ಚಲಿಸುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಬೆಂಕಿ​​: ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಂಕಿ ಕಾಣಿಸಿಕೊಂಡ ಕೂಡಲೆ ಬಸ್ಸಿನಿಂದ ಪ್ರಯಾಣಿಕರು ಇಳಿದಿದ್ದಾರೆ. ಬಸ್ಸಿನಲ್ಲಿದ್ದ 30 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಸ್ಥಳಕ್ಕೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮನವಾಗಿದ್ದು ಅಗ್ನಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ

G Hareeshkumar | news18-kannada
Updated:January 21, 2020, 9:58 AM IST
ಚಲಿಸುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಬೆಂಕಿ​​: ಅಪಾಯದಿಂದ ಪಾರಾದ ಪ್ರಯಾಣಿಕರು
ಬೆಂಕಿಗೆ ಆಹುತಿಯಾದ ಬಸ್
  • Share this:
ಚಿತ್ರದುರ್ಗ(ಜ.21) : ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ  ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ  ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ  ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣದಲ್ಲೇ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಐಮಂಗಲ ಗೇಟ್​​ ಬಳಿ ಬಸ್​ ಬರುತ್ತಿರುವಾಗ ಹೊಗೆ ಕಾಣಿಸಿಕೊಂಡಿದೆ. ಹೊಗೆ ಕಂಡು ಚಾಲಕನಿಗೆ ಬೇರೆ ವಾಹನಗಳ ಚಾಲಕರು ತಿಳಿಸಿದ್ದಾರೆ. ಕೂಡಲೇ ಚಾಲಕ ಬಸ್​ ನಿಲ್ಲಿಸಿ, ಪ್ರಯಾಣಿಕರನ್ನು ಬಸ್​​ನಿಂದ ಇಳಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಬಚಾವಾಗಿದ್ದಾರೆ.

ಇದನ್ನೂ ಓದಿ : ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣ: ಎನ್​​​ಐಎ ಅಧಿಕಾರಿಗಳು ಇಂದು ಮಂಗಳೂರಿಗೆ ಭೇಟಿ

ಬಸ್ಸಿನಲ್ಲಿ ಒಟ್ಟು 30 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಸ್ಥಳಕ್ಕೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ಬಸ್​​ ಬೆಳಗಾವಿ ಕೆಎಸ್​ ಆರ್​​ಟಿಸಿ ಡಿಪೋ ಸೇರಿದಾಗಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
First published:January 21, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ