದೇಶದ ಅತಿದೊಡ್ಡ ರಸಗೊಬ್ಬರ ಮಾರಾಟ ಸಂಸ್ಥೆಯಾದ ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ (ಇಪ್ಕೋ) ಗುರುವಾರ ಗೊಬ್ಬರದ ಬೆಲೆಯನ್ನು ಶೇ.45 ರಿಂದ ಶೇ.58ಕ್ಕೆ ಏರಿಸಿದೆ. ಪರಿಣಾಮ ಗೊಬ್ಬರಗಳ ಬೆಲೆ ದುಪ್ಪಟ್ಟಾಗಲಿದೆ. ಈ ಬೆಳವಣಿಗೆ ಇದೀಗ ದೇಶದಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯದ ಯಡಿಯೂರಪ್ಪ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಗುಲಾಮಿಗಳು" ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
4/5#ಬೆಲೆಯೇರಿಕೆ
— Siddaramaiah (@siddaramaiah) April 9, 2021
ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
3/5#ಬೆಲೆಯೇರಿಕೆ
— Siddaramaiah (@siddaramaiah) April 9, 2021
ಕೇಂದ್ರದ ರೈತ ಶತ್ರು @narendramodi ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ.
2/5#ಬೆಲೆಯೇರಿಕೆ
— Siddaramaiah (@siddaramaiah) April 9, 2021
ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ @BJP4India ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ.
1/5#ಬೆಲೆಯೇರಿಕೆ
— Siddaramaiah (@siddaramaiah) April 9, 2021
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ
— Siddaramaiah (@siddaramaiah) April 9, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ