ಯಾದಗಿರಿ: ಒಂದು ಕಡೆ, ಕೃಷ್ಣಾ (Krishna), ಇನ್ನೊಂದು ಕಡೆ ಭೀಮಾ ನದಿಯ (Bheema River) ಪ್ರವಾಹದ (Flood) ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ (Maharashtra) ಮಹಾಮಳೆಗೆ ಕೃಷ್ಣಾ ಹಾಗೂ ಭೀಮಾನದಿಗೆ ಒಳಹರಿವು ಹೆಚ್ಚಳವಾಗಿದೆ. ಭೀಮಾ ನದಿಗೆ ನೀರಿನ ಒಳಹರಿವು ಹೆಚ್ಚಳವಾಗಿದೆ. ಕಲಬುರಗಿ (Kalburgi) ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದ್ದು, ಯಾದಗಿರಿ (Yadagiri) ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ಭರ್ತಿಯಾಗಿದ್ದು, ಭೀಮಾನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡಲಾಗುತ್ತಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಭೀಮಾನದಿಗೆ ಬಿಟ್ಟಿರುವುದರಿದ ನದಿಪಾತ್ರದ ರೈತರಿಗೆ ಬೆಳೆ ಹಾನಿಯಾಗುವ ಆತಂಕ ಸೃಷ್ಟಿಯಾಗಿದೆ.
ಕಂಗಳೇಶ್ವರ, ವೀರಾಂಜನೇಯ ದೇವಾಲಯಕ್ಕೆ ಜಲದಿಗ್ಭಂದನ
ಭೀಮಾನದಿ ಸಂಪೂರ್ಣವಾಗಿ ಉಕ್ಕಿ ಹರಿಯುತ್ತಿದ್ದು, ಕಳೆದ ವರ್ಷದ ಉಂಟಾದಂತೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ಯಾದಗಿರಿ ನಗರದಿಂದ ಕೆಲವೇ ಕಿಲೋ ಮೀಟರ್ ದೂರದಲ್ಲಿರುವ ಭೀಮಾನದಿಯ ತೀರದಲ್ಲಿರುವ ಕಂಗಳೇಶ್ವರ ಹಾಗೂ ವೀರಾಜನೇಯ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಎರಡು ದೇವಾಲಯದ ಮೂರ್ತಿಗಳು ಸಂಪೂರ್ಣ ಮುಳುಗಡೆಯಾಗಿದ್ದು, ದೇವಾಲಯ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಉಳಿದಿವೆ.
ಕೃಷ್ಣಾ ನದಿಯ ಅಬ್ಬರ ಬಸವೇಶ್ವರ ದೇಗುಲ ಜಲಾವೃತ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು ಕೃಷ್ಣಾ ನದಿ ತೀರದಲ್ಲಿ ಆತಂಕ ಎದುರಾಗಿದೆ.ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಎಂ ಗ್ರಾಮದ ಸಮೀಪದ ಸೇತುವೆ ಸಮೀಪದ ಬಸವೇಶ್ವರ ದೇವಾಲಯ ಜಲಾವೃತವಾಗಿದೆ.
ಕೃಷ್ಣಾ ನದಿ ಪಾತ್ರದಲ್ಲಿ ಆತಂಕ ಎದುರಾಗಿದೆ.ರೈತರು ನದಿ ತೀರಕ್ಕೆ ಹಾಕಿದ್ದ ಪಂಪ್ ಸೇಟ್ ಗಳು ತೆಗೆದಿದ್ದಾರೆ.
ಇದನ್ನೂ ಓದಿ: Karnataka Dams Water Level: ನದಿ ತೀರದ ಗ್ರಾಮಸ್ಥರೇ ಗಮನಿಸಿ, ಇಂದಿನ ಜಲಾಶಯಗಳಿಂದ ನೀರಿನ ಮಟ್ಟ ಹೀಗಿದೆ
ಬಸವಸಾಗರ ಜಲಾಶಯಕ್ಕೆ ಡಿಸಿ, ಶಾಸಕರ ಭೇಟಿ
ನಾರಾಯಣಪುರದ ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಅಧಿಕ ನೀರು ಬಿಟ್ಟಿರುವುದರಿಂದ ಬಸವಸಾಗರ ಜಲಾಶಯಕ್ಕೆ ಸುರಪುರ ಶಾಸಕ ರಾಜುಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕೂಡ ಜಲಾಶಯಕ್ಕೆ ಭೇಟಿ ನೀಡಿ, ವೀಕ್ಷಿಸಿ ನದಿತೀರದ ಗ್ರಾಮಗಳಲ್ಲಿ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜನರ ಮನವಿ ಆಲಿಸಿದ ಡಿಸಿ
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾದರೆ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ಪರಿಶೀಲನೆ ಮಾಡಿದರು. ಜೊತೆಗೆ ಪ್ರತಿ ವರ್ಷ ಪ್ರವಾಹಕ್ಕೆ ಒಳಗಾಗುವ ಮೇಲಿನಗಡ್ಡಿ ಭೇಟಿ ನೀಡಿ, ಅಲ್ಲಿರುವ 20 ಕುಟುಂಬದವರು ವಾಸ ಮಾಡುತ್ತಿದ್ದಾರೆ. ಈ ಗ್ರಾಮದ ಜನ ನಮ್ಮನ್ನು ಸ್ಥಳಾಂತರ ಮಾಡಿ ಎಂದು ಡಿಸಿ ಸ್ನೇಹಲ್ ಆರ್. ಬಳಿ ಮನವಿ ಮಾಡಿಕೊಂಡರು. ಕೃಷ್ಣಾ ತೀರದ ಹಲವು ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದರು.
ಬಿಸಿಯೂಟದ ಬಗ್ಗೆ ಡಿಸಿ ವಿಚಾರಣೆ
ತಿಂಥಣಿ ಗ್ರಾಮಕ್ಕೆ ಕೂಡ ಜಿಲ್ಲಾಧಿಕಾರಿ ಅವರು ಭೇಟಿ ಪರಿಶೀಲನೆ ಮಾಡಿದರು . ಈ ವೇಳೆ ಶಾಲೆಗೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಶಾಲೆಯಲ್ಲಿ ನೀಡಲಾಗುವ ಬಿಸಿಯೂಟ ಯೋಜನೆ ಬಗ್ಗೆ ಡಿಸಿ ಸ್ನೇಹಲ್ ಅವರು ವಿಚಾರಿಸಿದರು.
ಇದನ್ನೂ ಓದಿ: Karnataka Flood: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ; ಸಿಎಂ ಬೊಮ್ಮಾಯಿ
ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಮಾತನಾಡಿ, ಜನರು ಯಾವುದೇ ಕಾರಣಕ್ಕು ನದಿ ತೀರಕ್ಕೆ ತೆರಳಬಾರದು.ಪ್ರತಿಯೊಬ್ಬರೂ ಎಚ್ಚರವಹಿಸಬೇಕು.ಸದ್ಯಕ್ಕೆ ಎನ್ ಡಿ ಆರ್ ಎಫ್ ತಂಡ ತರಿಸುವ ಅವಶ್ಯಕತೆ ಇಲ್ಲ.ನೀರಿನ ಹರಿವಿನ ಪ್ರಮಾಣ ಕಡಿಮೆ ಇದ್ದು ಯಾವುದೇ ಆತಂಕವಿಲ್ಲ.ಆದರೆ. ಜನರು ಎಚ್ಚರಿಕೆಯಿಂದ ಇರಬೇಕೆಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ