ಬೆಂಗಳೂರು: ನಗರದ ಬೊಮ್ಮನಹಳ್ಳಿಯಲ್ಲಿ (Bommanhalli) ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ (Umapathy, Congress Candidate) ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ (Satish Reddy, BJP Candidate) ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. DSS ಕಚೇರಿಯಲ್ಲಿ ಮತದಾರರಿಗೆ ಹಂಚಲು ಸೀರೆಗಳು (Saree) ಶೇಖರಣೆ ಮಾಡಲಾಗಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದ್ದರು. ದೂರಿನ ಅನ್ವಯ ದಾಳಿ ನಡೆಸಿದಾಗ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪೋಟೋ ಇರೋ ಸೀರೆಗಳು ತುಂಬಿದ್ದ ಬಾಕ್ಸ್ಗಳು (Gift Politics) ತುಂಬಿದ್ದವು.
ದಾಳಿ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳು ಕಾಂಗ್ರೆಸ್ ಕಾರ್ಯಕರ್ತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಕರಾವಳಿಯಲ್ಲಿ ಗೌಡರ ಪ್ರಚಾರ
ಮಂಗಳೂರು ಉತ್ತರ ಕ್ಷೇತ್ರದಲ್ಲಿ (Mangaluru North) ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (Former PM HD Deveghowda) JDS ಅಭ್ಯರ್ಥಿ ಮೊಯುದ್ದೀನ್ ಬಾವ (Mohiuddin Bava) ಪರ ಮತಯಾಚನೆ ಮಾಡಲಿದ್ದಾರೆ.
ಇದನ್ನೂ ಓದಿ: PM Modi: ಮೋದಿ ಹೋದಲ್ಲೆಲ್ಲಾ ಸ್ಪೆಷಲ್ ಸ್ಪೆಷಲ್ ಉಡುಗೊರೆ! ಇವತ್ತು ಏನೆಲ್ಲಾ ಗಿಫ್ಟ್ ಸಿಕ್ತು? ಇಲ್ಲಿದೆ ಮಾಹಿತಿ
ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ, ಬಜ್ಪೆ ಬಲವಂಡಿ, ಗುರುಪುರ ಕಂಬಳ ದರ್ಗಾ ದೇಗುಲಗಳಿಗೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಕೈಕಂಬದಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ