ವಿಟ್ಲದಲ್ಲಿ ಅಗ್ನಿ ಅನಾಹುತ; ಎರಡು ಅಂಗಡಿಗಳು ಬೆಂಕಿಗಾಹುತಿ

ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಈ ರೀತಿ ದುರುಂತ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ

ಅಗ್ನಿ ಅವಘಡ

ಅಗ್ನಿ ಅವಘಡ

  • Share this:
    ದಕ್ಷಿಣ ಕನ್ನಡ (ಅ.20): ಜಿಲ್ಲೆಯ ವಿಟ್ಲದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಸಮೀಪದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ ನಡೆದಿದ್ದು, ಅಂಗಡಿ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಇಲ್ಲಿನ ಕೆಜೆ ಟವರ್ಸ್​ನ ಅಂಗಡಿ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಪಿಎಂ ಹಾರ್ಡ್​ವೇರ್​ ಮತ್ತು ಆಗ್ರೋ ಸಪ್ಲೆಯರ್​ ಅಂಗಡಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ, ಬೆಂಕಿ ತೀವ್ರತೆ ಹೆಚ್ಚಿದ್ದು, ಪರಿಣಾಮ ಪಕ್ಕದ ಬೇಕರಿ ಕೂಡ ಸುಟ್ಟು ಕರಕಲಾಗಿದೆ.    ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಇನ್ನು ಈ ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಈ ರೀತಿ ದುರುಂತ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
    Published by:Seema R
    First published: