ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ (Dr CN Ashwath Narayan) ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ನಿಯೋಗದೊಂದಿಗೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ ಮಾಜಿ ಸಚಿವ, ಹಾಲಿ ಶಾಸಕ ಡಾ ಸಿಎನ್ ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ದಾಖಲಿಸಿದ್ದು, ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 506, 153 ರಡಿ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Harish Poonja: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ! ಪ್ರಕರಣ ದಾಖಲು
ಕಳೆದ ವರ್ಷ ಫೆಬ್ರವರಿ ತಿಂಗಳ 14ನೇ ತಾರೀಕಿನಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬಹಿರಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿದ್ದ ಆಗಿನ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್, ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನನನ್ನು ಹೇಗೆ ಕೊಂದು ಹಾಕಿದರೋ ಅದೇ ರೀತಿ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂದು ವಿವಾದಾತ್ಮಕವಾಗಿ ಹೇಳಿದ್ದರು.
ಸಿದ್ದರಾಮಯ್ಯ ವಿರುದ್ಧ ಡಾ ಸಿಎನ್ ಅಶ್ವತ್ಥ್ ನಾರಾಯಣ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಸುದ್ದಿಯಾಗುತ್ತಿದ್ದಂತೆ ಆಗಿನ ಸಚಿವರ ವಿರುದ್ಧ ದೊಡ್ಡಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ನಾಯಕರು ಕೂಡ ಡಾ ಸಿಎನ್ ಅಶ್ವತ್ಥ್ ನಾರಾಯಣ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಗ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧ ಕಡೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಡಾ ಸಿಎನ್ ಅಶ್ವತ್ಥ್ ನಾರಾಯಣ್ ವಿರುದ್ಧ ದೂರುದ ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಇದನ್ನೂ ಓದಿ: Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!
ಹೀಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೀಗ ಮತ್ತೊಮ್ಮೆ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರು ಡಾ ಸಿಎನ್ ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ದಾಖಲಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ