ಬೆಂಗಳೂರು (ಮಾ.14): ದೇಶದ್ಯಾಂತ ಭಾರೀ ಸುದ್ದಿಯಾಗಿ, ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಹಿಜಾಬ್ ಪ್ರಕರಣ ಅಂತಿಮಘಟ್ಟ ತಲುಪಿದೆ. ಹಿಜಾಬ್ ಪ್ರಕರಣಕ್ಕೆ (Hijab case) ಸಂಬಂಧಿಸಿದಂತೆ ನಾಳೆ ಹೈಕೋರ್ಟ್ನಲ್ಲಿ(High court) ಅಂತಿಮ ತೀರ್ಪು (Final verdict) ಹೊರಬೀಳಲಿದೆ. ಬೆಳಗ್ಗೆ 10.30ಕ್ಕೆ ಹಿಜಾಬ್ ವಿವಾದದ ಕುರಿತು ತೀರ್ಪು ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಸಮವಸ್ತ್ರದಜತೆಹಿಜಾಬ್ಗೆಅನುಮತಿಕೋರಿಸಲ್ಲಿಸಿದ್ದಅರ್ಜಿಗೆಸಂಬಂಧಿಸಿದಂತೆನಾಳೆ (Tomorrow )ಬೆಳಗ್ಗೆ 10.30ಕ್ಕೆಹೈಕೋರ್ಟ್ಪೂರ್ಣಪೀಠದಿಂದತೀರ್ಪುಹೊರಬೀಳಲಿದೆ. ಸಿಜೆರಿತುರಾಜ್ಅವಸ್ತಿ, ನ್ಯಾಯಮೂರ್ತಿಕೃಷ್ಣಎಸ್.ದೀಕ್ಷಿತ್, ನ್ಯಾ.ಖಾಜಿಜೈಬುನ್ನೀಸಾಮೊಹಿಯುದ್ದೀನ್ ಅವರಪೂರ್ಣಪೀಠತೀರ್ಪುನೀಡಲಿದೆ.
ಸಮವಸ್ತ್ರದಜತೆಹಿಜಾಬ್ಗೆಅನುಮತಿಕೋರಿ ಅರ್ಜಿ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11 ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಕಾಯ್ದಿರಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್ ವಿಚಾರಣೆ ನಡೆಸಿತ್ತು. ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದವನ್ನು ಮಂಡಿಸಿದ್ರು.
ಏನಿದು ಹಿಜಾಬ್ ಪ್ರಕರಣ?
ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧಿಸುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.
ಮಧ್ಯಂತರ ಆದೇಶ ನೀಡಿದ್ದ ಕೋರ್ಟ್
ಈ ಹಿಂದೆ ಹೈಕೋರ್ಟ್ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆಗಳು ನಡೆದಿದ್ದವು.
ಕುತೂಹಲ ಮೂಡಿಸಿದ ಕೋರ್ಟ್ ತೀರ್ಪು
ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಮುಂದುವರೆದಿದ್ದು, ಹಿಜಾಬ್ ತೆಗೆಯುವುದಿಲ್ಲ. ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ. ಎಲ್ಲರ ಜೊತೆ ಹಿಜಾಬ್ ಹಾಕಿಕೊಂಡೆ ಪಾಠ ಪ್ರವಚನ ಕೇಳುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತ್ತಿದ್ದು, ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.
ಹೈಕೋರ್ಟ್ ಸುತ್ತಮುತ್ತ ಹೈ ಅಲರ್ಟ್
ನಾಳೆ ಹಿಜಾಬ್ ತೀರ್ಪು ಹಿನ್ನೆಲೆ ಹೈಕೋರ್ಟ್ ಸುತ್ತಮುತ್ತ ಬಂದೋಬಸ್ತ್ ಗೆ ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಗೆ ಸೂಚನೆ, ಅಂಬೇಡ್ಕರ್ ಗೇಟ್, ಡೈಮಂಡ್ ಜೂಬ್ಲಿ ಗೇಟ್, ಮಹಾರಾಣಿ ಜಂಕ್ಷನ್ ಬಳಿ ಬಂದೋಬಸ್ತ್ ಮಾಡೋದಾಗಿ ಡಿಸಿಪಿ ಅನುಚೇತ್ ಸಭೆಯಲ್ಲಿ ತಿಳಿಸಿದ್ದಾರೆ.
ಒಂದು ವಾರಗಳ ಕಾಲ 144 ಸೆಕ್ಷನ್ ಜಾರಿ
ಹಿಜಾಬ್ ಗೆ ಸಂಬಂಧಿಸಿದಂತೆ ಮುಂಜಾಗೃತ ಕ್ರಮಗಳನ್ನ ತಗೆದುಗೊಳ್ಳಲಾಗಿದೆ. ಇಂದಿನಿಂದ ನಿಷೇದಾಜ್ಙೆ 144 ಸೆಕ್ಷನ್. ಒಂದು ವಾರಗಳ ಕಾಲ ಜಾರಿಯಿದೆ. ನಾಳೆಯಿಂದ 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿರೊದಿಲ್ಲ. ಹೆಚ್ಚುವರಿಯಾಗಿ ಕೆಎಸ್ ಆರ್ಪಿ ತುಕಡಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಸೂಕ್ಷ್ಮ ಪ್ರದೇಶಗಳನ್ನ ಗುರುತಿಸಿ ಬಂದೋಬಸ್ತ್ ಮಾಡಲಾಗುತ್ತೆ. ಬೆಂಗಳೂರು ಜನತೆ ಇಲ್ಲಿವರೆಗೂ ನಮಗೆ ಸಹಕಾರ ನೀಡಿದ್ದೀರಿ ಮುಂದಿನಗಳಲ್ಲೂ ನೀಡಿ ಅಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿಕೊಂಡ್ರು.
Published by:Pavana HS
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ