ಬೆಳ್ಳಂದೂರು ಕೆರೆ ಧಗಧಗ: ಅಗ್ನಿಶಾಮಕದಳ, ಸೇನಾ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿ


Updated:January 20, 2018, 10:50 AM IST
ಬೆಳ್ಳಂದೂರು ಕೆರೆ ಧಗಧಗ: ಅಗ್ನಿಶಾಮಕದಳ, ಸೇನಾ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿ
  • Share this:
-ನ್ಯೂಸ್ 18 ಕನ್ನಡ

ಬೆಂಗಳೂರು(ಜ.20): ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದಾಗಿ, ಕೆರೆಯ ಮಧ್ಯ ಭಾಗದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.

ರಕ್ಷಣಾ ಪಡೆಗೆ ಸೇರಿದ ಜಾಗದಲ್ಲಿ ಹೆಚ್ಚಾಗಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸ್ಥಳಕ್ಕೆ ದೌಡಾಯಿಸಿದ ಸೇನಾಪಡೆ ಹಾಗೂ ಅಗ್ನಿಶಾಮಕದಳ ಜಂಟಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ನಂದಿಸಿದೆ. ರಾತ್ರಿಯಿಡೀ BDA ಸಿಬ್ಬಂದಿ ಗಸ್ತು ತಿರುಗಿದ್ದು, ಕೆರೆ ಸಮೀಪ ಯಾರೂ ಸುಳಿಯದಂತೆ ಮುನ್ನೆಚ್ಚರಿಕೆ ನೀಡಿದ್ದಾರೆ. ಇದೀಗ ಕೆರೆಯಂಗಳದಲ್ಲಿ ದಟ್ಟಮಂಜುಕವಿದ ವಾತಾವರಣವಿದ್ದು ಬೆಂಕಿ ಹೊಗೆಯಾಗಿ ಮಾರ್ಪಟ್ಟಿದೆ.

ಈ ಹಿಂದೆಯೂ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಆದೇಶ ನೀಡಿತ್ತು. ಆದರೆ, ಮತ್ತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ..
First published:January 20, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading