ಮೈಸೂರಿನ ಕಿರು ಅರಣ್ಯಕ್ಕೆ ಬೆಂಕಿ; ಕಿಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ

ಇಂದು ಸಂಜೆ ವೇಳೆಗೆ ಕಾಣಿಸಿಕೊಂಡ ಬೆಂಕಿಯಿಂದಾಗಿ ಇಡೀ ಅರಣ್ಯ ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಕಾಡಿನಲ್ಲಿನ ಪ್ರಾಣಿ ಪಕ್ಷಿಗಳು ದಿಕ್ಕಾಪಾಲಾಗಿ ಓಡಿವೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ.

ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ.

  • Share this:
ಮೈಸೂರು (ಫೆಬ್ರವರಿ. 19); ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿನ ಕಿರು ಅರಣ್ಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಹತ್ತಾರು ಎಕರೆ ಭೂಮಿಯಲ್ಲಿನ ಅರಣ್ಯ ಪ್ರದೇಶವನ್ನು ಬೆಂಕಿಗೆ ಆಹುತಿ ಮಾಡಿದೆ.

ಇಂದು ಸಂಜೆ ವೇಳೆಗೆ ಕಾಣಿಸಿಕೊಂಡ ಬೆಂಕಿಯಿಂದಾಗಿ ಇಡೀ ಅರಣ್ಯ ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಕಾಡಿನಲ್ಲಿನ ಪ್ರಾಣಿ ಪಕ್ಷಿಗಳು ದಿಕ್ಕಾಪಾಲಾಗಿ ಓಡಿವೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ತನಿಖೆ ನಡೆಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕಳೆದ ವರ್ಷ ಬೇಸಿಗೆಯಲ್ಲಿ ಮೈಸೂರು ಬಂಡಿಪುರ ಅಭಯಾರಾಣ್ಯದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಸಾವಿರಾರು ಎಕರೆ ಅರಣ್ಯ ಭೂ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು.

ಇದನ್ನೂ ಓದಿ : ಅನರ್ಹ ಶಾಸಕರನ್ನು ಕೊರೊನಾ ವೈರಸ್ ಗೆ ಹೋಲಿಸಿದ ಕಾಂಗ್ರೆಸ್

First published: