ಸಿನಿಮಾ ಶೂಟಿಂಗ್ ನಡೆಯುವಾಗ ಸಂಭವಿಸಿರುವ ದುರಂತಗಳಲ್ಲಿ ಕಲಾವಿದರು ಸಾವನ್ನಪ್ಪುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಸಾಹಸ ದೃಶ್ಯಗಳ ಚಿತ್ರೀಕರಣ ನಡೆಸುವಾಗ ಚಿತ್ರತಂಡಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೆಲವೊಮ್ಮೆ ಅವಘಡಗಳು ನಡೆದು ಹೋಗುತ್ತವೆ. ಈಗಲೂ ಇಂತಹ ಸಿನಿಮಾ ಚಿತ್ರೀಕರಣದ ವೇಳೆ ನಡೆದ ಅವಘಡದಲ್ಲಿ ಸಾಹಸ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲ್ಲೂಕಿನ ಜೋಗರಪಾಳ್ಯದಲ್ಲಿ ಈ ಘಡನೆ ನಡೆದಿದ್ದು, ಮೃತ ಸಾಹಸ ಕಲಾವಿದನನ್ನು ವಿವೇಕ್ ಎಂದು ಗುರುತಿಸಲಾಗಿದೆ. ಶೂಟಿಂಗ್ ನಡೆಯುವಾಗ ವಿದ್ಯುತ್ ತಂತಿ ತಗುಲಿ 28 ವರ್ಷದ ಕಲಾವಿದ ಕೊನೆಯುಸಿರೆಳೆದಿದ್ದಾನೆ. ಅಜಯ್ ರಾವ್ ಹಾಗೂ ರಚಿತಾ ರಾಮ್ ಅಭಿನಯಿಸುತ್ತಿರುವ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ನಲ್ಲಿ ಘಟನೆ ಈ ಘಟನೆ ನಡೆದಿದೆ. 11 KV ವಿದ್ಯುತ್ ಲೈನ್ ತಗುಲಿ ವಿವೇಕ್ ಸಾವನ್ನಪ್ಪಿದರೆ, ಅವರ ಜೊತೆಗಿದ್ದ ಮತ್ತೊರ್ವ ಕಲಾವಿದವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲವ್ ಯೂ ರಚ್ಚು ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಸಾಹಸ ದೃಶ್ಯದ ಶೂಟಿಂಗ್ ಮಾಡುವಾಗ ಕ್ರೇನ್ನಲ್ಲಿ ಮೇಲೆ ಲಿಫ್ಟ್ ಮಾಡುವಾಗ ವಿದ್ಯುತ್ ತಂತಿ ತಗುಲಿ ಈ ಘಟನೆ ನಡೆದಿದೆ ಎಂದು ಲವ್ ಯೂ ರಚ್ಚು ಸಿನಿಮಾ ನಿರ್ಮಾಪಕ ಗುರು ದೇಶಪಾಂಡೆ ಮಾಹಿತಿ ನೀಡಿದ್ದಾರೆ.
View this post on Instagram
ಇದನ್ನೂ ಓದಿ: Bigg Boss Kannada 8: ದಿವ್ಯಾ ಉರುಡುಗ ಕೈ ಹಿಡಿಯಲಿಲ್ಲ ಅದೃಷ್ಟ: ಅರವಿಂದ್ ಜತೆಗಿನ ಸ್ನೇಹವೇ ಮುಳುವಾಯಿತಾ..!
ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ದೃಶ್ಯದ ಚಿತ್ರೀಕರಣದ ವೇಫೆ ನಾನು ಸ್ಥಳದಲ್ಲಿ ಇರಲಿಲ್ಲ. ವಿವೇಕ್ ಜೊತೆ ಇದ್ದವರಿಗೂ ಶಾಕ್ ಹೊಡೆದಿದೆ ಎಂದು ಮಾಧ್ಯಮ ಒಂದಕ್ಕೆ ನಟ ಅಜಯ್ ರಾವ್ ತಿಳಿಸಿದ್ದಾರೆ. ಇನ್ನು ಸಿನಿಮಾದ ಸಾಹಸ ನಿರ್ದೇಶಕ ವಿನೋದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಜಯ್ ರಾವ್ ಹಾಗೂ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾ ಲವ್ ಯೂ ರಚ್ಚು. ಇದೊಂದು ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವಾಗಿದೆ. ಶಂಕರ್ ರಾಜ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಆರ್ಟ್ ಆಫ್ ಲಿವಿಂಗ್ನ ರವಿ ಸಂಕರ್ ಗುರೂಜಿ ಅವರು ಸಿನಿಮಾಗೆ ಚಾಲನೆ ನೀಡಿದ್ದರು. ಕದ್ರಿ ಅವರು ಸಿನಿಮಾಗೆ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ನವೆಂಬರ್ನಲ್ಲಿ ಶೂಟಿಂಗ್ಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Weight Loss: ಹೆಚ್ಚಿಸಿಕೊಂಡಿದ್ದ 15 ಕೆಜಿ ತೂಕವನ್ನು ಇಳಿಸುವುದು ಕೃತಿ ಸನೋನ್ಗೆ ಸುಲಭವಾಗಿರಲಿಲ್ಲ
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ