BDA Scam: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಗ ವಿಜಯೇಂದ್ರ ವಿರುದ್ಧ FIR ದಾಖಲು

ಭ್ರಷ್ಟಾಚಾರ ಆರೋಪದಡಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ನ್ಯಾಯಾಲಯದ ನಿರ್ದೇಶನದಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.

ಬಿವೈ ವಿಜಯೇಂದ್ರ ಮತ್ತು ಬಿ.ಎಸ್.ಯಡಿಯೂರಪ್ಪ

ಬಿವೈ ವಿಜಯೇಂದ್ರ ಮತ್ತು ಬಿ.ಎಸ್.ಯಡಿಯೂರಪ್ಪ

  • Share this:
ಬೆಂಗಳೂರು (ಸೆ.17): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟದ ಕಾಲ ಶುರುವಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ವಸತಿ ಯೋಜನೆಯ ಕಾಮಗಾರಿಯೊಂದರ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, (B S Yediyurappa) ಅವರ ಮಗ ಬಿ ವೈ ಬಿಜಯೇಂದ್ರ (B Y Vijayendra), ಸಹಕಾರ ಸಚಿವ ಎಸ್.ಟಿ ಸೋಮಶೇಖರ್ (S.T Somashekhar) ಸೇರಿದಂತೆ  9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದು (ಸೆಪ್ಟೆಂಬರ್ 17) ಎಫ್ಐಆರ್ (FIR) ದಾಖಲಿಸಿದ್ದಾರೆ.

9 ಮಂದಿ ವಿರುದ್ಧ FIR ದಾಖಲು

ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ ಶ್ರೀ, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಂ, ಐಎಎಸ್ ಅಧಿಕಾರಿ ಡಾ.ಜಿ.ಸಿ. ಪ್ರಕಾಶ್, ಕೆ. ರವಿ ಮತ್ತು ಯಡಿಯೂರಪ್ಪ ಅವರ ಮತ್ತೊಬ್ಬ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಇತರ ಆರೋಪಿಗಳು.

ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಅದರಂತೆ ಲೋಕಾಯುಕ್ತ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

corruption allegations against bs yediyurappa special court orders to file fir pvn
ಬಿ. ಎಸ್.ಯಡಿಯೂರಪ್ಪ


ಏನಿದು ಪ್ರಕರಣ?

ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಹಾಗೂ ಈ ಬಗ್ಗೆ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ಕೊಡುವಂತೆ ಟಿ.ಜೆ.ಅಬ್ರಹಾಂ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿರುವ ಕಾರಣ ಈ ಅರ್ಜಿಯನ್ನು ಪಿಐಎಲ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: B S Yediyurappa: ರಾಜ್ಯ ಪ್ರವಾಸಕ್ಕೆ ಹೊಸ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ

ಅಲ್ಲದೇ ಅರ್ಜಿಯನ್ನು ಮಾರ್ಪಡಿಸಿ ಸೂಕ್ತ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಿಸಿದ್ದರಿಂದ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಪ್ರಕರಣದ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಈ ಎಲ್ಲಾ ಕಾರಣಗಳಿಂದ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ‌ ಕೇಸ್ ಕೂಡಾ ವಿಫಲವಾಗಲಿದೆ- ಬೊಮ್ಮಾಯಿ

ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ‌ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ‌ ಪ್ರತಿಕ್ರಿಯೇ ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್​ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ‌ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: Basavaraj Bommai: ಹೈದ್ರಾಬಾದ್‌ನಲ್ಲಿ ಬಸವರಾಜ ಬೊಮ್ಮಾಯಿಗೆ ಅಪಮಾನ, 40% ಸಿಎಂಗೆ ಸ್ವಾಗತ ಅಂತ ಫ್ಲೆಕ್ಸ್ ಹಾಕಿದ ಟಿಆರ್‌ಎಸ್!

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ‌ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ‌ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Published by:ಪಾವನ ಎಚ್ ಎಸ್
First published: