Monkeypox: ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ

ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳೋದಕ್ಕೆ ಅವರು ಬಂದಿದ್ದರು. ಅವರ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳಿದ್ದವು. ಹೀಗೆ ಮಂಕಿಪಾಕ್ಸ್ ಗುಣಲಕ್ಷಣಗಳಿದ್ದ ಕಾರಣ, ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಕಾಣಿಸಿಕೊಂಡಿದ್ದ ಮಂಕಿಪಾಕ್ಸ್ ಪ್ರಕರಣ ( Monkeypox Case), ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಮೊದಲ ಕಿಪಾಕ್ಸ್ ಕೇಸ್ ಇಂದು ಪತ್ತೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು,  ಆಫ್ರಿಕಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣಗಳಿರೋದು (Monkeypox Symptoms) ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು(2 Time Test)  ನಡೆಸಲಾಗಿದೆ ಎಂದಿದೆ.

ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು

ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಅವರು ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳೋದಕ್ಕೆ ಅವರು ಬಂದಿದ್ದರು. ಅವರ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳಿದ್ದವು. ಹೀಗೆ ಮಂಕಿಪಾಕ್ಸ್ ಗುಣಲಕ್ಷಣಗಳಿದ್ದ ಕಾರಣ, ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಮೊದಲ ಮಂಕಿಫಾಕ್ಸ್​ ರೋಗಿ ಗುಣಮುಖ

ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.

ಇದನ್ನೂ ಓದಿ: Monkeypox V/s Marburg Virus: ಮಾನವರಿಗೆ ಯಾವುದು ಮಾರಣಾಂತಿಕ? ಮಂಕಿಪಾಕ್ಸ್ ಅಥವಾ ಮಾರ್ಬರ್ಗ್?

ಕೊಲ್ಲಂನಿಂದ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ ರಾಷ್ಟ್ರೀಯ ವೈರಾಣು ಸಂಸ್ಥೆ ಸೂಚನೆಯಂತೆ 72 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಎರಡು ಬಾರಿಯೂ ಎಲ್ಲಾ ಸ್ಯಾಂಪಲ್ ಗಳಲ್ಲಿ ನೆಗೆಟಿವ್ ವರದಿಯಾಗಿದೆ. ರೋಗಿ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಮೇಲಿನ ದುದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶದಲ್ಲೂ ನೆಗೆಟಿವ್ ವರದಿ

ಆತನ ಕುಟುಂಬ ಸದಸ್ಯರ ಸ್ಯಾಂಪಲ್ ಪರೀಕ್ಷೆ ಫಲಿತಾಂಶದಲ್ಲೂ ನೆಗೆಟಿವ್ ವರದಿಯಾಗಿದೆ. ಪ್ರಸ್ತುತ ಪಾಸಿಟಿವ್ ಕಾಣಿಸಿಕೊಂಡಿದ್ದ ಇತರ ಇಬ್ಬರ ಆರೋಗ್ಯವೂ ಸುಧಾರಿಸಿದೆ. ಇದೇ ರೀತಿಯಲ್ಲಿ ರೋಗ ತಡೆ ಕ್ರಮಗಳು ಮುಂದುವರೆಯಲಿವೆ ಎಂದು ಸಚಿವರು ಹೇಳಿದ್ದಾರೆ. ವಿದೇಶದಿಂದ ಕೇರಳಕ್ಕೆ ಮರಳಿದ್ದ ಕೊಲ್ಲಂ ನಿವಾಸಿಗೆ ಜುಲೈ 14 ರಂದು ಮಂಕಿಪಾಕ್ಸ್ ಲಕ್ಷಣಗಳು ಹಾಗೂ ಪಾಸಿಟಿವ್ ಕಂಡುಬಂದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಭಾರತದಲ್ಲಿ ನಾಲ್ಕು ಮಂಕಿಪಾಕ್ಸ್‌ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸೋಂಕಿತರು ಮತ್ತು ಅವರ ಸಂಪರ್ಕಿತರಿಗೆ ಕೇಂದ್ರ ಸರಕಾರ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯಂತೆ ಸೋಂಕಿಗೆ ತುತ್ತಾದವರು 21 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕಿದೆ.

ಇದನ್ನೂ ಓದಿ: Monkeypox ಸೋಂಕು ಇವರಿ'ಗೇ' ಜಾಸ್ತಿ ಬರೋದಾ? ಸಂಚಲನ ಮೂಡಿಸಿದ WHO ರಿಪೋರ್ಟ್

ಇದರಲ್ಲಿಮಾಸ್ಕ್‌ ಕಡ್ಡಾಯಗೊಳಿಸಲಾಗಿದ್ದು, ಕೈಗಳ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಅದರೊಂದಿಗೆ ದೇಹದಲ್ಲಾದ ಗಾಯಗಳನ್ನು ಬಟ್ಟೆಯಿಂದ ಮುಚ್ಚಿಟ್ಟುಕೊಳ್ಳಬೇಕು ಮತ್ತು ಆ ಗಾಯ ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಯಾರ ಸಂಪರ್ಕಕ್ಕೂ ಬರುವಂತಿಲ್ಲಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿತಿಳಿಸಿದೆ. ಕೇರಳದಲ್ಲಿಈಗಾಗಲೇ ಮೂರು ಮತ್ತು ದೆಹಲಿಯಲ್ಲಿಒಂದು ಮಂಕಿಪಾಕ್ಸ್‌ ಪ್ರಕರಣ ದಾಖಲಾಗಿದೆ. ದೆಹಲಿಯಲ್ಲಿಸೋಂಕಿತನ ಸಂಪರ್ಕದಲ್ಲಿದ್ದವರನ್ನು ಸಹ ಪತ್ತೆ ಹಚ್ಚಲಾಗಿದ್ದು, ಸಂಪರ್ಕಿತರಲ್ಲಿಯಾರೊಬ್ಬರಿಗೂ ಸೋಂಕು ಬಾಧಿಸಿಲ್ಲ ಎಂದು ಸರಕಾರ ತಿಳಿಸಿದೆ.

ಮಂಕಿಪಾಕ್ಸ್‌ ಲಕ್ಷಣಗಳು

ಇದರ ಆರಂಭಿಕ ಲಕ್ಷಣಗಳೆಂದರೆ ಜ್ವರ, ತಲೆನೋವು, ಊತ, ಬೆನ್ನು ನೋವು, ಸ್ನಾಯು ನೋವು ಮತ್ತು ಸಾಮಾನ್ಯ ಆಲಸ್ಯ. ಜ್ವರ ಬಿಟ್ಟ ನಂತರ, ದೇಹದಾದ್ಯಂತ ದದ್ದು ಏಳಬಹುದು. ಈ ದದ್ದುಗಳು ಸಾಮಾನ್ಯವಾಗಿ ಮುಖದ ಮೇಲೆ ಪ್ರಾರಂಭವಾಗುತ್ತದೆ, ನಂತರ ದೇಹದ ಇತರ ಭಾಗಗಳಿಗೆ ಹರಡುತ್ತದೆ, ಸಾಮಾನ್ಯವಾಗಿ ಅಂಗೈಗಳು ಮತ್ತು ಪಾದಗಳ ಅಡಿಭಾಗದಲ್ಲಿ ದದ್ದುಗಳು ಏಳುತ್ತವೆ. ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಜತೆ ಸಂಪರ್ಕಕ್ಕೆ ಬಂದ ವ್ಯಕ್ತಿಗೂ ಸೋಂಕು ಹರಡಬಹುದು.
Published by:Pavana HS
First published: